ಬೆಂಗಳೂರು, (ಡಿ.27); ಶೀಘ್ರವೇ ರಾಜ್ಯದ ಪ್ರಾಥಮಿಕ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ತಲಾ 2,000 ಮತ್ತು ಪ್ರೌಢಶಾಲೆಗಳಿಗೆ 1,500 ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿ ಸುದ್ದಿ ನೀಡಿದ್ದಾರೆ.
ನೇಮಕಾತಿಗೆ ಸಂಬಂಧಿಸಿ ಹಣಕಾಸು ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಚಿತ್ರಕಲಾ ಶಿಕ್ಷಕರ ನೇಮಕಾತಿಗೂ ಕ್ರಮವಹಿಸಲಾಗುವುದು. ಇನ್ನು ಹಂತ-ಹಂತವಾಗಿ ಇಲಾಖೆಯಲ್ಲಿ ಖಾಲಿಯಿರುವ 40 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….