ವಿಜಯೇಂದ್ರ.. ಸಿದ್ದರಾಮಯ್ಯ ಟ್ವಿಟ್ ವಾರ್..!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟ್ವಿಟರ್ ವಾರ್ ತೀವ್ರಗೊಂಡಿದ್ದು, ಹಲವು ವಿಚಾರಗಳ ಕುರಿತು ಪರ-ವಿರೋಧ ಕೆಸರೆರೆಚಾಟ ನಡೆಯುತ್ತಿದೆ.

ರಾಜಕೀಯ ಪುಡಾರಿಯ ರೀತಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸುಳ್ಳು ಆರೋಪ: ಎಲ್ಲವನ್ನೂ ಪಕ್ಷ, ರಾಜಕೀಯದ ಹಳದಿ ಕನ್ನಡಕದಿಂದ ನೋಡುವ ಅಭ್ಯಾಸವನ್ನು ಬಿಟ್ಟು ಒಬ್ಬ ಮುತ್ಸದ್ದಿ ರಾಜಕಾರಣಿಯಾಗಿ ಕರ್ನಾಟಕದ ಅಭಿವೃದ್ದಿ ಮಾದರಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಕಳೆದ ಎರಡು ಲೋಕಸಭಾ ಚುನಾವಣೆಗೆ ನೀಡಿದ್ದ ಪ್ರಣಾಳಿಕೆಯ ಜೊತೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಸವಾಲು ಎಸೆದಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ವಿಜಯೇಂದ್ರ ತಿರುಗೇಟು ನೀಡಿದ್ದರು.

ವಿಜಯೇಂದ್ರ ಟ್ವಿಟ್: ಸಿದ್ದರಾಮಯ್ಯ ನವರೇ, ನಿಮ್ಮ ಒಂದೂವರೆ ವರ್ಷದ ಆಡಳಿತದಲ್ಲಿ ನಿಮ್ಮ ಕೊಡುಗೆಗಳು ಏನೇನೂ ಇಲ್ಲ, ಅಭಿವೃದ್ಧಿಯ ಹಾದಿಯಲ್ಲಿ ಬರೀ ಶೂನ್ಯ, ಭ್ರಷ್ಟತೆಯ ಸಾಲು, ಸಾಲು ಹಗರಣಗಳು, ಸಾಮಾಜಿಕ ಶೋಷಣೆಗಳು, ಸ್ತ್ರೀ ಕುಲದ ಮೇಲಿನ ದೌರ್ಜನ್ಯಗಳು ಹತ್ತು ಹಲವು.

•ಇಂದಿಗೂ ಕರ್ನಾಟಕದ ಲಕ್ಷಾಂತರ ಜನ ಗುಡಿಸಲು ವಾಸಿಗಳಾಗಿದ್ದಾರೆ, ಸ್ವಂತ ಸೂರಿಲ್ಲದೇ ವಸತಿ ಹೀನರಾಗಿದ್ದಾರೆ. ಇವರಿಗಾಗಿ ನೀವು ಒಂದೇ ಒಂದು ನಿವೇಶವನ್ನು ವಿತರಿಸಲಾಗಿಲ್ಲ. ಆದರೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 5 ಸಾವಿರಕ್ಕೂ ಹೆಚ್ಚು ನಿವೇಶನಗಳ ದರೋಡೆ ನಿಮ್ಮ ಬಲಗೈ ಬಂಟ ಸಚಿವ ಭೈರತಿ ಸುರೇಶ್ ರವರ ನೇತೃತ್ವದಲ್ಲಿ ಹಾಗೂ ನಿಮ್ಮ ಮಾರ್ಗದರ್ಶನದಲ್ಲಿ ನಡೆದಿದೆ ಎಂಬುದಕ್ಕೆ ನೀವೊಬ್ಬರೇ ಉಚಿತವಾಗಿ ಪಡೆದ 14 ನಿವೇಶನಗಳು ಸಾಕ್ಷಿ ಹೇಳುತ್ತಿವೆ. ಈ ನಿಟ್ಟಿನಲ್ಲಿ ನ್ಯಾಯಾಲಯಗಳು ನಿಮ್ಮ ವಿರುದ್ಧ ತೀರ್ಪಿತ್ತಿವೆ.

ನೀವು ಪ್ರಾಮಾಣಿಕರೇ ಆಗಿದ್ದರೆ ಈಗಲೂ ಇಡಿ, ಸಿಬಿಐ ತನಿಖೆಗೆ ಏಕೆ ಹೆದರುತ್ತಿದ್ದೀರಿ? ನಿಮ್ಮ ಕೈ ಕೆಳಗಿನ ಅಧಿಕಾರಿಗಳಿರುವ ಲೋಕಾಯುಕ್ತದಿಂದಲೇ ತನಿಖೆ ಆಗುವಂತೆ ನೋಡಿಕೊಳ್ಳುತ್ತಿದ್ದೀರಿ. ನನ್ನ ನಿವೇಶನದ ಬೆಲೆ 62 ಕೋಟಿ ಎಂದು ಘೋಷಿಸಿದ ನೀವು ಬೇಷರತ್ತಾಗಿ ಮುಡಾಗೆ ನಿವೇಶನಗಳನ್ನು ಹಿಂದಿರುಗಿಸಿದ್ದು ಏಕೆ ? ಎಂಬುದನ್ನು ಕರ್ನಾಟಕದ ಜನತೆ ಅರಿಯದಿರುವಷ್ಟು ಮುಗ್ಧರಲ್ಲ.
‘ಕಳ್ಳ ಬೆಕ್ಕು ಕಣ್ಣುಮುಚ್ಚಿಕೊಂಡು ಹಾಲು ಕುಡಿಯುತ್ತಿದ್ದರೆ’ ಅದನ್ನು ನೋಡಿಕೊಂಡು ಸ್ವಾಭಿಮಾನಿ ಕನ್ನಡಿಗರು ಸುಮ್ಮನಾಗಿಬಿಡುತ್ತಾರೆಂದು ನೀವು ಭಾವಿಸಿದ್ದರೆ ಅದು ನಿಮ್ಮ ಮೂರ್ಖತನವಷ್ಟೇ’.

  • ಅಹಿಂದ ಹೆಸರೇಳಿಕೊಂಡು ಬಂದ ನೀವು ಮಾತುಮಾತಿಗೂ ಅಹಿಂದ, ಅಹಿಂದ ಎಂದು ಪಠನೆ ಮಾಡುವ ನೀವು ‘ಹಿಂದ’ವರ್ಗಗಳಿಗೆ ನೀಡಿದ ಕಲ್ಯಾಣ ಕಾರ್ಯಕ್ರಮಗಳೇನು? ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮ ಹಾಗೂ ಇತರ ಹಿಂದುಳಿದ ಹಾಗೂ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿ ನಿಗಮಗಳಿಗೆ ನೀವು ಅಧಿಕಾರಕ್ಕೆ ಬಂದ ನಂತರ ಎಷ್ಟು ಅನುದಾನ ನೀಡಿದ್ದೀರೆನ್ನುವ ದಾಖಲೆಗಳನ್ನು ಬಿಡುಗಡೆ ಮಾಡಿ ?
    ಶೋಷಿತ ವರ್ಗಗಳಿಗೆ ಅನುದಾನ ಬಿಡುಗಡೆ ಮಾಡುವ ಮಾತು ಹಾಗಿರಲಿ, ವಿಶ್ವಕವಿ ಎಂದು ಮಾನ್ಯತೆ ಪಡೆದ ಪೂಜ್ಯ ವಾಲ್ಮೀಕಿ ಅವರ ಹೆಸರಿರುವ ನಿಗಮದಲ್ಲಿ ಪರಿಶಿಷ್ಟ ಪಂಗಡದ, ಆದಿವಾಸಿ ಜನರ ಕಲ್ಯಾಣದ ಕಾರ್ಯಗಳಿಗೆ ಮೀಸಲಾಗಿ ಠೇವಣಿ ಇರಿಸಿದ್ದ ಬ್ಯಾಂಕ್ ಖಾತೆಗೆ ನಿಮ್ಮ ಸಚಿವರ ಮೂಲಕ ಕನ್ನ ಹಾಕಿಸಿದವರು ನೀವಲ್ಲ ಎಂಬುದನ್ನು ನೀವು ಸಾಬೀತು ಮಾಡಲು ಸಾಧ್ಯವೇ?

