![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ಅಮರಾವತಿ, (ಸೆ.20); ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿತ್ತು. ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ. ಹಿಂದಿನ ವೈಎಸ್ ಆರ್ ಕಾಂಗ್ರೆಸ್ ಸರಕಾರದ ಅವಧಿಯಲ್ಲೇ ಈ ಪ್ರಮಾದ ನಡೆದಿದೆ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸರಕಾರವಿದ್ದಾಗಲೇ ತಿರುಪತಿ ಲಡ್ಡು ಪ್ರಸಾದ ತಯಾರಿಸಲು ಹಸುವಿನ ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಿದ ತೈಲ ಬಳಸಲಾಗುತ್ತಿತ್ತು. ಕಳಪೆ ಗುಣಮಟ್ಟದ ವಸ್ತುಗಳಿಂದ ಲಡ್ಡು ಪ್ರಸಾದ ತಯಾರಿಸಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ; Breaking news; ದೊಡ್ಡಬಳ್ಳಾಪುರ BEO ವಿರುದ್ಧ ಶಿಸ್ತುಕ್ರಮಕ್ಕೆ CEO ಶಿಫಾರಸ್ಸು..!
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)
ಈಗ ಹಸುವಿನ ಶುದ್ಧ ತುಪ್ಪದಲ್ಲೇ ಲಡ್ಡು ಪ್ರಸಾದ ತಯಾರಿಸಲಾಗುತ್ತಿದೆ, ದೇವಾಲ ಯವನ್ನು ಸಮಗ್ರವಾಗಿ ಶುದ್ದೀಕರಿಸಲಾ ಗಿದೆ, ಪ್ರಸಾದದ ಗುಣಮಟ್ಟದಲ್ಲೂ ಸುಧಾರಣೆ ತರಲಾಗಿದೆ ಎಂದು ನಾಯ್ಡು ಹೇಳಿದ್ದಾರೆ.
ಈ ವಿಚಾರವಾಗಿ ಆಂಧ್ರಪ್ರದೇಶ ಮಾಹಿತಿ ತಂತ್ರಜ್ಞಾನ ಸಚಿವ ನಾರಾ ಲೋಕೇಶ್, ಮಾಜಿ ಸಿಎಂ ವೈ.ಎಸ್.ಜಗನ್ ಮೋಹನ್ ರೆಡ್ಡಿ ಗುರಿಯಾಗಿಸಿ ಎಕ್ಸ್’ನಲ್ಲಿ ವಾಗ್ದಾಳಿ ನಡೆಸಿದ್ದಾರೆ. ವೈಎಸ್‌ಆರ್‌ಸಿಪಿ ಸರಕಾರ ಭಕ್ತರ ಧಾರ್ಮಿಕ ಭಾವನೆಗೆ ಸ್ವಲ್ಪವೂ ಗೌರವ ಕೊಡಲಿಲ್ಲ. ದೇವರ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸಿದ್ದ ವಿಚಾರ ಆಘಾತಕಾರಿ. ಜಗನ್ ಮತ್ತು ವೈಎಸ್‌ಆರ್ಪಿ ಪಕ್ಷಕ್ಕೆ ನಾಚಿಕೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಬಿಐ ತನಿಖೆ ಆಗಲಿ: ಸಿಎಂ ಆರೋಪದಲ್ಲಿ ರಾಜಕೀಯ ಇಲ್ಲದಿದ್ದರೆ ಉನ್ನತ ಮಟ್ಟದ ಸಮಿತಿ ರಚಿಸಿ ತನಿಖೆ ನಡೆಸಬೇಕು ಅಥವಾ ಪ್ರಕರಣ ಸಿಬಿಐಗೆ ನೀಡಿ. ಸಿಎಂ ಆರೋ ಪದಿಂದ ಕೋಟ್ಯಾಂತರ ಭಕ್ತರ ನಂಬಿಕೆ ಕುಸಿದು ಬಿದ್ದಿದೆ ಎಂದು ಆಂಧ್ರ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷೆ ವೈ.ಎಸ್.ಶರ್ಮಿಳಾ ಕಿಡಿಕಾರಿದ್ದಾರೆ.