ದೊಡ್ಡಬಳ್ಳಾಪುರದಲ್ಲಿ ಎತ್ತಿನಹೊಳೆ ನೀರು ಸಂಗ್ರಹಕ್ಕೆ 5 ಸಾವಿರ ಎಕರೆ ಭೂಮಿ ಪ್ರಸ್ತಾಪ‌; ಡಿಸಿಎಂ ಜೊತೆ ಚರ್ಚೆ ಎಂದ ಗೃಹ ಸಚಿವ ಪರಮೇಶ್ವರ

ಬೆಂಗಳೂರು: ಎತ್ತಿನಹೊಳೆ ಯೋಜನೆ ವಿಚಾರವಾಗಿ ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಗಮಿಸಿದ್ದರು.‌ ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿ ಕೆಲಕಾಲ ಚರ್ಚಿಸಿದರು. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಗೃಹ ಸಚಿವ ಜಿ.ಪರಮೇಶ್ವರ ಅವರು ಮಾತನಾಡಿದರು.

ಎತ್ತಿನಹೊಳೆ ಯೋಜನೆ ವೇಗವಾಗಿ ಆಗುತ್ತಿಲ್ಲ.‌ ಹಣ ಬಿಡುಗಡೆ ಆಗಬೇಕಿದೆ. ದೊಡ್ಡಬಳ್ಳಾಪುರದಲ್ಲಿ ನೀರು ಸಂಗ್ರಹಕ್ಕೆ ಐದು ಸಾವಿರ ಎಕರೆ ಭೂಮಿ ಪ್ರಸ್ತಾಪ‌ ಮಾಡಲಾಗಿತ್ತು. ಅದರಲ್ಲಿ 2500 ಎಕರೆ ಭೂಮಿ ಕೊರಟಗೆರೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ.‌ ಹಿಂದಿನ ಸರ್ಕಾರ ಇದನ್ನು ಬದಲಾಯಿಸಿ, ನಿಲ್ಲಿಸಿತ್ತು. ಅದು ಆಗಬಾರದು ಎಂಬ ಚರ್ಚೆ ನಡೆಯುತ್ತಿತ್ತು. ಮುಂದಿನ ವರ್ಷಕ್ಕಾದರು ಜಿಲ್ಲೆಗೆ ನೀರು ಬರಬೇಕು.‌ ಈ ಬಗ್ಗೆ ಚರ್ಚಿಸಲು ಭೇಟಿ ಮಾಡುವುದಾಗಿ ಡಿಸಿಎಂ‌ ಅವರಿಗೆ ಹೇಳಿದ್ದೆ. ಡಿಸಿಎಂ ಅವರು ನಾನೇ ಬರುತ್ತೇನೆ, ಮಾತಾಡೋಣ ಎಂದಿದ್ದರು.‌ ಬನ್ನಿ ಎಂದು ಕರೆದಿದ್ದೆ ಎಂದು ತಿಳಿಸಿದರು.

ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಿದ್ದಾರೆ. ನಾವು ಮಾತಾಡಿಕೊಳ್ಳದಿದ್ದರೆ ಇನ್ನ್ಯಾರು ಮಾತಾಡಿಕೊಳ್ಳಬೇಕು? ನಮ್ಮ ಸಮಸ್ಯೆಗಳ ಬಗ್ಗೆ ನಾವೇ ಚರ್ಚೆ ಮಾಡಬೇಕು. ನಾನು‌ ಮತ್ತು ಡಿಕೆ ಶಿವಕುಮಾರ್ ಅವರು ಹೊಸದಾಗಿ ಭೇಟಿ ಆಗುತ್ತಿದ್ದೇವೆಯೇ? ಎಂದು ಪ್ರಶ್ನಿಸಿದರು.