•ಕೆಐಡಿಬಿ ಮೂಲಕ ನಿಮ್ಮ ರಾಷ್ಟ್ರೀಯ ಅಧ್ಯಕ್ಷರ ಕುಟುಂಬ ಹಾಗೂ ಇತರ ಸ್ವಜನರಿಗೆ ಕೆಐಡಿಬಿಯಲ್ಲಿ ಮಂಜೂರಾಗಿರುವ ಸಿ.ಎ ನಿವೇಶನ ಹಗರಣವು ಸ್ವತಃ ನಿಮ್ಮ ರಾಷ್ಟ್ರೀಯ ಅಧ್ಯಕ್ಷರ ಕುಟುಂಬಕ್ಕೆ ಅಕ್ರಮವಾಗಿ ಮಂಜೂರಾತಿ ಮಾಡಿರುವ ಕಾರಣ ಅವರೂ ತಮ್ಮ ನಿವೇಶನ ಹಿಂದಿರುಗಿಸುವ ಘೋಷಣೆ ಮಾಡಿದ್ದಾರೆ. ಅಂದ ಮೇಲೆ ಕೆಐಡಿಬಿಯಿಂದ ಮಂಜೂರಾದ ನಿವೇಶನಗಳೂ ಅಕ್ರಮ ಎಂಬುದು ಸಾಬೀತಾದಂತಾಗಿದೆ.

•ಕರ್ನಾಟಕ ರಾಜ್ಯೋತ್ಸವದ ಈ ಸಂದರ್ಭದಲ್ಲಿ ಪ್ರಧಾನಿಯವರನ್ನು ಉಲ್ಲೇಖಿಸಿ ಕುವೆಂಪುರವರ ‘ಜಯ ಭಾರತ ಜನನಿಯ ತನುಜಾತೆ ಜಯ ಹೇ ಕರ್ನಾಟಕ ಮಾತೆʼ ಎಂಬ ನಾಡಗೀತೆಯನ್ನು ನೆನಪಿಸಿದ್ದೀರಿ, ಆದರೆ ಕುವೆಂಪು ಅವರು ಬಣ್ಣಿಸಿದʼ ಸರ್ವಜನಾಂಗದ ಶಾಂತಿಯ ತೋಟ…ಕದಡಿ ವಕ್ಫ್ ಹೆಸರಿನಲ್ಲಿ ಈ ನೆಲದ ಮಣ್ಣಿನ ಮಕ್ಕಳ ಹಾಗೂ ಶರಣ ಪರಂಪರೆಯ ಮಠ,ದೇವಸ್ಥಾನಗಳ ಭೂಮಿಯನ್ನು ಕಬಳಿಸಲು ಮೊಘಲ್ ಆಕ್ರಮಣಕಾರರ ರೀತಿಯಲ್ಲಿ ಭೂದಾಖಲೆಗಳಿಗೆ ಕನ್ನ ಹಾಕಿ ವಕ್ಫ್ ಹೆಸರಿನ ಕಪ್ಪು ಚುಕ್ಕೆಗಳನ್ನು ಅಚ್ಚೊತ್ತಿಸುತ್ತಿದ್ದೀರಿ, ಕುವೆಂಪು ಅವರ ಶಾಂತಿಯ ತೋಟ ಕರುನಾಡಿನಲ್ಲಿ ಅಶಾಂತಿ ಹಾಗೂ ಅರಾಜಕತೆಯ ಬೀಜಗಳನ್ನು ಬಿತ್ತಿ, ಅರಾಜಕತೆ ಸೃಷ್ಟಿಸಲು ಹೊರಟಿದ್ದೀರಿ. ಆ ಮೂಲಕ ನಿಮ್ಮ ಭ್ರಷ್ಟ ಮುಖವಾಡ ಮುಚ್ಚಿಕೊಳ್ಳುವ ಷಡ್ಯಂತ್ರ ರೂಪಿಸಿದ್ದೀರಿ. ಇದು ನೀವು ಕರ್ನಾಟಕಕ್ಕೆ ಕೊಡುತ್ತಿರುವ ಕೊಡುಗೆಯೇ?

•ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಹೆಸರಿನಲ್ಲಿ ವ್ಯವಸ್ಥಿತ ಅಪಪ್ರಚಾರ ನಡೆಸಿದಿರಿ. ಆದರೆ 80% ಕಮಿಷನ್ ವಸೂಲಾತಿಯ ಕುಖ್ಯಾತಿಯ ಮಾಲೆ ನಿಮಗೆ ತೊಡಿಸಿದವರು 80% ಕಮಿಷನ್ ನೀಡಿದ ಗುತ್ತಿಗೆದಾರರೇ ಅಲ್ಲವೇ? ಪ್ರಧಾನಿಗಳನ್ನು ಟೀಕಿಸುವ ಭರದಲ್ಲಿ ಈ ಅಂಶವನ್ನು ನೀವು ಮರೆತಿರೇನೋ?

•ನಿಮ್ಮ ಕಾಂಗ್ರೆಸ್ ಗೆ ರಾಷ್ಟ್ರ ಮಟ್ಟದ ಅಸ್ತಿತ್ವವನ್ನು ಗಟ್ಟಿಗೊಳಿಸಲು ‘ಇಂಡಿ ಒಕ್ಕೂಟದ’ ಡಿ.ಎಂ.ಕೆ ತೃಪ್ತಿಪಡಿಸಲು ಕಾವೇರಿ ನೀರನ್ನು ತಮಿಳುನಾಡಿಗೆ ಹರಿಯಬಿಟ್ಟು ರೈತರ ಬೆಳೆಯನ್ನು ಒಣಗಿಸಿ ಬರಡು ಮಾಡಿದ್ದು ನೀವೇ ಅಲ್ಲವೇ? ಈ ನಿಟ್ಟಿನ ರೈತ ಹೋರಾಟಗಳನ್ನು ಹತ್ತಿಕ್ಕಲು ಅಮಾಯಕ ರೈತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಜೈಲಿಗೆ ದಬ್ಬಿದ್ದು ನೀವೇ ಅಲ್ಲವೇ?

