ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಆಗಬೇಕು ಮತ್ತು ಸಿಎಂ ರಾಜೀನಾಮೆ ನೀಡುವಂತೆ ಆಗ್ರಹಿಸಿ ರಾಜಧಾನಿಯಲ್ಲಿ ಇಂದು ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಪ್ರಶ್ನಿಸಲು ಮುಂದಾದ ಖಾಸಗಿ ಸುದ್ದಿವಾಗಿನಿ ವರದಿಗಾರನ ಸಿಎಂ ಗದರಿದ್ದು, ಹೇಳಿಕೆ ಕೊಡಲು ನಿರಾಕರಿಸಿದ್ದಾರೆ.
ಆಮೇಲೆ ಬೇಕಾದಾಗ ಫೋನ್ ಮಾಡಿ ಹೇಳುತ್ತೇನೆ ಎಂದು ಮಾಧ್ಯಮದವರಿಗೆ ಸಿಎಂ ಹೇಳಿದ್ದಾರೆ.
ಸಿಎಂ ಮುಡಾ ಪ್ರಕರಣ ಸಂಬಂಧ ಇಂದು ಬಿಜೆಪಿ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು, ಎಂಎಲ್‌ಸಿಗಳು ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರು ಭಾಗವಹಿಸಿದ್ದರು.
ಮುಡಾ ಪ್ರಕರಣ ಮತ್ತು ಎಸ್‌ಟಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ನಡೆದಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಹಾಗೂ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಬಿಜೆಪಿ ಆಗ್ರಹಿಸಿದೆ.
ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಮುಖ್ಯಮಂತ್ರಿಗಳು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಮತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದ್ದಾರೆ.