ಡಿಸಿಎಂ ಭೇಟಿಯನ್ನು ಬೇರೆ ರೀತಿಯ ದೃಷ್ಟಿಕೋನದಲ್ಲಿ‌ ನೋಡಬೇಕಿಲ್ಲ. ನಮ್ಮ‌ ಕೆಲಸ ಕಾರ್ಯಗಳಾಗಬೇಕಾಗುತ್ತದೆ. ಗುಬ್ಬಿಯಿಂದ‌ ಕುಣಿಗಲ್‌ವರೆಗೆ ಎಕ್ಸ್‌ಪ್ರೆಸ್ ಕೆನಲ್ ಮಾಡಲು ಅನುಮತಿ ಸಿಕ್ಕಿದೆ.‌ ಕೆಲಸ‌ ಆರಂಭಿಸುವಾಗ ಜನರು ತಡೆದಿದ್ದಾರೆ. ಈ ಬಗ್ಗೆಯೂ ಚರ್ಚಿಸಲಾಗಿದೆ. ನೀರಾವರಿ ಸಚಿವರಾದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಾಂತ್ರಿಕ ಸಮಿತಿ ಮಾಡಿದ್ದಾರೆ.‌ ಅದರ ವರದಿ ಕೊಟ್ಟಮೇಲೆ ಮುಂದುವರಿಯುತ್ತದೆ. ಭೇಟಿ‌ಮಾಡುವುದರನ್ನು ಬೇರೆಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಯತ್ನಾಳ್ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿ, ನಾನು ಸಾವಿರ ಕೋಟಿ ರೂ.ಪಾಯಿ ನೋಡಿಲ್ಲ. ಸರ್ಕಾರ ಅಸ್ಥಿರಗೊಳಿಸಲು ಸಾವಿರ ಕೋಟಿ ರೂ. ಎಲ್ಲಿಟ್ಟಿದ್ದಾರೆ ಎಂಬುದನ್ನು ಯತ್ನಾಳ್ ಅವರನ್ನೇ‌ ಕೇಳಬೇಕು. ಸಾವಿರ ಕೋಟಿ ಎಲ್ಲಿಟ್ಟಿದ್ದಾರೆ ಎಂಬುದರ ಬಗ್ಗೆ ತನಿಖೆಯಾಗಬೇಕು. ಸುಮೋಟೋ ದಾಖಲಿಸುವ ಬಗ್ಗೆ ಪರಿಶೀಲಿಸಲಾಗುವುದು.‌ ಸಂದರ್ಭ ಬಂದರೆ ದಾಖಲಿಸಬೇಕಾಗುತ್ತದೆ ಎಂದು ತಿಳಿಸಿದರು.

ಜಿಗಣಿಯಲ್ಲಿ ಬಾಂಗ್ಲಾ‌ ಪ್ರಜೆಗಳ ಬಂಧನ:
ನನಗೆ ಬಂದಿರುವ ಮಾಹಿತಿ ಪ್ರಕಾರ ಹತ್ತು ವರ್ಷದಿಂದ ಭಾರತದಲ್ಲಿದ್ದಾರೆ. ನಾಲ್ವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಯಾವ ಉದ್ದೇಶದಿಂದ ಬೆಂಗಳೂರಿಗೆ ಬಂದಿದ್ದರು ಎಂಬುದು ಹೊರಬರಲಿದೆ. ಹತ್ತು ವರ್ಷದ ಹಿಂದೆ ಭಾರತಕ್ಕೆ ಬಂದಿದ್ದರು ಎಂಬುದು ಸತ್ಯವಾಗಿದ್ದರೆ, ಕೇಂದ್ರ ಗುಪ್ತದಳದ ಗಮನಕ್ಕೆ ಬರಲಿಲ್ಲ.‌ ಬಂಧಿತರು ಪಾಸ್‌ಪೋರ್ಟ್ ಮಾಡಿಸಿಕೊಳ್ಳುವ ಮಟ್ಟಕ್ಕೆ ಹೋಗಿದ್ದರು. ಹೆಸರು ಬದಲಾಯಿಸಿಕೊಂಡಿದ್ದಾರೆ. ತನಿಖೆಯಲ್ಲಿ ಏನೆಲ್ಲ ಮಾಹಿತಿಗಳು ಹೊರಬರುತ್ತವೆ ಎಂಬುದನ್ನು ನೋಡೋಣ ಎಂದು ತಿಳಿಸಿದರು.

ಬಹಳ ಜನ ಬಾಂಗ್ಲಾ ದೇಶದವರು ಬಂದಿದ್ದಾರೆ. ಪ್ರತಿನಿತ್ಯ ಹಿಡಿದು ವರದಿ ನೀಡುತ್ತಿದ್ದೇವೆ. ಬಾಂಗ್ಲಾ ಗಡಿಯಲ್ಲಿ ನುಸುಳದಂತೆ ಬಂದೋಬಸ್ತ್ ಹೆಚ್ಚಿಸಬೇಕು. ಕೇಂದ್ರ ಸರ್ಕಾರದ ಗಮನಕ್ಕೆ‌ ತುರವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಬಾಂಗ್ಲಾ ದೇಶದ ಹೈಕಮೀಷನ್‌ಗು ತಿಳಿಸುತ್ತಿದ್ದೇವೆ ಎಂದರು.

ಫ್ರೇಜರ್‌ಟೌನ್‌ನಲ್ಲಿ‌ ಪೊಲೀಸ್ ಮನೆಗಳ ದುಸ್ಥಿತಿಯನ್ನು ಪರಿಶೀಲಿಸಲು ಹಿರಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸುತ್ತೇನೆ.‌ ಸಾಧ್ಯವಾದರೆ ಖುದ್ದಾಗಿ ಭೇಟಿ ನೀಡಿ, ಸೂಕ್ತ ನಿರ್ದೇಶನ‌ ನೀಡುತ್ತೇನೆ ಎಂದು ತಿಳಿಸಿದರು.

