ಸ್ವಾಮೀಜಿಗಳಿಗೆ ದಾಖಲೆಗಳನ್ನು ತಲುಪಿಸುತ್ತೇವೆ. ಆಗ ಪ್ರಧಾನಿ ಮತ್ತು ಬಿಜೆಪಿ ಮುಖಂಡರ ನಿಜಬಣ್ಣ ತಿಳಿಯಲಿದೆ; ಎಂಬಿ ಪಾಟೀಲ ವಾಗ್ದಾಳಿ

ವಿಜಯಪುರ: ಕಳೆದ ಹತ್ತು ವರ್ಷಗಳಿಂದ ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದಾಗ ವಕ್ಫ್ ಆಸ್ತಿ ರಕ್ಷಣೆ ಕುರಿತು ಅಪಾರ ಕಾಳಜಿ ತೋರಿದ ಬಿಜೆಪಿ ಈಗ ವಿಜಯಪುರವನ್ನು ಹಿಂದುತ್ವದ ಪ್ರಯೋಗ ಶಾಲೆಯನ್ನಾಗಿ ಮಾಡಲು ಹೊರಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಆರೋಪಿಸಿದ್ದಾರೆ.

ಶುಕ್ರವಾರ ಅವರು ಇಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು,
ಬಿಜೆಪಿ ಅಧಿಕಾರದ ಅವಧಿಯಲ್ಲಿ ವಕ್ಫ್ ಆಸ್ತಿ ರಕ್ಷಣೆಗೆ ಹೊರಡಿಸಿದ ಹತ್ತಾರು ಸುತ್ತೋಲೆಗಳನ್ನು ಬಿಡುಗಡೆ ಮಾಡಿದರು.

ಕಳೆದ ಒಂದೆರಡು ವಾರಗಳಿಂದ ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಆದರೆ, ತಾವೇ ಅಧಿಕಾರದಲ್ಲಿ ಇದ್ದಾಗ ರೈತರು, ಧಾರ್ಮಿಕ ಸ್ಥಳಗಳ ಹಾಗೂ ಎಲ್ಲ ಧರ್ಮೀಯರ ಆಸ್ತಿಯನ್ನು ವಕ್ಫ್ ಗೆ ಹಿಂಪಡೆದಿದೆ ಎಂದು ಅವರು ದೂರಿದರು.

ರಾಜ್ಯದಲ್ಲಿ 2019ರಲ್ಲಿ ಬಿಜೆಪಿಯೇ ಅಧಿಕಾರದಲ್ಲಿ ಇತ್ತು. ಆ ವರ್ಷದ ಸೆ.17ರಂದು ದೇವರಹಿಪ್ಪರಗಿ ತಾಲೂಕಿನ ಮಣೂರ ಗ್ರಾಮದ ಮುರುಘೇಂದ್ರ ಶಿವಬಸಪ್ಪ ಖ್ಯಾಡಿ, ಮಾಶಾಬಿ ಮೌಲಾಸಾಬ ಮುಲ್ಲಾ, ಸುಭಾಷ ಧರ್ಮಣ್ಣ ಆನೆಗುಂದಿ ಅವರ ಆಸ್ತಿಗಳನ್ನು ವಕ್ಫ್ ಹೆಸರಿಗೆ ಇಂದೀಕರಣ ಮಾಡಿದೆ. ಇಂಡಿ ತಾ.ನಲ್ಲೂ 2023ರ ಜ.13ರಂದು ಮಾರ್ಸನಹಳ್ಳಿಯ ಗ್ರಾಮದ ನಿಂಗಪ್ಪ ಭೂಮಣ್ಣ ಶಿರಶ್ಯಾಡ ಅವರಿಗೆ ಸೇರಿದ ಆಸ್ತಿಯನ್ನು ಇದೇ ರೀತಿ ವಕ್ಫ್ ಹೆಸರಿಗೆ ಮಾಡಲಾಗಿದೆ ಎಂದು ಅವರು ವಿವರಿಸಿದರು.

2010ರ ಜ.4ರಂದು ಬಿಜೆಪಿ ಸರಕಾರವಿದ್ದಾಗ ವಕ್ಫ್ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಕ್ರಮಗೊಳಿಸಬೇಕೆಂದು ಕಂದಾಯ ಇಲಾಖೆ ಮೂಲಕ ಸುತ್ತೋಲೆ ಹೊರಡಿಸಲಾಗಿತ್ತು. ಬಳಿಕ ಅದೇ ವರ್ಷದ ಮೇ 29ರಂದು ವಕ್ಫ್ ಆಸ್ತಿಗಳ ಅತಿಕ್ರಮಣ ತೆರವಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದರು ಎಂದು ಅವರು ಹೇಳಿದ್ದಾರೆ.