•ಬೆಳಗಾವಿಯಲ್ಲಿ ಹಾಡು ಹಗಲಲ್ಲೇ ನೀವಿದ್ದ ಕೂಗಳತೆಯ ದೂರದಲ್ಲೇ ಅಮಾಯಕ ಹೆಣ್ಣುಮಗಳನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ನಡೆಸಿದಾಗ ನಿಮ್ಮ ಸರ್ಕಾರ ಕನಿಷ್ಟ ಸ್ಪಂದನೆಯನ್ನೂ ಮಾಡದೇ ದುಶ್ಯಾಸನ ಸರ್ಕಾರದಂತೆ ವರ್ತಿಸಿದ್ದನ್ನು ಕರ್ನಾಟಕದ ಹೆಣ್ಣುಮಕ್ಕಳು ಹೇಗೆ ಮರೆಯಲು ಸಾಧ್ಯ? ಹುಬ್ಬಳ್ಳಿಯಲ್ಲಿ ನಿಮ್ಮ ಪಕ್ಷದ ಮುಖಂಡರ ಪುತ್ರಿಯನ್ನು ಹಾಡು ಹಗಲಲ್ಲೇ ಕಾಲೇಜು ಆವರಣದಲ್ಲಿ ಇರಿದು ಕೊಂದ ಘಟನೆ ಜನತೆ ಇನ್ನೂ ಮರೆತಿಲ್ಲ. ನಾಡಿನಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ ಶೋಷಣೆ ಹಾಗೂ ಅತ್ಯಾಚಾರ ಪ್ರಕರಣಗಳು ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನೆಲಕಚ್ಚಿರುವುದನ್ನು ಪ್ರತಿಬಿಂಬಿಸುತ್ತಿವೆ.

ಶಕ್ತಿ ಯೋಜನೆ ರೂಪಿಸಿರುವುದಾಗಿ ಬೊಬ್ಬೆಹೊಡೆಯುವ ನೀವು ಮಹಿಳೆಯರ ಆತ್ಮವಿಶ್ವಾಸದ ಶಕ್ತಿಯನ್ನೇ ಹುದುಗಿಸಿಬಿಟ್ಟಿದ್ದೀರಿ. ಈಗಾಗಲೇ ಅಸ್ತವ್ಯಸ್ತಗೊಂಡಿರುವ ಭಾಗ್ಯ ಯೋಜನೆಗಳು ಹಳ್ಳಹಿಡಿಯುವುದು ಖಚಿತ ಎಂದು ನಿಮ್ಮ ಉಪಮುಖ್ಯಮಂತ್ರಿಗಳೇ ಹೇಳಿರುವಾಗ ಈ ನಿಟ್ಟಿನಲ್ಲಿ ನಿಮ್ಮ ಪಕ್ಷದಲ್ಲೇ ಗೊಂದಲಗಳ ಗೂಡು ಸೃಷ್ಟಿಯಾಗಿರುವದನ್ನು ಕಂಡು ನಿಮ್ಮ ಪಕ್ಷದ ವರಿಷ್ಠ ಖರ್ಗೆಯವರು ಸಿಡಿಮಿಡಿಗೊಂಡಿರುವುದನ್ನು ರಾಜ್ಯದ ಜನತೆ ಗಮನಿತ್ತಿದ್ದಾರೆ.

ಇಷ್ಟಾಗಿಯೂ ಕೇಂದ್ರವನ್ನು ಪದೇಪದೇ ಉಲ್ಲೇಖಿಸುತ್ತಲೇ ಇರುತ್ತೀರಿ, ಕನ್ನಡ ನಾಡಿನ ಕಾನೂನು ಸುವ್ಯವಸ್ಥೆಗೆ ಭಂಗ ತಂದ ದೇಶದ್ರೋಹಿ ಶಕ್ತಿಗಳನ್ನು ಬಿಜೆಪಿ ಸರ್ಕಾರದಲ್ಲಿ ಬಂಧಿಸಿ ಸೆರೆಮನೆಗೆ ಕಳುಹಿಸಿದ್ದರೆ, ಅವರನ್ನು ಆರೋಪ ಮುಕ್ತಗೊಳಿಸಲು ಕೇಸುಗಳನ್ನು ವಾಪಾಸು ಪಡೆದುಕೊಳ್ಳುವ ನಿರ್ಧಾರ ಕೈಗೊಳ್ಳುತ್ತೀರಿ, ನಾಡು ನುಡಿಯ ಕಾಳಜಿಯ ಕುರಿತು ಡೋಂಗಿ ಮಾತುಗಳನ್ನಾಡುತ್ತೀರಿ.

•ಈ ರಾಜ್ಯದಲ್ಲಿ ನೀವು ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಎಂಬ ಪದ ಸಂಪೂರ್ಣವಾಗಿ ಮಾಸಿ ಹೋಗಿದೆ. ಅಭಿವೃದ್ಧಿಯ ವಿಚಾರ ಬಂದಾಗಲೆಲ್ಲ ರಾಜ್ಯದ ಸಂಪನ್ಮೂಲವನ್ನು ಬರಿದು ಮಾಡಿ ಸರ್ಕಾರದ ಖಜಾನೆಯನ್ನು ಖಾಲಿ ಮಾಡಿಕೊಂಡು ಕುಳಿತಿರುವ ನೀವು ಆಧಾರವಿಲ್ಲದೇ ಕೇಂದ್ರದ ಅನುದಾನಗಳು ಹರಿದು ಬರುತ್ತಿಲ್ಲವೆಂದು ಸುಳ್ಳು ಆರೋಪ ಮಾಡುತ್ತೀರಿ. ಆ ಮೂಲಕ ಜವಾಬ್ದಾರಿಯಿಂದ ನುಣುಚಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸುತ್ತಿದ್ದೀರಿ, ಈ ಕುತಂತ್ರದ ಜಾಣ್ಮೆಯ ಆಟ ಹೆಚ್ಚು ದಿನ ನಡೆಯುವುದಿಲ್ಲ.

ನಿಮ್ಮ ಪಕ್ಷದ ಶಾಸಕರೇ ನಿಮ್ಮ ಮೇಲೆ ಮುಗಿಬೀಳಲು ಸಮಯ ಕಾಯುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ರೂ. 52,903 ಕೋಟಿ ಅನುದಾನ ಬಳಸಲಾಗುತ್ತಿದೆ ಎಂದು ಹೇಳಿಕೊಂಡಿದ್ದೀರಿ ಅದು ನಿಜವೇ ಆಗಿದ್ದರೆ, ಕರ್ನಾಟಕದ 224 ಶಾಸಕರ ಕ್ಷೇತ್ರಗಳಿಗೆ ನೀವು ಬಿಡುಗಡೆ ಮಾಡಿರುವ ಅನುದಾನಗಳ ಮಾಹಿತಿ ಬಹಿರಂಗಗೊಳಿಸಿ, ಇದಾಗದಿದ್ದರೆ ಕನಿಷ್ಟ ನಿಮ್ಮ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಬಿಡುಗಡೆ ಮಾಡಿರುವ ಅನುದಾನಗಳ ವಿವರವನ್ನಾದರೂ ಜನತೆಯ ಮುಂದಿಡಿ.

•ಅದೇ ರೀತಿ ನೀವು ಕೈಗೆತ್ತಿಕೊಂಡಿರುವ ನೀರಾವರಿ ಯೋಜನೆಗಳಾವುದು? ಅದಕ್ಕೆ ಖರ್ಚು ಮಾಡಿರುವ ಅನುದಾನದ ವಿವರ ಕೊಡಿ.
•ನಿರುದ್ಯೋಗ ನಿರ್ಮೂಲನೆಗಾಗಿ ಉದ್ಯೋಗ ಸೃಷ್ಟಿಸಲು ರೂಪಿಸಿರುವ ಕಾರ್ಯಕ್ರಮ ಯಾವುದು? ನೀವು ಬಿಡುಗಡೆ ಮಾಡಿರುವ ಅನುದಾನವೆಷ್ಟು? ಸಣ್ಣ ಕೈಗಾರಿಕೆ, ಅತಿಸಣ್ಣ, ಕೈಗಾರಿಕೆ, ಗುಡಿ ಕೈಗಾರಿಕೆ, ಗೃಹ ಕೈಗಾರಿಕೆ, ಗ್ರಾಮೀಣ ಕೈಗಾರಿಕೆಗಳಿಗೆ ನೀವು ಬಿಡುಗಡೆ ಮಾಡಿರುವ ಅನುದಾನ, ರೂಪಿಸಿರುವ ಯೋಜನೆಗಳ ವಿವರ ಕೊಡಿ.

