ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮರಾಜನಗರ,(ಸೆ.26): ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ. ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. 

ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದರು. 

ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದರು. 

ಮಹದೇಶ್ವರನ ಬೆಟ್ಟ ಅಧ್ಯಾತ್ಮಿಕ ಮಹತ್ವ ಇರುವ ಪುಣ್ಯ ಸ್ಥಳ. ಶೂದ್ರರು, ಶ್ರಮಿಕರು, ಬಡವರು, ಎಲ್ಲಾ ಜಾತಿಯವರ ಅಧ್ಯಾತ್ಮಿಕ ಕೇಂದ್ರವಾಗಿದೆ. ಈ ಕಾರಣಕ್ಕೇ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ದೆ ಮತ್ತು ಗೌರವ ಇದೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಲೈ ಮಾದೇಶ್ವರನ ದರ್ಶನ ಪಡೆಯುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು. 

ಮುಂದಿನ ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ ಎಂದು  ಮಹತ್ವದ ಘೋಷಣೆ ಮಾಡಿದ ಮುಖ್ಯಮಂತ್ರಿಗಳು ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆಧ್ಯತೆ ನೀಡಿ ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಪಟ್ಟದ ಗುರುಸ್ವಾಮಿಗಳು, ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯ ಸಮ್ಮುಖದಲ್ಲಿ ಅಧ್ಯಕ್ಷತೆಯನ್ನು ಹನೂರು ಶಾಸಕ ಎಂ.ಆರ್.ಮಂಜುನಾಥ್ ವಹಿಸಿದ್ದರು. ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿ ಜಿಲ್ಲೆಯ ಶಾಸಕರು ಮತ್ತು ನಾಯಕರು ಉಪಸ್ಥಿತರಿದ್ದರು.

ರಾಷ್ಟ್ರಪತಿ ಭವನ ಇನ್ನು ಮುಂದೆ ತಪೋಭವನ: ಮಲೈ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಬದಲಾಗಿದೆ. ಇನ್ನು ಮುಂದೆ ಇದು ತಪೋಭವನ. ಮಾದೇಶ್ವರ ತಪಸ್ಸು ಮಾಡಿದ ಶಕ್ತಿ ಕೇಂದ್ರ ಇದು. ಆದ್ದರಿಂದ ಇದನ್ನು ನಾವು ತಪೋಭವನ ಎಂದು ಕರೆಯಬೇಕು. ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮಿಗಳ ಸಲಹೆಯಂತೆ ತಪೋಭವನ ಎಂದು ಬದಲಾಯಿಸಿದ್ದೇವೆ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಹುಬ್ಬಳ್ಳಿ ಪ್ರಕರಣ; ಎನ್ ಕೌಂಟರ್ ಮಾಡಿದ್ದು ಸರಿ – ನಿಖಿಲ್ ಕುಮಾರಸ್ವಾಮಿ

ಹುಬ್ಬಳ್ಳಿ ಪ್ರಕರಣ; ಎನ್ ಕೌಂಟರ್ ಮಾಡಿದ್ದು ಸರಿ – ನಿಖಿಲ್ ಕುಮಾರಸ್ವಾಮಿ

ಹುಬ್ಬಳ್ಳಿ ಪ್ರಕರಣದಲ್ಲಿ ಶೂಟ್ ಔಟ್ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಎರಡು ವರ್ಷಗಳಿಂದ ಅನೇಕ ಘಟನೆಗಳು ನಡೆಯುತ್ತಿವೆ. ಇಂತಹ Nikhil Kumaraswamy

[ccc_my_favorite_select_button post_id="105302"]
ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಮನುವಾದಿಗಳು ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. Cmsiddaramaiah

[ccc_my_favorite_select_button post_id="105290"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
Doddaballapura: ಈಜಲು ಹೋಗಿದ್ದ ಯುವಕ ಸಾವು..!

Doddaballapura: ಈಜಲು ಹೋಗಿದ್ದ ಯುವಕ ಸಾವು..!

ಬಿಸಿಲಿನ ಬೇಗೆ ನೀಗಿಸಿಕೊಳ್ಳಲು ಚಿಕರಾಯಪ್ಪನಹಳ್ಳಿ ಕೆರೆ ಸಮೀಪದ ಸುಮಾರು 15 ಅಡಿಯಷ್ಟು ಆಳದ ನೀರಿದ್ದ ಬಾವಿಯಲ್ಲಿ ಈಜಾಡಲು Doddaballapura

[ccc_my_favorite_select_button post_id="105281"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!