ಇದಾದ ಮೇಲೂ 2011ರಲ್ಲಿ
ಒಮ್ಮೆ ಕಲಬುರಗಿಯ ಪ್ರಾದೇಶಿಕ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ದಾಖಲೆಗಳನ್ನು ಕ್ರಮಬದ್ಧಗೊಳಿಸುವ ಕುರಿತು, 2011ರ ಏ.23 ರಂದು ವಕ್ಫ್ ಭೂಸ್ವಾಧೀನ ಪರಿಹಾರವನ್ನು ವಕ್ಫ್ ಮಂಡಳಿಯ ಲೆಕ್ಕ ಶೀರ್ಷಿಕೆಗೆ ಕಡ್ಡಾಯವಾಗಿ ಪಾವತಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದರು ಎಂದು ಅವರು ದಾಖಲೆಗಳನ್ನು ಪ್ರದರ್ಶಿಸಿದರು.

ಬಿಜೆಪಿ ತನ್ನ ಎರಡನೆಯ ಅವಧಿಯ ಸರಕಾರ ಇದ್ದಾಗಲೂ ಹೀಗೆಯೇ ಮಾಡಿದೆ. 2020ರ ಆ.8 ರಂದು ವಕ್ಫ್ ಆಸ್ತಿಗಳನ್ನು ಭೂಮಿ ತಂತ್ರಾಶದಲ್ಲಿ ಫ್ಲಾಗ್ ಮಾಡುವ ಕುರಿತು ಕಂದಾಯ ಇಲಾಖೆಯ ಅಂದಿನ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದರು. ಪುನಃ 2021ರ ಜ.8 ರಂದು ಜಿಲ್ಲಾ ಮಟ್ಟದ ವಕ್ಫ್ ಆಸ್ತಿಗಳ ಕಾರ್ಯಪಡೆ ರಚಿಸಲು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಂದ ಸುತ್ತೋಲೆ ಹೊರಡಿಸಿತ್ತು. ಆಮೇಲೆ ಸಹ 2021ರ ಜ.27ರಂದು ಗ್ರಾಮ ಠಾಣಾ ವ್ಯಾಪ್ತಿಯಲ್ಲಿರುವ ವಕ್ಸ್ ಆಸ್ತಿಗಳನ್ನು ಪಂಚತಂತ್ರ ಮತ್ತು ಇ-ಸ್ವತ್ತು ತಂತ್ರಾಂಶದಲ್ಲಿ ಫ್ಲಾಗ್ (ಲಾಕ್) ಮಾಡುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ದೇಶಕರ ಸುತ್ತೋಲೆ ಹೊರಬಿದ್ದಿತ್ತು ಎಂದು ಪಾಟೀಲ ವಿವರಿಸಿದರು.

2014ರ ತನ್ನ ಪ್ರಣಾಳಿಕೆಯಲ್ಲೂ ಬಿಜೆಪಿ
ವಕ್ಫ್ ಮಂಡಳಿಯನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಧಾರ್ಮಿಕ ಮುಖಂಡರ ಜೊತೆ ಸಮಾಲೋಚಿಸಿ, ಅತೀಕ್ರಮಣ ತೆರವುಗೊಳಿಸುವುದಾಗಿ ಹೇಳಿತ್ತು. ಈಗ ಅದು ಬೂಟಾಟಿಕೆ ಮಾಡುತ್ತಿದೆ ಎಂದು ಅವರು ಟೀಕಿಸಿದರು.

2019ರಲ್ಲಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ್ದಾಗಲೂ ಮೋದಿ ಸರಕಾರವು ವಕ್ಫ್ ಆಸ್ತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣಕ್ಕೆ ಆದ್ಯತೆ ಕೊಡಲಾಗಿದೆ ಎಂದು ಹೇಳಿತ್ತು. ರಾಜ್ಯದಲ್ಲಿ ಈಗ ನೀಡಿರುವ ಎಲ್ಲಾ ನೋಟೀಸುಗಳನ್ನು ವಾಪಸ್ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದರಾಮಯ್ಯ ಆದೇಶಿಸಿದ್ದಾರೆ ಎಂದು ಸಚಿವರು ಪ್ರತಿಪಾದಿಸಿದರು.

