ದೊಡ್ಡಬಳ್ಳಾಪುರ; ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿ .ಹಿರಿಯರ ಬದುಕು ಕೇವಲ ಆದರ್ಶವಾಗಿಸದೇ, ಸಮಾಜಮುಖಿಯಾಗಿ ಕೆಲಸ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಿದೆ ಎಂದು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಮೇಶ್ ಹೇಳಿದರು
ಅವರು ಇಂದು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಹಿರಿಯ ನಾಗರೀಕರ ದಿನಾಚರಣೆ-2024 ಯನ್ನು ಉದ್ಘಾಟನೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಬಾರಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು, ‘ಘನತೆಯ ಬಾಳಿನೊಂದಿಗೆ ವಯೋಪಕ್ವತೆ: ವಿಶ್ವದಾದ್ಯಂತ ಹಿರಿಯ ಜೀವಿಗಳಿಗೆ ಆರೈಕೆ ಮತ್ತು ಬೆಂಬಲ ವ್ಯವಸ್ಥೆಗಳನ್ನು ಸದೃಢಗೊಳಿಸುವುದರ ಮಹತ್ವ’ಎಂಬ ವಿಶ್ವಸಂಸ್ಥೆಯ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದರು.
ಡಾ.ಮಂಜುನಾಥ್ ಮಾತನಾಡಿ, ಹಿರಿಯನ್ನು ಗೌರವದಿಂದ ಕಾಣಬೇಕು. ಅವರ ಅನುಭವಗಳನ್ನು ಗೌರವರಿಸಿ ಪಾಲಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಹಿರಿಯ ಕೊಡುಗೆಗಳು ಹಾಗೂ ಅವರ ಮಾರ್ಗದರ್ಶನದಿಂದ ಜೀವನದಲ್ಲಿ ಏಳಿಗೆಯನ್ನು ಕಾಣಬಹುದು. ಬಾಲ್ಯ , ಯೌವ್ವನ, ವೃದ್ಧಾಪ್ಯ, ಮಾನವನ ಜೀವನದ ಸಹಜ ಘಟ್ಟಗಳು. ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿ ನೀಡಲೆಂಬ ಸದುದ್ಧೇಶದಿಂದ ಹಿರಿಯ ನಾಗರಿಕನ್ನು ಗೌರವಿಸಿ ಸನ್ಮಾನಿಸಲಾಗುತ್ತದೆ ಎಂದರು.
ಈ ವೇಳೆ ಡಾ.ನಿರಂಜನ್, ಡಾ.ಸುಷ್ಮಾ, ಡಾ.ಗಾಯತ್ರಿ, ಡಾ.ಗಿರೀಶ್, ಉಪಶಾಮಕ ಆರೈಕೆ ಸಿಬ್ಬಂದಿ, ವಯೋವೃದ್ಧರ ಆರೈಕೆ ವಾರ್ಡ್ ಸಿಬ್ಬಂದಿ ಇದ್ದರು.