ಸೂರುರಹಿತರಿಗೆ ಸೂರು

•ಈ ರಾಜ್ಯದಲ್ಲಿ ಸೂರುರಹಿತರಿಗೆ ನೀವು ಅಧಿಕಾರಕ್ಕೆ ಬಂದ ಮೇಲೆ ಎಷ್ಟು ನಿವೇಶನ ನೀಡಿದ್ದೀರಿ ಎಷ್ಟು ಮನೆ ಕಟ್ಟಿಕೊಟ್ಟಿದ್ದೀರಿ? ಪಟ್ಟಿ ಬಿಡುಗಡೆ ಮಾಡಲು ಸಾಧ್ಯವೇ?

•ಶಿಕ್ಷಣ ಕ್ಷೇತ್ರದಲ್ಲಿ ಬಡಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲು ನೀವು ಹಾಕಿಕೊಂಡಿರುವ ಯೋಜನೆಗಳೇನು? ಸರ್ಕಾರಿ ಶಾಲೆಯ ಶಿಕ್ಷಣದ ಗುಣಮಟ್ಟ ಅಭಿವೃದ್ಧಿ ಪಡಿಸಲು ನೀವು ಬಿಡುಗಡೆ ಮಾಡಿರುವ ಅನುದಾನವೆಷ್ಟು? ನಿತ್ಯವೂ ಮಾಧ್ಯಮಗಳಲ್ಲಿ ಬಹಿರಂಗವಾಗುವ ಶಾಲಾ ಕಟ್ಟಡಗಳ ದುಸ್ಥಿತಿಯ ವರದಿಗಳು ನಿಮ್ಮ ಕಣ್ಣಿಗೆ ಕಾಣುತ್ತಿಲ್ಲವೇ? ಬಡಮಕ್ಕಳ ಶಿಕ್ಷಣವನ್ನು ಮರೆತಿರುವ ನಿಮಗೆ ಶಿಕ್ಷಣದ ಬಗ್ಗೆ ಮಾತನಾಡುವ ಯಾವ ನೈತಿಕ ಹಕ್ಕಿದೆ?

•ಅತಿವೃಷ್ಟಿ, ಅನಾವೃಷ್ಟಿ ಎರಡೂ ಸಂದರ್ಭವನ್ನು ನಿಭಾಯಿಸುವಲ್ಲಿ ನಿಮ್ಮ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ಭಾರಿಯ ವರುಣನ ಆರ್ಭಟದಲ್ಲಿ ಬೆಂಗಳೂರು ಇತಿಹಾಸದಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ನಲುಗಿದೆ, ಪ್ರಾಣ ಹಾನಿಗಳೂ ಸಂಭವಿಸಿವೆ. ಅನೇಕರು ವಸತಿಗಳನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ,ಬ್ರ್ಯಾಂಡ್ ಬೆಂಗಳೂರು ಮಾಡಲು ಹೊರಟು ‘ಬ್ಯಾಡ್ ಬೆಂಗಳೂರು’ ಮಾಡಿದ್ದೀರಿ ಇಷ್ಟಾಗಿಯೂ ನಿಮ್ಮ ಬೆನ್ನನ್ನು ನೀವೇ ತಟ್ಟಿಕೊಳ್ಳುತ್ತಿದ್ದೀರಿ.

•ಪ್ರಧಾನಿ ನರೇಂದ್ರ ಮೋದಿಯವರ ಸ್ವಾವಲಂಬಿ ಭಾರತದ ನಿರ್ಮಾಣದ ಅಡಿಯಲ್ಲಿ ರಾಜ್ಯದಲ್ಲಿ ಕೈಗೊಂಡಿರುವ ಮೂಲಭೂತ ಸೌಕರ್ಯಗಳು ಸಾಲುಸಾಲು. ಅತ್ಯುತ್ತಮ ರೈಲ್ವೇ ವ್ಯವಸ್ಥೆ, ನೂರಾರು ಹೊಸ ಸುಸಜ್ಜಿತ ರೈಲುಗಳ ಸಮರ್ಪಣೆ, ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ, ವಿಮಾನ ನಿಲ್ದಾಣಗಳ ವಿಸ್ತಾರ, ಬೃಹತ್ ಕೈಗಾರಿಕೆಗಳ ಉತ್ತೇಜನ, ರೈತ ಬೆಳೆದ ಬೆಳೆ ರಕ್ಷಿಸಲು ಫಸಲ್ ವಿಮಾ ಯೋಜನೆ, 70 ವರ್ಷ ದಾಟಿದ ಜನರಿಗೆ ಉಚಿತ ಆರೋಗ್ಯ ಸುರಕ್ಷತೆ, ಮುದ್ರಾ, ವಿಶ್ವಕರ್ಮ ಯೋಜನೆಗಳ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಲಕ್ಷಾಂತರ ಜನರಿಗೆ ಆರ್ಥಿಕ ನೆರವು, ಅಧಿಕಾರಕ್ಕೆ ಬಂದ ಮೊದಲ ದಿನವೇ ವಸತಿ ರಹಿತರಿಗಾಗಿ ಮೂರು ಕೋಟಿ ವಸತಿ ನಿರ್ಮಾಣಕ್ಕೆ ನಿರ್ಧಾರ ಕೈಗೊಂಡಿದ್ದು, ಅಂತರಾಷ್ಟ್ರೀಯ ಗಡಿಯಲ್ಲಿ ಚೀನಾ, ಪಾಕಿಸ್ಥಾನ ಸೇರಿದಂತೆ ಶತ್ರು ರಾಷ್ಟ್ರಗಳು ಶಸ್ತ್ರಾಸ್ತ್ರಗಳ ತ್ಯಾಗ ಮಾಡಿ ಹೆಜ್ಜೆ ಹಿಂದಿಕ್ಕಿರುವುದು ಮೋದಿಯವರ ಸಾಧನೆಯಲ್ಲವೇ? ಇವೆಲ್ಲವೂ ಮೇಕ್ ಇನ್ ಇಂಡಿಯಾ ಹಾಗೂ ಕೌಶಲ ಭಾರತದ ಹೆಜ್ಜೆ ಗುರುತುಗಳಲ್ಲವೇ?