ಅಲ್ಲದೆ, ನಾನು, ಕಂದಾಯ ಸಚಿವ ಕೃಷ್ಣ ಭೈರೇಗೌಡ ಮತ್ತು ವಕ್ಫ್ ಸಚಿವ ಜಮೀರ ಅಹ್ಮದ್ ಖಾನ್ ಕೂಡ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದೇವೆ. 2023ರ ಜೂನ್ 1ರಿಂದ 2024ರ ಅ.31ರವರೆಗೆ ರಾಜ್ಯದಲ್ಲಿ ವಕ್ಫ್ ಆಸ್ತಿಗಳಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮತ್ತು ತಪ್ಪು ಸರಿಪಡಿಸಲು ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿಯನ್ನು ಸಾರ್ವಜನಿಕ ಬಹಿರಂಗ ಪಡಿಸಿದ್ದೇವೆ ಎಂದು ಅವರು ತಿಳಿಸಿದರು.

ಈ ವಿಚಾರಗಳು ಗೊತ್ತಿಲ್ಲದ ಸ್ವಾಮೀಜಿಗಳು ಬಿಜೆಪಿಯ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ಸ್ವಾಮೀಜಿಗಳಿಗೆ ಈ ದಾಖಲೆಗಳನ್ನು ತಲುಪಿಸುತ್ತೇವೆ. ಆಗ ಸ್ವಾಮೀಜಿಗಳಿಗೆ ಪ್ರಧಾನಿ ಮತ್ತು ಬಿಜೆಪಿ ಮುಖಂಡರ ನಿಜಬಣ್ಣ ತಿಳಿಯಲಿದೆ ಎಂದು ಅವರು ವಿವರಿಸಿದ್ದಾರೆ.

ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್ ಅವರ ವಿಜಯಪುರ ಭೇಟಿ ಕಾನೂನುಬಾಹಿರ. ಇದರ ಜತೆಗೆ ಯತ್ನಾಳ ಮತ್ತು ಕರಂದ್ಲಾಜೆ ಹೋರಾಟ ಕೆಲವೇ ಗಂಟೆಗಳಲ್ಲಿ ಮುಗಿದಿದೆ ಎಂದು ಅವರು ವ್ಯಂಗ್ಯವಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಪ್ರೊ.ರಾಜು ಆಲಗೂರ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಉಪಾಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ಮುಖಂಡ ಅಬ್ದುಲ್‌ ಹಮೀದ್ ಮುಷರಫ್ ಉಪಸ್ಥಿತರಿದ್ದರು.

ರಾಜಕೀಯ

BJP JDU: ಬಿಜೆಪಿ ಬೆಂಬಲ ಹಿಂಪಡೆದಿಲ್ಲ.. ಸ್ಪಷ್ಟನೆ ನೀಡಿದ ಜೆಡಿಯು ವಕ್ತಾರ..!

BJP JDU: ಬಿಜೆಪಿ ಬೆಂಬಲ ಹಿಂಪಡೆದಿಲ್ಲ.. ಸ್ಪಷ್ಟನೆ ನೀಡಿದ ಜೆಡಿಯು ವಕ್ತಾರ..!

ಮಣಿಪುರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕ್ಷಣಕ್ಕೊಂದು ರೂಪ ತಾಳುತ್ತಿದೆ‌. ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದಲ್ಲ BJP JDU

[ccc_my_favorite_select_button post_id="101466"]
ತೋಟದ ಮನೆ ವಾಸಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಜಾರ್ಜ್

ತೋಟದ ಮನೆ ವಾಸಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಜಾರ್ಜ್

ತಮ್ಮ ತಮ್ಮ ತೋಟದಗಳಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದಾರೆ. ಆ ಮನೆಗಳಿಗೂ ಸಹ ನಿರಂತರ ಜ್ಯೋತಿ ಮೂಲಕ ವಿದ್ಯುತ್ ಸಂಪರ್ಕ ಅಗತ್ಯವಿದ್ದು, Good news

[ccc_my_favorite_select_button post_id="101473"]
ನಮ್ಮ ಆದ್ಯತೆ ಯಾವುದು..?; ಕರವೇ ರಾಜಘಟ್ಟರವಿ ಬೇಸರ

ನಮ್ಮ ಆದ್ಯತೆ ಯಾವುದು..?; ಕರವೇ ರಾಜಘಟ್ಟರವಿ ಬೇಸರ

ಅರ್ಥ ಆಗುವವರಿಗೆ ಇದಕ್ಕಿಂತ ಹೆಚ್ಚಾಗಿ ಹೇಳಬೇಕಿಲ್ಲ. ಅರ್ಥ ಆಗದವರಿಗೆ ಹೇಳಿ ಪ್ರಯೋಜನವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ‌. monalisa

[ccc_my_favorite_select_button post_id="101378"]

Indian Army Day 2025: ಇತಿಹಾಸ, ಥೀಮ್,

[ccc_my_favorite_select_button post_id="100962"]

Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ..

[ccc_my_favorite_select_button post_id="100927"]

Heart attack: ಕರ್ನಾಟಕದ ವೀರ ಯೋಧ ಸಾವು..!

