ಕುಮಾರಸ್ವಾಮಿ, ಯಡಿಯೂರಪ್ಪ ನನ್ನನ್ನು ಮುಗಿಸ್ತೀನಿ ಅಂದುಕೊಂಡಿದ್ದರೆ ಅದು ಅವರ ಮೂರ್ಖತನ: ಕೆರಳಿದ ಸಿಎಂ

ಕಲಬುರಗಿ, (ಸೆ 16): ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್ ಯಡಿಯೂರಪ್ಪ ನನ್ನನ್ನು ಮುಗಿಸ್ತೀನಿ ಅಂದುಕೊಂಡಿದ್ದರೆ ಅದು ಅವರ ಮೂರ್ಖತನ. ನನ್ನನ್ನು ಅಷ್ಟು ಸುಲಭ ಅಂದುಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು BJP ಮತ್ತು JDS ನಾಯಕರಿಗೆ ನೇರ ಸವಾಲೆಸೆದರು.

ಕಲಬುರಗಿ ತಾಲ್ಲೂಕಿನ‌ ಕವಲಗಿ (ಕೆ) ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಜಯಂತ್ಸೋತ್ಸವವನ್ನು ಉದ್ಘಾಟಿಸಿ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಬ್ರಿಟೀಷರ ಜೊತೆ ನಮ್ಮವರು ಕೈಜೋಡಿಸಿದ್ದರಿಂದಲೇ 200 ವರ್ಷ ಗುಲಾಮಗಿರಿ ಅನುಭವಿಸಿದೆವು. ಸಂಗೊಳ್ಳಿ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟವರು ನಮ್ಮವರೇ ಆದ ಮನೆ ಮುರುಕರು. ನಮ್ಮ ಸಮಾಜದಲ್ಲೇ ಇಂಥಹ ಮನೆ ಮುರುಕರು ಹಿಂದೆಯೂ ಇದ್ದರು. ಮುಂದೆಯೂ ಇರುತ್ತಾರೆ. ಇಂಥವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದರು. 

ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಬಡವರ, ಮದ್ಯಮ ವರ್ಗದವರ ಕಲ್ಯಾಣಕ್ಕೆ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದಕ್ಕೆ ಪಟ್ಟಭದ್ರರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

40 ವರ್ಷದಿಂದ ಸಣ್ಣ ತಪ್ಪು ಮಾಡದವನು ಈಗ ಮಾಡ್ತೀನಾ? ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡಲ್ಲ. 

ಮುಡಾ ಪ್ರಕರಣದಲ್ಲಿ ಏನೇನೂ ಇಲ್ಲ. ಆದರೂ BJP, JDS ನಾಯಕರು ಡೆಲ್ಲಿಯಿಂದ ರಾಜಭವನದವರೆಗೂ ಪಿತೂರಿ ಹೆಣೆಯುತ್ತಿದ್ದಾರೆ. ಇದರಲ್ಲಿ ಅವರು ಯಶಸ್ವಿ ಆಗಲು ಬಿಡಬಾರದು. ಸಂಗೊಳ್ಳಿರಾಯಣ್ಣನ ಹೋರಾಟದ ಕಿಚ್ಚು ನಮ್ಮೊಳಗಿದೆ ಎಂದು ಎಚ್ಚರಿಸಿದರು. 

ಡಾ.ಬಾಬಾ ಸಾಹೇಬರು ಕೊಟ್ಟ ಸಂವಿಧಾನದಿಂದಾಗಿ ನಾನು ಮುಖ್ಯಮಂತ್ರಿ‌ ಆಗಿದ್ದೇನೆ. ಬಾಬಾ ಸಾಹೇಬರ ಆಶಯದಂತೆ ನಾನು ಎಲ್ಲಾ ಜಾತಿ, ಜನ ವರ್ಗಗಳಿಗೆ, ಮಹಿಳೆಯರಿಗೆ ಆರ್ಥಿಕ‌ ಶಕ್ತಿ ನೀಡುತ್ತಿದ್ದೇನೆ ಎಂದರು. 

ದೇಶದಲ್ಲಿ ಆಹಾರ ಭದ್ರತೆ ಕಾಯ್ದೆ ಜಾರಿಗೆ ಬಂದಿದ್ದು ಕಾಂಗ್ರೆಸ್ ಅವಧಿಯಲ್ಲಿ. ನಾವು ನಮ್ಮ ಜನರಿಗೆ 5 ಕೆಜಿ ಹೆಚ್ಚುವರಿ ಅಕ್ಕಿ ಕೊಡಬೇಕು ಎಂದು ತೀರ್ಮಾನಿಸಿದರೆ ನರೇಂದ್ರ ಮೋದಿಯವರು ಅಕ್ಕಿ ಕೊಡಲು ಬಿಡಲಿಲ್ಲ. ಅದಕ್ಕಾಗಿ ನಾವು ಅಕ್ಕಿ ಬದಲಿಗೆ 5kg ಅಕ್ಕಿಯ ಹಣ ಕೊಡುತ್ತಿದ್ದೇವೆ ಎಂದರು.