•ನೀವು ಬಹಿರಂಗ ಚರ್ಚೆಗೆ ಬರುವುದಾದರೆ ಬನ್ನಿ ನಿಮಗೆ ಖಂಡಿತ ಸ್ವಾಗತವಿದೆ. ಮೋದಿ ಸರ್ಕಾರದ ಕೊಡುಗೆಗಳು, ಹಿಂದಿನ ನಮ್ಮ ಬಿಜೆಪಿ ಸರ್ಕಾರದ ಯೋಜನೆಗಳ ಪಟ್ಟಿಯನ್ನಿಡಿದು ನಿಮ್ಮ ಮುಂದೆ ಬರುತ್ತೇವೆ. ನಿಮ್ಮ ಸರ್ಕಾರದ ಭ್ರಷ್ಟ ಅಭಿವೃದ್ಧಿ ಶೂನ್ಯ ಆಡಳಿತದ ಇಂಚಿಂಚೂ ಕಟುಸತ್ಯವನ್ನು ಅನಾವರಣ ಮಾಡಲು ಪ್ರಧಾನಿಗಳೇಕೆ? ನಮ್ಮ ಸಾಮಾನ್ಯ ಕಾರ್ಯಕರ್ತನೊಬ್ಬನೇ ಸಮರ್ಥನಿದ್ದಾನೆ. ಈ ಸವಾಲು ಸ್ವೀಕರಿಸಲು ಸಿದ್ಧರಿದ್ದರೆ ಎಂದು? ಎಲ್ಲಿ ? ಎಂದು ಹೇಳಿ ನಾವೂ ಸಿದ್ಧರಿದ್ದೇವೆ.
ಚರ್ಚೆ, ಹೋರಾಟಗಳಿಗೆ ಅಂಜುವ ಪದ ನಮ್ಮ ಪಕ್ಷದ ಸಿದ್ಧಾಂತದ ಪಟ್ಟಿಯಲ್ಲಿ ಇಲ್ಲವೇ ಇಲ್ಲ. ಅದೇನಿದ್ದರೂ ನಿಮ್ಮ ಕಾಂಗ್ರೆಸ್ ಹಾಗೂ ನಿಮ್ಮಲ್ಲಿದೆ. ಇದಕ್ಕೆ ಉದಾಹರಣೆ ನೀವು 14 ನಿವೇಶನ ಹಿಂದಿರುಗಿಸಿ 62 ಕೋಟಿ ಪಡೆಯುವ ಘೋಷಣೆಯ ಸವಾಲಿನಿಂದ ಪಲಾಯನವಾದ ಮಾಡಿದ್ದು ಎಂದಿದ್ದಾರೆ.

ಸಿದ್ದರಾಮಯ್ಯ ಟ್ವಿಟ್: ವಿಜಯೇಂದ್ರ ಅವರೇ, ಪ್ರಧಾನಿ ನರೇಂದ್ರ ಮೋದಿ ಅವರ ಬದಲಿಗೆ ತಾವೇ ಬಹಿರಂಗ ಚರ್ಚೆಗೆ ಸಿದ್ಧ ಎಂದು ನೀವು ಹಾಕಿರುವ ಸವಾಲನ್ನು ಗಮನಿಸಿದೆ. ನನ್ನ ಜೊತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ.

ನಿಮ್ಮ ಪೂಜ್ಯ ತಂದೆಯವರನ್ನು ಮುಖ್ಯಮಂತ್ರಿ ಮಾಡಲು ನೀವು ಬಿಜೆಪಿ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ನೀಡಿದ್ದೀರಿ..!! ನಿಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಇನ್ನೂ ಒಂದಷ್ಟು ಕೋಟಿ ರೂಪಾಯಿ ನೀಡಿದ್ದೀರಿ..!! ಎಂದು ನಿಮ್ಮ ನಾಯಕರೇ ಆರೋಪಿಸಿದ್ದಾರೆ. ಮೊದಲು ಅವರ ಜೊತೆ ಚರ್ಚೆ ಮಾಡಿ ಮುಗಿಸಿ ಬನ್ನಿ.

ನೀವು ಕಮಿಷನ್ ಹೊಡೆಯುವುದರಲ್ಲಷ್ಟೇ ಪರಿಣತರು ಎಂದು ನಿಮ್ಮದೇ ಪಕ್ಷದ ನಾಯಕರಾದ ಯತ್ನಾಳ್, ಜಾರಕಿಹೊಳಿ, ಹೆಚ್.ವಿಶ್ವನಾಥ್ ಅವರು ಹೇಳುತ್ತಲೇ ಇದ್ದಾರೆ. ಇಲ್ಲಿಯ ವರೆಗೆ ಅವರ ಆರೋಪಗಳಿಗೆ ನೀವು ಪ್ರತಿಕ್ರಿಯೆ ನೀಡದಿರುವುದು ಮತ್ತು ಇಂತಹ ಆರೋಪ ಮಾಡುತ್ತಿರುವವರ ವಿರುದ್ಧ ನಿಮ್ಮ ಪಕ್ಷದ ಹೈಕಮಾಂಡ್ ಕೂಡಾ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಈ ಆರೋಪಗಳನ್ನು ನೀವು ಒಪ್ಪಿಕೊಂಡಂತೆ ಕಾಣಿಸುತ್ತಿದೆ, ಇದು ನಿಜವೇ?

ಈ ಎಲ್ಲ ಬೆಳವಣಿಗೆಗಳನ್ನು ನೋಡಿದರೆ ನಿಮ್ಮ ಪದಚ್ಯುತಿಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೀಡಿರುವ ಡಿಸೆಂಬರ್ ತಿಂಗಳ ಗಡುವು ನಿಜವಾಗುತ್ತಿರುವಂತೆ ಕಾಣುತ್ತಿದೆ. ನಮ್ಮ ಸರ್ಕಾರದ ಬಗ್ಗೆ ಚಿಂತಿಸುವ ಬದಲಿಗೆ ಮೊದಲು ನಿಮ್ಮ ಕುರ್ಚಿ ಭದ್ರ ಪಡಿಸಿಕೊಳ್ಳುವ ಯೋಚನೆ ಮಾಡಿ.

ನೀವಿನ್ನೂ ಆಡಳಿತಕ್ಕೆ ಹೊಸಬರು, ತೆರಿಗೆ – ಅನುದಾನ – ಜಿಎಸ್‌ಟಿ ಇತ್ಯಾದಿ ವಿಚಾರಗಳೆಲ್ಲ ನಿಮ್ಮ ಪೂಜ್ಯ ತಂದೆಯವರಾದ ಬಿ.ಎಸ್.ಯಡಿಯೂರಪ್ಪನವರಿಗೇ ಅರ್ಥವಾಗಿಲ್ಲ, ನಿಮಗೆಷ್ಟು ಅರ್ಥವಾಗಬಹುದು? ಕೇಂದ್ರದಲ್ಲಿ ಅಧಿಕಾರದಲ್ಲಿರುವ ನಿಮ್ಮದೇ ಪಕ್ಷದ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇತ್ತೀಚೆಗಷ್ಟೇ 28 ರಾಜ್ಯಗಳಿಗೆ ಒಟ್ಟು 1,78,193 ಕೋಟಿ ರೂಪಾಯಿ ತೆರಿಗೆ ಪಾಲನ್ನು ಬಿಡುಗಡೆಗೊಳಿಸಿರುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ನೀಡಿರುವುದು ಕೇವಲ ರೂ.6,498 ಕೋಟಿ ಮಾತ್ರ.

ದೇಶದ ಒಟ್ಟು ತೆರಿಗೆ ಸಂಗ್ರಹಕ್ಕೆ ಕರ್ನಾಟಕ ರೂ.4 ಲಕ್ಷ ಕೋಟಿ ರೂಪಾಯಿಗಳನ್ನು ನೀಡುತ್ತಿದ್ದರೂ ತೆರಿಗೆ ಹಂಚಿಕೆ ರೂಪದಲ್ಲಿ ನಮಗೆ ಸಿಗುತ್ತಿರುವ ಪಾಲು ರೂ.45,000 ಕೋಟಿ ಮಾತ್ರ. ಕರ್ನಾಟಕದ ಜನತೆ, ಕೇಂದ್ರ ಸರ್ಕಾರಕ್ಕೆ ನೀಡುತ್ತಿರುವ ಪ್ರತಿಯೊಂದು ರೂಪಾಯಿಗೆ ಹಿಂದಿರುಗಿ ಬರುತ್ತಿರುವುದು ಕೇವಲ 15 ಪೈಸೆ ಮಾತ್ರ. ಏಳು ಕೋಟಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತುವ ದಮ್-ತಾಖತ್ ನಿಮಗಾಗಲಿ ನಿಮ್ಮ ಹದಿನೇಳು ಎಂಪಿಗಳಿಗಾಗಲಿ ಎಲ್ಲಿದೆ?