[ccc_my_favorite_select_button post_id="100904"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Kho kho world cup ಫೈನಲ್‌ನಲ್ಲಿ ಗೆದ್ದು ಬೀಗಿದ ಭಾರತ

Kho kho world cup ಫೈನಲ್‌ನಲ್ಲಿ ಗೆದ್ದು ಬೀಗಿದ ಭಾರತ

ಮೊದಲ ದಿನದಿಂದಲೂ ಭಾರತ ಮಹಿಳಾ ತಂಡ ಚಾಂಪಿಯನ್ ಆಗಲಿದೆ ಎಂಬ ದೊಡ್ಡ ನಿರೀಕ್ಷೆಯಿತ್ತು. Kho kho world cup

[ccc_my_favorite_select_button post_id="101277"]
ಅಶ್ಲೀಲವಾಗಿ ವರ್ತಿಸಿದ ‘ಜೈಲರ್’ ನಟ ವಿನಾಯಕನ್: Video ವೈರಲ್

ಅಶ್ಲೀಲವಾಗಿ ವರ್ತಿಸಿದ ‘ಜೈಲರ್’ ನಟ ವಿನಾಯಕನ್: Video ವೈರಲ್

ವೈರಲ್ ಆಗಿರುವ ವಿಡಿಯೋದಲ್ಲಿ ವಿನಾಯಕನ್ ಅವರು ಮನೆಯ ಬಾಲ್ಕನಿಯಲ್ಲಿ ನಿಂತು ನೆರೆಮನೆಯವರಿಗೆ ಬೈಯ್ದಿದ್ದಾರೆ. Vinayakan

[ccc_my_favorite_select_button post_id="101390"]
ಭೀಕರ ಅಪಘಾತ.. 10 ಮಂದಿ ದುರ್ಮರಣ.. 13 ಮಂದಿಗೆ ಪರಿಹಾರ ಘೋಷಣೆ..!

ಭೀಕರ ಅಪಘಾತ.. 10 ಮಂದಿ ದುರ್ಮರಣ.. 13 ಮಂದಿಗೆ ಪರಿಹಾರ ಘೋಷಣೆ..!

ಮೃತರು ಲಾರಿಯಲ್ಲಿ ಕುಮಟಾ ಸಂತೆ ಮಾರುಕಟ್ಟೆ ತರಕಾರಿ ವ್ಯಾಪಾರಕ್ಕಾಗಿ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. Accident

[ccc_my_favorite_select_button post_id="101428"]

Accident: ಮಂತ್ರಾಲಯ ಮಠದ 3 ವಿದ್ಯಾರ್ಥಿಗಳು ಸಾವು..!

[ccc_my_favorite_select_button post_id="101415"]

FROM DODDABALLAPURA RAILWAY POLICE: ರೈಲಿಗೆ ಸಿಲುಕಿ

[ccc_my_favorite_select_button post_id="101334"]

Accident| KSRTC ಬಸ್ ಪಲ್ಟಿ..!| Video

[ccc_my_favorite_select_button post_id="101321"]

ಭೀಕರ ಅಪಘಾತ.. ಚಾಲಕ ಗ್ರೇಟ್ ಎಸ್ಕೇಪ್..!

[ccc_my_favorite_select_button post_id="101304"]

Accident: ತೊಂಡೇಭಾವಿ ಬಳಿ‌ ಮತ್ತೆ ಭೀಕರ ಅಪಘಾತ..

[ccc_my_favorite_select_button post_id="101281"]

ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್

[ccc_my_favorite_select_button post_id="101076"]

ಆರೋಗ್ಯ

ಸಿನಿಮಾ

2019ರ ಚಲನಚಿತ್ರ ಪ್ರಶಸ್ತಿ ಪ್ರಕಟ: ಕಿಚ್ಚ ಸುದೀಪ್‌‌ಗೆ ಅತ್ಯುತ್ತಮ ನಟ ಪ್ರಶಸ್ತಿ

2019ರ ಚಲನಚಿತ್ರ ಪ್ರಶಸ್ತಿ ಪ್ರಕಟ: ಕಿಚ್ಚ ಸುದೀಪ್‌‌ಗೆ ಅತ್ಯುತ್ತಮ ನಟ ಪ್ರಶಸ್ತಿ

ಖ್ಯಾತ ನಟ ಕಿಚ್ಚ ಸುದೀಪ್‌ ಮತ್ತು ಅನುಪಮಾ ಗೌಡ ಅವರು ಅತ್ಯುತ್ತಮ ನಟ ಹಾಗೂ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. State Fim Awards

[ccc_my_favorite_select_button post_id="101446"]
error: Content is protected !!