ಇಷ್ಟೆಲ್ಲಾ ಕಾರ್ಯಕ್ರಮಗಳನ್ನು ನಾನು ಕೊಡುತ್ತಿರುವುದರಿಂದ ನನ್ನನ್ನು ಮುಗಿಸಲು ಯತ್ನಿಸುತ್ತಿದ್ದಾರೆ. ಅವರ ಯತ್ನ ಸಕ್ಸಸ್ ಆಗಲು ಬಿಡಬೇಡಿ ಎಂದು ಕರೆ ನೀಡಿದರು. 

ಪಟ್ಟಭದ್ರ ಹಿತಾಸಕ್ತಿಗಳೇ ರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟರು, ಬಸವಣ್ಣನವರನ್ನು ಆಸ್ಥಾನದಿಂದ ಓಡಿಸಿಬಿಟ್ಟರು. ಹೀಗಾಗಿ ಈ BJP ಮತ್ತು JDS ನವರ ಬಗ್ಗೆ ಎಚ್ಚರದಿಂದ ಇರಿ ಎಂದು ಕರೆ ನೀಡಿದರು. 

ನಾನು ಹಿಂದುಳಿದ ಸಮಾಜದಲ್ಲಿ ಜನಿಸಿ ಬಡತನ ಅಂದರೆ ಏನು, ಗ್ರಾಮಗಳ ಸ್ಥಿತಿ ಹೇಗಿದೆ ಎಂದು ಅರ್ಥಮಾಡಿಕೊಂಡಿದ್ದೇನೆ. ಬಡತನ ಹೋಗಲಾಡಿಸಲು ಕಾರ್ಯಕ್ರಮ ರೂಪಿಸುತ್ತಿದ್ದೇನೆ ಎಂದರು.

ಕಲಬುರಗಿಯ ಕವಲಗಿಯ 14 ಹಳ್ಳಿಗಳಿಗೆ ಅನುಕೂಲ ಆಗುವ ಏತ ನೀರಾವರಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಶಾಸಕರಾದ ಎಂ.ವೈ.ಪಾಟೀಲರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವರಾದ ಬೈರತಿ ಸುರೇಶ್, ಶರಣ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್, ಮಾಲೀಕಯ್ಯ ಗುತ್ತೇದಾರ್ ಸೇರಿದಂತೆ ಜಿಲ್ಲೆಯ ಶಾಸಕರು, ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

ಕಾರ್ಯಕ್ರಮ ತಿಂಥಣಿ ಕಾಗಿನೆಲೆ ಪೀಠದ ಜಗದ್ಗುರು ಸಿದ್ದರಾಮಾನಂದಪುರಿ ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

Doddaballapura: ನ್ಯಾಯಾಲಯದ ಆವರಣದಲ್ಲಿ ಸಂಭ್ರಮದ ರಾಜ್ಯೋತ್ಸವ – ವಕೀಲರ ದಿನಾಚರಣೆ.!

Doddaballapura: ನ್ಯಾಯಾಲಯದ ಆವರಣದಲ್ಲಿ ಸಂಭ್ರಮದ ರಾಜ್ಯೋತ್ಸವ – ವಕೀಲರ ದಿನಾಚರಣೆ.!

ಅನ್ಯ ಭಾಷೆಯಿಂದ ನಮ್ಮ ಭಾಷೆಗೆ ಅನುವಾದ ಮಾಡುವಾಗ ನಮ್ಮ ಭಾಷೆ ಮೇಲಿನ ಹಿಡಿತ ಸಾಧಿಸಿರುವುದು ಮುಖ್ಯವಾಗುತ್ತದೆ. Doddaballapura

[ccc_my_favorite_select_button post_id="99213"]
ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ಮತ್ತೆ ದರ್ಶನ್ ಬೆನ್ನಿಗೆ ಬಿದ್ದ ಖಾಸಗಿ ಸುದ್ದಿ ವಾಹಿನಿಗಳು..!: ಸುಳ್ಳು ಸುದ್ದಿ ಮಾಡಬೇಡಿ ಎಂದು ಅಭಿಮಾನಿಗಳ ಆಕ್ರೋಶ| Darshan

ಮತ್ತೆ ದರ್ಶನ್ ಬೆನ್ನಿಗೆ ಬಿದ್ದ ಖಾಸಗಿ ಸುದ್ದಿ ವಾಹಿನಿಗಳು..!: ಸುಳ್ಳು ಸುದ್ದಿ ಮಾಡಬೇಡಿ

ಕೆಲ ಖಾಸಗಿ ಸುದ್ದಿವಾಹಿನಿಗಳ ಬಗ್ಗೆ ಮಾಜಿ ಲೋಕಾಯುಕ್ತರಾದ ಸಂತೋಷ್ ಹೆಗಡೆ, ಗೃಹಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ Darshan

[ccc_my_favorite_select_button post_id="99206"]
Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. Accident

[ccc_my_favorite_select_button post_id="99186"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]