ದೊಡ್ಡಬಳ್ಳಾಪುರ (Doddaballapura): ತಾಲೂಕಿನ ಪಂಚಗಿರಿ ಶ್ರೇಣಿಯಲ್ಲಿನ ಚಿಕ್ಕರಾಯಪ್ಪನಹಳ್ಳಿ ಗೌಡನಕೆರೆಯಲ್ಲಿ ಬುಧವಾರ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿದ್ದಾರೆ.
ನೀರಿನಲ್ಲಿ ಯುವಕನನ್ನು ಮುಳುಗಿದ ಲಘುಮೇನಹಳ್ಳಿ ಗ್ರಾಮದ ನಿವಾಸಿ 21ವರ್ಷದ ಶ್ರೀನಿವಾಸ್ ಎಂದು ಗುರುತಿಸಲಾಗಿದೆ.
ದೊಡ್ಡಬಳ್ಳಾಪುರ (Doddaballapura) ನಗರದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದು ಬುಧವಾರ ಸ್ನೇಹಿತರೊಂದಿಗೆ ಈಜಲು ಕೆರೆಗೆ ಹೋಗಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಕೆರೆಯಲ್ಲಿ ಹೆಚ್ಚಿನ ನೀರು ಇದ್ದು, ನಿನ್ನೆ ಯುವಕನ ಪತ್ತೆಯಾಗದ ಹಿನ್ನೆಲೆಯಲ್ಲಿ ಹಾಗೂ ಕತ್ತಲಾಗಿದ್ದರಿಂದ ಅಗ್ನಿಶಾಮಕದಳದ ಸಿಬ್ಬಂದಿ ಹುಡುಕಾಟ ನಿಲ್ಲಿಸಿದ್ದು, ಇಂದು ಮತ್ತೆ ಪ್ರಾರಂಭ ಮಾಡಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.