ದೊಡ್ಡಬಳ್ಳಾಪುರ; ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಕಾರಣ, ಮಹಿಳೆಯೋರ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ರಾಮೇಶ್ವರ ಗೇಟ್ ಬಳಿ ಸಂಭವಿಸಿದೆ.
ಘಟನೆಯಲ್ಲಿ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ರಾಮೇಶ್ವರ ಗ್ರಾಮದ ನಿವಾಸಿ ಮರಿಯಮ್ಮ ಎನ್ನುವವರು ತಲೆಗೆ ಪೆಟ್ಟು ಬಿದ್ದು ತೀವ್ರವಾಗಿ ಗಾಯಗೊಂಡಿದ್ದು, ಇವರ ಮಗ ಎನ್ನಲಾಗುತ್ತಿರುವ ಆನಂದ ಎನ್ನುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಇವರನ್ನು ನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ
ದೊಡ್ಡಬಳ್ಳಾಪುರ- ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿನ ರಾಮೇಶ್ವರ ಗೇಟ್ ಬಳಿ ರಾಮೇಶ್ವರ ಗ್ರಾಮಕ್ಕೆ ತೆರಳಲು ಬಲಕ್ಕೆ ತಿರುವು ಒಡೆಯುವ ವೇಳೆ ಹಿಂದಿನಿಂದ ಬಂದ ಕಾರು, ದ್ವಿಚಕ್ರ ವಾಹಕ್ಕೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ದೊಡ್ಡಬೆಳವಂಗಲ ಠಾಣೆ ಪೊಲೀಸರು ದೌಡಾಯಿಸಿದ್ದು, ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ರಾಮೇಶ್ವರ ಗೇಟ್ ಬಳಿ ಪದೇ ಪದೇ ಅಪಘಾತಗಳು ಸಂಭವಿಸಿದ್ದು, ಟೋಲ್ ಸಂಗ್ರಹಿಸುವ ಸಂಸ್ಥೆ ಸುರಕ್ಷತೆಗೆ ಯಾವುದೇ ಮುಂಜಾಗ್ರತೆ ಕ್ರಮಕೈಗೊಳ್ಳುತ್ತಿಲ್ಲ ಎಂಬ ಆರೋಪ ಸ್ಥಳೀಯರದ್ದಾಗಿದೆ.