ನಮ್ಮ ಸರ್ಕಾರದ ಅವಧಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗಿವೆ ಎಂದು ಆರೋಪಿಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ? ನಿಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ನಿಮ್ಮದೇ ಶಾಸಕರು ಹೇಗೆ ದುರ್ಯೋಧನ – ದುಶ್ಯಾಸನರ ರೀತಿಯಲ್ಲಿ ನಡೆದುಕೊಂಡಿದ್ದರು ಎನ್ನುವ ಇತಿಹಾಸವನ್ನು ನಾನು ಕೆದಕಲು ಹೋಗುವುದಿಲ್ಲ. ಆದರೆ ಪೋಕ್ಸೋ ಕಾಯ್ದೆಯಡಿ ಆರೋಪಿಯಾಗಿ ಜಾಮೀನಿನ ಮೇಲೆ ಹೊರಗಿರುವ ನಿಮ್ಮ ಪೂಜ್ಯ ತಂದೆಯವರನ್ನು ಮನೆಯಲ್ಲಿಟ್ಟುಕೊಂಡು ನಮಗೆ ಹೆಣ್ಣುಮಕ್ಕಳ ರಕ್ಷಣೆಯ ಪಾಠ ಮಾಡಲು ಕನಿಷ್ಠ ನಿಮಗೆ ನಾಚಿಕೆ ಆಗುವುದಿಲ್ಲವೇ?

ಬೇಟಿ ಬಚಾವೋ ಬೇಟಿ ಪಡಾವೋ

‘‘ಬೇಟಿ ಬಚಾವೋ ಬೇಟಿ ಪಡಾವೋ’’ ಎಂದು ಆಗಾಗ ಘೋಷಣೆ ಕೂಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆಗೆ ಬದ್ಧರಾಗಿದ್ದರೆ ಪೋಕ್ಸೋ ಆರೋಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯ ಸ್ಥಾನದಿಂದ ಮತ್ತು ಅವರನ್ನು ರಕ್ಷಿಸುತ್ತಿರುವ ನಿಮ್ಮನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕಿತ್ತುಹಾಕಬೇಕು.

ನನ್ನ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸುವ ನೈತಿಕತೆ ಈ ಜನ್ಮದಲ್ಲಿ ನೀವು ಪಡೆದುಕೊಂಡಿಲ್ಲ. ಅದನ್ನು ಮುಂದಿನ ಜನ್ಮದಲ್ಲಿ ಗಳಿಸಿಕೊಳ್ಳುವ ಪ್ರಯತ್ನ ಮಾಡಬಹುದು ಅಷ್ಟೆ. ಸಿಬಿಐ ಮತ್ತು ಇಡಿ ಸಂಸ್ಥೆಗಳು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಕೆಲಸ ಮಾಡಿದರೆ, ಡಿನೋಟಿಪೀಕೇಷನ್, ಅಕ್ರಮ ಗಣಿಗಾರಿಕೆ, ಮನಿ ಲಾಂಡ್ರಿಂಗ್ ಹೀಗೆ ಸಾಲು ಸಾಲು ಭ್ರಷ್ಟಾಚಾರದ ಹಗರಣಗಳ ಕಿಂಗ್ ಪಿನ್ ಆಗಿರುವ ನಿಮ್ಮ ಜಾಗ ಎಲ್ಲಿರಬಹುದು ಎನ್ನುವುದನ್ನು ಒಮ್ಮೆ ಯೋಚಿಸಿ. ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯುವ ದುಸ್ಸಾಹಸ ಮಾಡಬೇಡಿ.

ವಕ್ಪ್ ಆಸ್ತಿ ವಿಚಾರದಲ್ಲಿ ಸುಬಗರ ಸೋಗು ಹಾಕುವುದೇನು ಬೇಡ. ನಿಮ್ಮದೇ ಪಕ್ಷದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಈಗಿನ ನಿಮ್ಮ ಮಿತ್ರ ಪಕ್ಷವಾದ ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ನೂರಾರು ರೈತ ಕುಟುಂಬಗಳ ಆಸ್ತಿಗಳನ್ನು ವಕ್ಪ್ ಬೋರ್ಡ್ ಗೆ ಖಾತೆ ಬದಲಾಯಿಸಿದ ದಾಖಲೆಗಳನ್ನು ಶೀಘ್ರದಲ್ಲಿ ನಾವು ಬಿಡುಗಡೆ ಮಾಡುತ್ತೇವೆ. ಆಗ ನಿಮ್ಮ ಪಾಪದ ಫಲವನ್ನು ನೀವೇ ಉಣ್ಣಬೇಕಾಗುವ ಸಂದರ್ಭ ಬರಬಹುದು..!! ಅದಕ್ಕೆ ಸಿದ್ಧರಾಗಿರಿ ಎಂದಿದ್ದಾರೆ.

ವಿಜಯೇಂದ್ರ ಟ್ವಿಟ್: ಮಾನ್ಶ Siddaramaiah ನವರೇ, “ಇದ್ದಿದ್ದು ಇದ್ದಂಗೆ ಹೇಳಿದರೆ ಎದ್‌ ಬಂದು ಎದೆಗೆ ಒದ್ದರಂತೆ”ಎಂಬಂತೆ ನಾನು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಏನೇನೋ ಬಡಪಡಿಸಿದ್ದೀರಿ, ಪ್ರಧಾನಿ Narendra Modi ಅವರ ಕೊಡುಗೆಯ ಕುರಿತು ಪದ ಸಂಸ್ಕೃತಿ ಇಲ್ಲದವರಂತೆ ನೀವು ನೀಡಿದ ಹೇಳಿಕೆಗೆ ಪ್ರತಿಯಾಗಿ ನಾನು ಎತ್ತಿದ್ದು ಈವರೆಗಿನ ನಿಮ್ಮ ಆಡಳಿತದ ವೈಫಲ್ಯಗಳ ಪ್ರಶ್ನೆಗಳನ್ನು, ಈ ಪ್ರಶ್ನೆಗಳನ್ನು ಕೇಳಿದ್ದು ನಾನು ಈ ನಾಡಿನ ರೈತರು,ಮಹಿಳೆಯರು,ಬಡವರು, ಶೋಷಿತರು,ಆದಿವಾಸಿಗಳು,ಹಿಂದುಳಿದವರ ಪರವಾಗಿ, ಇದ್ಯಾವುದಕ್ಕೂ ಉತ್ತರಿಸಲಾಗದ ನೀವು ವಿಷಯಾಂತರ ಮಾಡಿ ನಮ್ಮ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಬಹುವಾಗಿ ತಲೆಕೆಡಿಸಿಕೊಂಡಿರುವ ನಿಮ್ಮ ಬಗ್ಗೆ ಮರುಕ ವೆನಿಸುತ್ತಿದೆ.

