ದೊಡ್ಡಬಳ್ಳಾಪುರ: ಬಿಜೆಪಿಯವರಿಗಿಲ್ಲದ ದಮ್ಮು ತಾಕತ್ತನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೋರಿಸಲಿದ್ದಾರೆ – ಮಾಜಿ ಸಿಎಂ ವೀರಪ್ಪ ಮೊಯ್ಲಿ

ದೊಡ್ಡಬಳ್ಳಾಪುರ, (ಜುಲೈ.03): ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ಇಚ್ಛಾಶಕ್ತಿ ಕಾಂಗ್ರೆಸ್‍ಗೆ ಇದೆ. ಆದರೆ ಕೇಂದ್ರದ ಮೋದಿ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಈಗ ಬಡವರಿಗೆ ನೀಡಬೇಕಾದ ಅಕ್ಕಿಯನ್ನು ಕಿತ್ತುಕೊಂಡು ಎಥನಾಲ್ ತಯಾರಿಕೆಗೆ ನೀಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಟೀಕಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಕಾಂಗ್ರೆಸ್ ನಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಚುನಾವಣಾ ಪೂರ್ವ ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರಂಟಿಗಳನ್ನು ನಿಗದಿತ ಅವಧಿಯಲ್ಲಿಯೇ ಜನರಿಗೆ ತಲುಪಿಸುತ್ತೇವೆ. ಈಗಾಗಲೇ ಎರಡು ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ಆದರೆ ಕೇಂದ್ರ ಸರ್ಕಾರದ ಪ್ರಧಾನಿ ಮೋದಿ ಕೇವಲ ಸುಳ್ಳುಗಳನ್ನು ಹೇಳುತ್ತಿದ್ದಾರೆ.

ವಿಶ್ವಸಂಸ್ಥೆಯಲ್ಲಿ 2030 ರ ವೇಳೆಗೆ  ಹಸಿವು ಮುಕ್ತ ದೇಶ ನಿರ್ಮಾಣ ನಿರ್ಣಯವಾಗಿದ್ದು. ಈ ನಿರ್ಣಯಕ್ಕೆ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಸಹಿ ಹಾಕಿದ್ದು, ನಮ್ಮ ದೇಶದಲ್ಲಿಯೂ ಜಾರಿ ಇದೆ. ಆದರೆ ಕೇಂದ್ರ ಸರ್ಕಾರ ಬಡವರಿಗೆ ನೀಡುವ  29.5 ಲಕ್ಷ ಟನ್ ಅಕ್ಕಿಯನ್ನು ಎಥೆನಾಲ್ ಉತ್ಪಾದನೆಗೆ ಬಳಸಲು ನೀಡಿದೆ. ಬಡವರ ಹಸಿವಿಗಿಂತ ಇವರಿಗೆ ಎಥೆನಾಲ್ ತಯಾರಿಕೆಯೇ ಮುಖ್ಯವಾಗಿದೆ.

ಇದಲ್ಲದೇ 25 ಸಾವಿರ ಟನ್ ಗೋದಾಮಿನಲ್ಲಿ ಹಾಳಾಗುತ್ತಿದೆ. 15 ಲಕ್ಷ ಟನ್ ಖಾಸಗಿಯಾಗಿ ಮಾರಾಟವಾಗುತ್ತಿದೆ. ಮೋದಿ ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲಿ ದೇಶದ ಜನಸಾಮಾನ್ಯರ ಖಾತೆಗೆ 15 ಲಕ್ಷ ರೂ  ಜಮೆ ಮಾಡುತ್ತೇವೆ ಎಂದು ಹೇಳಿ ಈವರೆಗೆ ಮಾಡಿಲ್ಲ. ಉದ್ಯೋಗ ಸೃಷ್ಟಿ ಎಂದು ಹೇಳಿ ಇದ್ದ ಕೆಲಸಗಳನ್ನು ಕೂಡ ಕಿತ್ತಿಕೊಂಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಶೇ.40 ಕಮಿಷನ್ ಭ್ರಷ್ಟಾಚಾರದಿಂದ ಬೇಸತ್ತ ಜನ ಬಿಜೆಪಿಯನ್ನು ಮಲಗಿಸಿದ್ದಾರೆ. ಬಡವರ ಕೈಗೆ ಹಣ ಕೊಟ್ಟರೆ ದ್ವಿಗುಣವಾಗುತ್ತದೆ. ಆದರೆ ಶ್ರೀಮಂತರಿಗೆ ಕೊಟ್ಟರೆ ದಾಸ್ತಾನು ಆಗುತ್ತದೆ. ಇದಕ್ಕೆ ಶಕ್ತಿ ಯೋಜನೆಯೆ ನಿದರ್ಶನವಾಗಿದೆ. ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳ ಲಾಭ ಹೆಚ್ಚಾಗ್ತಿದೆ. ದಮ್ಮು ತಾಕತ್ತು ಬಗ್ಗೆ ಮಾತನಾಡುತ್ತಿದ್ದ ಬಿಜೆಪಿ ಅವರಿಗೆ ಇಲ್ಲದ ನಮ್ಮ ತಾಕತ್ತನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ತೋರಿಸಲಿದ್ದಾರೆ ಎಂದರು.

