ಬೆಂಗಳೂರು: ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ (Darshan) ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಸೋಮವಾರ ನಡೆಯಲಿದೆ.
ಈ ಮುಂಚೆ ಜಾಮೀನು ಅರ್ಜಿ ವಿಚಾರಣೆ ವೇಳೆ ನಟ ದರ್ಶನ್‌ರ ಮೆಡಿಕಲ್ ರಿಪೋರ್ಟ್ ಸಲ್ಲಿಕೆ ಮಾಡುವಂತೆ ಬಳ್ಳಾರಿ ಜೈಲಾಧಿಕಾರಿಗಳಿಗೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಜೈಲಾಧಿಕಾರಿಗಳು ಹೈಕೋರ್ಟ್‌ಗೆ ವೈದ್ಯಕೀಯ ವರದಿ ಸಲ್ಲಿಕೆ ಮಾಡಿದ್ದಾರೆ.
ವೈದ್ಯಾಧಿಕಾರಿಗಳು ಈಗಾಗಲೇ ನಟ ದರ್ಶನ್‌ಗೆ ಎಂಆರ್‌ಐ ಸ್ಕ್ಯಾನ್ ಮಾಡಿದ್ದಾರೆ. ಸ್ಕ್ಯಾನಿಂಗ್ ವೇಳೆ ಬೆನ್ನುನೋವು ಇರುವುದರ ಬಗ್ಗೆ ಉಲ್ಲೇಖಿಸಿದ್ದಾರೆಂದು ವರದಿಯಾಗಿದೆ.
ಮತ್ತೊಂದು ಕಡೆ ವೈದ್ಯಕೀಯ ವರದಿ ಇಟ್ಟುಕೊಂಡೇ ನಟ ದರ್ಶನ್ ಪರ ವಕೀಲರು ಜಾಮೀನು ಕೋರಿವಾದ ಮಂಡಿಸಲಿದ್ದಾರೆ. ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಲಿದ್ದಾರೆ.