ಸುರಪುರ, (ಡಿ.11); ಮುಂದಿನ ದಿನಗಳಲ್ಲಿ ವಾಲ್ಮೀಕಿ ಸಮುದಾಯದವರು ರಾಜ್ಯಕ್ಕೆ ಹೊಸ ಸಿಎಂ ಆಗಲಿದ್ದಾರೆಂದು ಸಚಿವ ಬಿ.ನಾಗೇಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಬದಲಾವಣೆಯ ವಿಚಾರ ಮತ್ತೆ ಚರ್ಚೆಗೆ ಬಂದಿದೆ.
ಸುರಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಿ.ನಾಗೇಂದ್ರ, ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಮುದಾಯದ ಎಲ್ಲ ಶಾಸಕರು ಒಗ್ಗಟ್ಟಾಗಿದ್ದು, 3 ಮಂತ್ರಿಗಳು ಕೂಡ ಅವರಿಗೆ ಸಾಥ್ ನೀಡಿ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.
ಜಾರಕಿಹೊಳಿ ದೂರದೃಷ್ಟಿಯ ನಾಯಕರಾಗಿದ್ದು, ಅವರು ಎಲ್ಲರ ಏಳಿಗೆ ಬಯಸುತ್ತಾರೆಂದು ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….