ಬಯಲು ಸೀಮೆಗೆ ನೀರುಣಿಸುವ 13 ಸಾವಿರ ಕೋಟಿ ರೂಗಳ ಎತ್ತಿನ ಹೊಳೆ ಯೋಜನೆಗೆ  ನಮ್ಮ ಸರ್ಕಾರವಿದ್ದಾಗ ಆದ್ಯತೆ ನೀಡಿತ್ತು. ಆದರೆ ಬಿಜೆಪಿ ಸರ್ಕಾರ ಯಾವುದೇ ಹಣ ಬಿಡುಗಡೆ ಮಾಡಿಲ್ಲ. ಇನ್ನೂ ಬಾಕಿ ಇದ್ದ 3 ಸಾವಿರ ಕೋಟಿ ರೂ ಹಣ ಸಹ ಬಿಡುಗಡೆ ಮಾಡಿಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಶುದ್ದೀಕರಿಸಿದ ನೀರು ಹರಿಸುವ ಎಚ್.ಎನ್  ವ್ಯಾಲಿ, ಕೆ.ಸಿ ವ್ಯಾಲಿ, ವೃಷಭಾವತಿ  ಯೋಜನೆಗಳಿಗೆ ಕಾಂಗ್ರೆಸ್ ಸರ್ಕಾರ ಒತ್ತು ನೀಡಿತ್ತು. ಈ ಯೋಜನೆಗಳನ್ನು ಮುಂದುವರೆಸಲು ಬಜೆಟ್‍ನಲ್ಲಿ ಅಗತ್ಯ ಅನುದಾನವನ್ನು ನೀಡುವಂತೆ ಮನವಿ ಮಾಡಲಾಗಿದೆ ಎಂದರು.

ಈ ವೇಳೆ ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್ ಗೌಡ, ಕೆಪಿಸಿಸಿ ಸದಸ್ಯ ಜಿ. ಲಕ್ಷ್ಮೀಪತಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನ್ನಾಥ್ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಬೈರೇಗೌಡ, ಕಸಬಾ ಅಧ್ಯಕ್ಷ ಅಪ್ಪಿ ವೆಂಕಟೇಶ್, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ರೇವತಿ, ಮುಖಂಡರಾದ ಸಿ.ಡಿ.ಸತ್ಯನಾರಾಯಣಗೌಡ ಮತ್ತಿತರರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

-->

Recent Posts

ರಾಜಕೀಯ

ಹುಬ್ಬಳ್ಳಿ ಪ್ರಕರಣ; ಎನ್ ಕೌಂಟರ್ ಮಾಡಿದ್ದು ಸರಿ – ನಿಖಿಲ್ ಕುಮಾರಸ್ವಾಮಿ

ಹುಬ್ಬಳ್ಳಿ ಪ್ರಕರಣ; ಎನ್ ಕೌಂಟರ್ ಮಾಡಿದ್ದು ಸರಿ – ನಿಖಿಲ್ ಕುಮಾರಸ್ವಾಮಿ

ಹುಬ್ಬಳ್ಳಿ ಪ್ರಕರಣದಲ್ಲಿ ಶೂಟ್ ಔಟ್ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಎರಡು ವರ್ಷಗಳಿಂದ ಅನೇಕ ಘಟನೆಗಳು ನಡೆಯುತ್ತಿವೆ. ಇಂತಹ Nikhil Kumaraswamy

[ccc_my_favorite_select_button post_id="105302"]
ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಮನುವಾದಿಗಳು ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. Cmsiddaramaiah

[ccc_my_favorite_select_button post_id="105290"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
Doddaballapura: ಈಜಲು ಹೋಗಿದ್ದ ಯುವಕ ಸಾವು..!

Doddaballapura: ಈಜಲು ಹೋಗಿದ್ದ ಯುವಕ ಸಾವು..!

ಬಿಸಿಲಿನ ಬೇಗೆ ನೀಗಿಸಿಕೊಳ್ಳಲು ಚಿಕರಾಯಪ್ಪನಹಳ್ಳಿ ಕೆರೆ ಸಮೀಪದ ಸುಮಾರು 15 ಅಡಿಯಷ್ಟು ಆಳದ ನೀರಿದ್ದ ಬಾವಿಯಲ್ಲಿ ಈಜಾಡಲು Doddaballapura

[ccc_my_favorite_select_button post_id="105281"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!