ಶಿಸ್ತಿನ ಚೌಕಟ್ಟು ಬಿಜೆಪಿಯ ತಾಕತ್ತು

-ಬಿಜೆಪಿಯ ಒಗ್ಗಟ್ಟು ಭಾರತದ ಗಮ್ಮತ್ತು “ಇದು ಕರ್ನಾಟಕಕ್ಕೂ ಹೊರತಲ್ಲ ಎಂಬುದನ್ನು ನಿಮಗೆ ತಿಳಿಸ ಬಯಸುವೆ.
ನಾನೊಬ್ಬ ಪ್ರಧಾನ ಸೇವಕ ಎಂದ ಕರೆದು ಕೊಂಡ ಮಾನ್ಯ ನರೇಂದ್ರ ಮೋದಿಯವರು ನನಗೆ ಆದರ್ಶ, ಸದ್ಯ ಪಕ್ಷಾಧ್ಯಕ್ಷ ಸ್ಥಾನ ನನಗೆ ವರಿಷ್ಠರು ವಹಿಸಿಕೊಟ್ಟಿರುವ ಮಹತ್ವದ ಜವಾಬ್ದಾರಿಯೇ ಹೊರತು ಅದು ನಿಮ್ಮಂತೆ ಸರ್ವಾಧಿಕಾರ ಪ್ರದರ್ಶಿಸಲು ದೊರಕಿರುವ ಅಧಿಕಾರ ಸ್ಥಾನವಲ್ಲ,ನಾನೇನಿದ್ದರೂ ಒಬ್ಬ ಸಾಮಾನ್ಯ ಕಾರ್ಯಕರ್ತ
ಎಂಬ ಭಾವನೆ ಹೊಂದಿರುವವನೇ ಹೊರತು
ವ್ಯಕ್ತಿತ್ವಕ್ಕೆ ಕಳಂಕ ಮೆತ್ತಿಕೊಂಡರೂ ಅಧಿಕಾರಕ್ಕೆ ಅಂಟಿಕೂರುವ ಜಯಮಾನದವನಲ್ಲ.
ಒಬ್ಬ ಮುಖ್ಯಮಂತ್ರಿಯಾಗಿ ಘನತೆಯ ಸ್ಥಾನದಲ್ಲಿ ಕುಳಿತಿರುವ ನೀವು ಅಸಂಬದ್ಧವಾಗಿ ಪ್ರತಿಕ್ರಿಯಿಸಿರುವುದನ್ನು ನೋಡಿದರೆ ಹಗರಣಗಳ ಸುಳಿಯಲ್ಲಿ ಸಿಲುಕಿಕೊಂಡು ಕಾನೂನಿನ ಕುಣಿಕೆಯ ಆತಂಕ ಎದುರಿಸುತ್ತಿರುವ ಪರಿಸ್ಥಿತಿಯಿಂದ ಹತಾಶೆಯ ಅಂಚಿಗೆ ತಲುಪಿರುವುದು ವೇದ್ಯವಾಗುತ್ತಿದೆ.

ನಾನು ಎತ್ತಿರುವ ಪ್ರಶ್ನೆಗಳಿಗೆ ನೀವು ಬಹಿರಂಗ ಚರ್ಚೆಗೆ ಬರಲು ಸಾಧ್ಯವಿಲ್ಲದಿದ್ದರೆ ಮಾಧ್ಯಮಗಳ ಮೂಲಕವೇ ಉತ್ತರಿಸಿ ನಿಮ್ಮ ಸಾಧನೆಗಳನ್ನು ಬಣ್ಣಿಸಿಕೊಳ್ಳಿ ನೋಡೋಣ, ರಾಜ್ಯದ ಒಟ್ಟು ಅಭಿವೃದ್ಧಿಯ ದೃಷ್ಟಿಯಿಂದ ಆರೋಗ್ಯಕರ ಮನಸ್ಥಿತಿಯಿಂದ ನಾನು ನಿಮಗೆ ಪ್ರಶ್ನೆಗಳನ್ನು ಮುಂದಿಟ್ಟರೆ ಅದಕ್ಕೆ ಸೂಕ್ತ ರೀತಿಯಲ್ಲಿ ಉತ್ತರಿಸುವ ಬದಲು ‘ಏತಿ ಎಂದರೆ ಪ್ರೇತಿ ಎಂದರು’ಎಂಬಂತೆ ಪ್ರತಿಕ್ರಿಯಿಸಿದ್ದೀರಿ.

ನನ್ನ ಪೂಜ್ಯ ತಂದೆ ಯಡಿಯೂರಪ್ಪನವರು ಹೋರಾಟದ ಹಿನ್ನೆಲೆಯಿಂದ ಮೇಲೆದ್ದು ಬಂದವರು, ಜನರಿಗಾಗಿ ಮಿಡಿದವರು, ರೈತರಿಗಾಗಿ ದನಿ ಎತ್ತಿದವರು, ಶೋಷಣೆಯ ವಿರುದ್ಧ ಪ್ರತಿಭಟಿಸಿದವರು, ಇಂತಹ ಹೋರಾಟಗಳ ಯಾವ ಹಿನ್ನೆಲೆಯೂ ಇಲ್ಲದ ನೀವು ಅದೃಷ್ಟವಂತ ರಾಜಕಾರಣಿ ಎನ್ನುವುದು ಇಡೀ ರಾಜ್ಯಕ್ಕೇ ತಿಳಿದ ವಿಚಾರ.

ಮಾನ್ಯ ಯಡಿಯೂರಪ್ಪನವರು ಅಧಿಕಾರದ ಕನಸನ್ನು ಎಂದೂ ಕಂಡವರಲ್ಲ, ಬಡವರಿಗಾಗಿ, ರೈತರಿಗಾಗಿ ತಮ್ಮ ಇಡೀ ರಾಜಕೀಯ ಜೀವನವನ್ನು ಸಮರ್ಪಿಸಿಕೊಂಡವರು. ಕರ್ನಾಟಕದ ಇತಿಹಾಸದಲ್ಲಿ ಅವರ ಮೇಲೆ ನಡೆದ ರಾಜಕೀಯ ಪಿತೂರಿ, ಹುನ್ನಾರಗಳು ಇನ್ಯಾವ ರಾಜಕಾರಣಿಗಳ ಮೇಲೆ ನಡೆದಿಲ್ಲ ಎನ್ನುವುದನ್ನು ಇತಿಹಾಸ ಹೇಳುತ್ತಿದೆ. ಸುಳ್ಳು ದೂರುಗಳು, ಸುಳ್ಳು ಆರೋಪಗಳ ವ್ಯೂಹಗಳನ್ನು ಬೇಧಿಸಿ ಅಧಿಕಾರ ಇರಲಿ, ಇಲ್ಲದಿರಲಿ ಇವತ್ತಿಗೂ ಜನಮನದ ನಾಯಕನಾಗಿರುವ ಯಡಿಯೂರಪ್ಪನವರ ಮೇಲೆ ಇಂದಿಗೂ ಪಿತೂರಿಗಳು ನಡೆಯುತ್ತಲೇ ಇವೆ, ಅದರ ಭಾಗವೇ.’ಪೋಕ್ಸೋ ಹೆಸರಿನ ಸುಳ್ಳು ಕೇಸು’ ಇದಕ್ಕೂ ಇಷ್ಟರಲ್ಲೇ ನ್ಯಾಯಾಲಯದಿಂದ ನ್ಯಾಯದ ಉತ್ತರ ಸಿಗಲಿದೆ ಎಂಬ ನಂಬಿಕೆ ಇದೆ.

ಆದರೆ ನಿಮಗೆ ಸುತ್ತಿಕೊಂಡಿರುವ ಮುಡಾ ಹಗರಣದ ಉರುಳಿನಿಂದ ಹಿಡಿದು,ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಕಳಂಕಗಳನ್ನು ಹೊತ್ತ ನೀವು ರಾಜಕೀಯ ಜೀವನದಲ್ಲಿ ಮುಂದೆಂದೂ ಕಳಂಕ ರಹಿತರಾಗಿ ಹೊರಬರಲು ಸಾಧ್ಯವೇ ಇಲ್ಲ ಎನ್ನುವುದನ್ನು ಸದ್ಯದ ತನಿಖೆಗಳು ಹಾಗೂ ಹೊರ ಬಂದಿರುವ ನ್ಯಾಯಾಲಯದ ತೀರ್ಪುಗಳಲ್ಲಿ ವ್ಯಕ್ತವಾಗುತ್ತಿದೆ.ಕೆಂಪಣ್ಣ ಆಯೋಗವನ್ನು ರಚಿಸಿ ಅರ್ಕಾವತಿ ರೀಡೂ ಪ್ರಕರಣವನ್ನು ಬದಿಗೆ ಸರಿಸಿ ಬಚಾವಾದಂತೆ ಮುಡಾ ಪ್ರಕರಣವನ್ನು ನೀವು ಬದಿಗೆ ಸರಿಸಿ ಪಾರಾಗಲು ಸಾಧ್ಯವೇ ಇಲ್ಲ ಎನ್ನುವುದನ್ನು ಕಾಲವೇ ಉತ್ತರ ಹೇಳಲಿದೆ.

