ಬೆಂಗಳೂರು, (ಸೆ.11): ಕಿರುತೆರೆ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದ ಕನ್ನಡದ ನಟ ಕಿರಣ್ ರಾಜ್ ಅವರ ಕಾರು ಅಪಘಾತಕ್ಕಿಡಾಗಿದೆ ಎಂದು ವರದಿಯಾಗಿದೆ.
ನಟ ಕಿರಣ್ ರಾಜ್ ಅವರು ಇದ್ದ ಕಾರು ಕೆಂಗೇರಿ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಿರಣ್ ರಾಜ್ ಅವರ ಎದೆಯ ಭಾಗಕ್ಕೆ ಭಾರೀ ಪೆಟ್ಟು ಬಿದ್ದಿದೆ ಎಂದು ಹೇಳಲಾಗುತ್ತಿದೆ.
ಆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ.
ಕಿರಣ್ರಾಜ್ ಅವರು ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಊಟ ಕೊಡಲು ಕಾರಿನಲ್ಲಿ ಹೋಗ್ತಿದ್ದ ವೇಳೆ ರಸ್ತೆಗೆ ಅಡ್ಡಲಾಗಿ ಬಂದಿದ್ದ ಮುಂಗುಸಿ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಕಾರು ಗುದ್ದಿದ ರಭಸಕ್ಕೆ ಕಾರಿನ ಮುಂಭಾಗದ ಟೈರ್ ಬಂಪರ್ ಕಟ್ ಆಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….