ಹಿರಿಯ ಅಧಿಕಾರಿ ಏನು ಪದ ಬಳಕೆ ಮಾಡಿದ್ದಾರೆ. ಬರ್ನಾಡ್ ಷಾ ಆ ರೀತಿ ಹೇಳಿದ್ದಾರೆ ಅಂತ‌ ಹೇಳಿದ್ದಾರೆಯೇ ಹೊರತು, ಕುಮಾರಸ್ವಾಮಿ ಅವರಿಗೆ ರೆಫರ್ ಮಾಡಿ ಹೇಳಿಲ್ಲವಲ್ಲ. ನಮಗ ಓದುವುದಕ್ಕೆ ಬರಬೇಕಲ್ಲ. ಓದುವುದಕ್ಕೆ, ಅರ್ಥ ಮಾಡಿಕೊಳ್ಳಲು ಬಂದರೆ ಈ ರೀತಿ ಪ್ರಶ್ನೆಯೇ ಬರುವುದಿಲ್ಲ ಎಂದರು.

ಬರ್ನಾಡ್ ಷಾ ಹೇಳಿರುವುದನ್ನು ಉಲ್ಲೇಖಿಸಿದ್ದಾರೆ. ಕುಮಾರಸ್ವಾಮಿ ಅವರು ನನಗೆ ಅನ್ವಯಿಸುತ್ತದೆ ಎಂದು ಯಾಕೆ ಅಂದುಕೊಳ್ಳಬೇಕು. ಗಾದೆಮಾತು, ನಾಣ್ಣುಡಿ, ದೊಡ್ಡವರು ಹೇಳಿದ ಮಾತುಗಳನ್ನು ಒಂದು ಅರ್ಥದಲ್ಲಿ ಹೇಳುತ್ತಾರೆ. ನಮಗೆ ಹೇಗೆ ಬೇಕೋ ಹಾಗೇ ಅರ್ಥ ಮಾಡಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದರು.

ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಇ.ಡಿ ಅವರಿಗೆ ಮತ್ತೇ ದೂರು ಕೊಡಲಿ. ಅದೆಲ್ಲವನ್ನು ಕಾನೂನು ನೋಡಿಕೊಳ್ಳುತ್ತದೆ. ನಾವು ಪ್ರತಿಕ್ರಿಯಿಸಲು ಆಗುವುದಿಲ್ಲ ಎಂದರು.

ಯಾರಿಗೆ ಯಾರು ದ್ವೇಷ ಮಾಡುತ್ತಾರೋ ಗೊತ್ತಿಲ್ಲ. ದಿನಬೆಳಗಾದರೆ ಇದೇ ಆಗಿದೆ.‌ ಇವರಿಗೆ ಅವರು ಏನೋ ಅಂದರು, ಅವರಿಗೇ ಇವರು ಏನೋ ಅಂದರು ಎಂಬುದಾಗಿದೆ. ಸಾರ್ವಜನಿಕ ಜೀವನ ಇಷ್ಟರ ಮಟ್ಟಿಗೆ ಕಲುಷಿತ ಆದರೆ ಬಹಳ ಕಷ್ಟ ಎಂದು ಬೇಸರ ವ್ಯಕ್ತಪಡಿಸಿದರು.

ರಾಜಕೀಯ

ಮೋದಿ ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ; ಸಂತೋಷ್ ಲಾಡ್ ತಿರುಗೇಟು

ಮೋದಿ ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆ; ಸಂತೋಷ್ ಲಾಡ್ ತಿರುಗೇಟು

ಧಾರವಾಡ: ರಾಜ್ಯ ಸರಕಾರದ ವಿರುದ್ಧ ಸರಣಿ ಆರೋಪಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ರಾಜ್ಯ ಬಿಜೆಪಿ (BJP) ಇದೀಗ ಸರಣಿ ಹೋರಾಟಕ್ಕೆ ಮುಂದಾಗಿದ್ದು, ಇದರ ಭಾಗವಾಗಿ ಇಂದಿನಿಂದ ಮೈಸೂರಿನಲ್ಲಿ ‘ಜನಾಕ್ರೋಶ ಯಾತ್ರೆ’ಗೆ ಚಾಲನೆ

[ccc_my_favorite_select_button post_id="105043"]
ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರ (Doddaballapura): ಉಪಲೋಕಾಯುಕ್ತ ಬಿ.ವೀರಪ್ಪ ಅವರು ಇಂದು ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ರಾಗಿ ಖರೀದಿ ಕೇಂದ್ರದ ಬಳಿ ಇದ್ದ

[ccc_my_favorite_select_button post_id="105045"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

[ccc_my_favorite_select_button post_id="105020"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!