ಮತ್ತೆ ನಿಮಗೆ ನೆನಪಿಸುತ್ತಿದ್ದೇನೆ, ನನ್ನ ಈ ಹಿಂದಿನ ಪ್ರಶ್ನೆಗಳಿಗೆ ಮೊದಲು ಉತ್ತರಿಸಿ. ನಾನು ನಿಮ್ಮ ವೈಯಕ್ತಿಕ ಬದುಕಿನ ಚರಿತ್ರೆಯನ್ನು ಪ್ರಶ್ನಿಸಿಲ್ಲ ಬದಲಾಗಿ ಈ ನಾಡು ಹಾಗೂ ಜನರ ಹಿತದೃಷ್ಟಿಯಿಂದ ಒಬ್ಬ ಮುಖ್ಯಮಂತ್ರಿಗೆ ಒಬ್ಬ ಪ್ರಜೆಯಾಗಿ ಕೇಳಬೇಕಾದ ಪ್ರಶ್ನೆಗಳನ್ನಷ್ಟೇ ಕೇಳಿದ್ದೇನೆ.

ನೀವು ವಿಧಾನ ಪರಿಷತ್ ಸದಸ್ಯರಾದ ಮಾನ್ಯ ಹೆಚ್.ವಿಶ್ವನಾಥ್ ಅವರ ಹೆಸರನ್ನು ಉಲ್ಲೇಖಿಸಿದ್ದೀರಿ, ಆದರೆ ವಿಶ್ವನಾಥ್ ರವರು ಮೊದಲ ದಿನದಿಂದಲೇ ನೀವು ಪಡೆದ 14 ಅಕ್ರಮ ನಿವೇಶನಗಳ ಕರ್ಮಕಾಂಡವನ್ನು ಬಯಲಿಗೆಳೆದು ಇವತ್ತಿಗೂ ನಿಮ್ಮ ಭ್ರಷ್ಟಾಚಾರದ ಕುರಿತು ಸರಣೀ ರೂಪದಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ನೀವು ಮರೆತಂತಿದೆ. ‘ನಿಮ್ಮನ್ನು ಕಾಂಗ್ರೆಸ್ಸಿಗೆ ಕರೆದುಕೊಂಡು ಬಂದು ಎಂಥಾ ತಪ್ಪು ಮಾಡಿಬಿಟ್ಟೆವು’ಎಂದು ಇದೇ ವಿಶ್ವನಾಥ್ ರವರು ಈಗಲೂ ಪಶ್ಚಾತಾಪ ಪಡುವ ಅವರ ಹೇಳಿಕೆಯನ್ನು ನೀವು ಮರೆತಂತಿದೆ.

ರೈತರಿಗೆ ನೀಡಿರುವ ವಕ್ಫ್ ನೋಟೀಸ್ ವಿಚಾರದಲ್ಲೂ ಗೊಂದಲದ ನಿರ್ಧಾರ ಪ್ರಕಟಿಸಿದ್ದೀರಿ,ಆದರೆ ನಿಮ್ಮ ಅಧಿಕಾರಾವಧಿಯಲ್ಲೇ ಮುಗ್ಧ ರೈತರ ಜಮೀನಿನ ದಾಖಲೆಗೆ ವಕ್ಫ್ ಹೆಸರು ಕಾಣಿಸಿಕೊಂಡಿದ್ದಾದರೂ ಏಕೆ? ನೋಟೀಸ್ ಗಳನ್ನು ಕೊಟ್ಟಿದ್ದಾದರೂ ಏಕೆ? ನೋಟೀಸ್ ಗಳನ್ನು ಈಗ ವಾಪಸ್ ಪಡೆಯುತ್ತಿರುವುದಾಗಿ ಹೇಳುತ್ತಿರುವುದು ‘ಮೊಸಳೆ ಕಣ್ಣೀರು’ ಎಂಬುದನ್ನು ನಮ್ಮ ರೈತರು ಅರ್ಥ ಮಾಡಿಕೊಳ್ಳಲಾರದಷ್ಟು ಮುಗ್ಧರಲ್ಲ ಎನ್ನುವುದು ನಿಮಗೆ ತಿಳಿದಿರಲಿ.

ನೀವು 15 ಬಾರಿ ರಾಜ್ಯದ ಬಜೆಟ್ ಮಂಡಿಸಿರುವ ದಾಖಲೆಯ ವೀರ ನಿಜ, ಸರ್ಕಾರಿ ನೌಕರರಿಗೂ ಸಂಬಳ ಕೊಡುವುದಕ್ಕೂ ಸಾಲ ಮಾಡುವ ದುಸ್ಥಿತಿಗೆ ಇಳಿಸಿ ವೈಫಲ್ಯರಾಗಿದ್ದೀರಿ ಏಕೆ? ಕೆಲಸ ಮಾಡಿ ಬಿಲ್ ಪಾವತಿಯಾಗದೇ ಕಣ್ಣೀರು ಸುರಿಸುತ್ತಿರುವ ಗುತ್ತಿಗೆದಾರರು ನಿಮ್ಮ ಆರ್ಥಿಕ ಸ್ಥಿತಿಗತಿಯನ್ನು ತಿಳಿಸುವ ನಿಜವಾದ ಸಾಕ್ಷಿದಾರರಾಗಿದ್ದಾರೆ ಎನ್ನುವುದನ್ನು ಮಹಾನ್ ಆರ್ಥಿಕ ತಜ್ಞರಾದ ನಿಮಗೆ ನೆನಪಿಸಲು ಬಯಸುತ್ತೇನೆ ಎಂದಿದ್ದಾರೆ.

ರಾಜಕೀಯ

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. HD Deve Gowda

[ccc_my_favorite_select_button post_id="102362"]
ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ. ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, nikhil kumaraswamy

[ccc_my_favorite_select_button post_id="102348"]
Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ ಆಕ್ರೋಶ

Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ

ವೈರಲ್ ವಿಡಿಯೋದಲ್ಲಿ ಅಕ್ರಮ ವಲಸಿಗರ ಕಾಲನ್ನು ಸಂಕೋಲೆಗಳಲ್ಲಿ ಕಟ್ಟಿರುವುದು ಹಾಗೂ ಕೈಗಳನ್ನು ಕೋಳಗಳಿಂದ ಬಂಧಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ. Video

[ccc_my_favorite_select_button post_id="102365"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಪ್ರಿಯಕರೊಂದಿಗೆ ಓಡಿ ಹೋಗಿರುವ ವಿವಾಹಿತ ಮಹಿಳೆ ವಿದೇಶದಲ್ಲಿದ್ದ ತನ್ನ ಗಂಡನನ್ನು ಬಿಟ್ಟಿರುವುದಲ್ಲದೆ, ಗಂಡ ತನಗಾಗಿ ಕಟ್ಟಿದ್ದ ಮನೆಯನ್ನು ಮಾರಿದ್ದಾಳೆ. Suicide

[ccc_my_favorite_select_button post_id="102360"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!