ಬಡವರ ಪಾಲಿನ ಪಾಂಡುರಂಗ ಮುಖ್ಯಮಂತ್ರಿ ಸಿದ್ದರಾಮಯ್ಯ: ಸಂತೋಷ್ ಲಾಡ್

ಸಂಡೂರು: ಜನಾರ್ದನರೆಡ್ಡಿ ಒಬ್ಬ ಜುಜುಬಿ ರಾಜಕಾರಣಿ. ಎಷ್ಟು ವರ್ಷ ಜೈಲಿಗೆ ಹೋಗಿ ಬಂದಿದೀರಿ. ನಿಮ್ಮ ಅಟ್ಟಹಾಸ ಮುರಿದದ್ದು, ಬಳ್ಳಾರಿ ಜಿಲ್ಲೆಯ ಮಹಾ ಜನತೆಯನ್ನು ಭಯಮುಕ್ತ ಗೊಳಿಸಿದ್ದು ಇದೇ ಸಿದ್ದರಾಮಯ್ಯ ಅನ್ನೋದನ್ನು ಮರೀಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರಾ ನೇರಾ ಬಹಿರಂಗವಾಗಿ ಎಚ್ಚರಿಕೆ ನೀಡಿದರು.

ಸಂಡೂರಿನ ವಿಠಲಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ ಅವರ ಪರವಾಗಿ ಪ್ರಚಾರ ಸಭೆಯಲ್ಲಿ, ತಮ್ಮ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ಜನಾರ್ದನರೆಡ್ಡಿಯವರಿಗೆ ಖಾರವಾಗಿ ಪ್ರತಿಕ್ರಿಯೆ ನೀಡಿದರು.

ರೆಡ್ಡಿಯವರೇ, ಕರ್ನಾಟಕ ರಾಜ್ಯ ರಾಜಕಾರಣಕ್ಕೆ ನನ್ನ ಕೊಡುಗೆ ಏನು ? ನಿಮ್ಮ ಕೊಡುಗೆ ಏನು? ನೀವೇನು ಬಳ್ಳಾರಿ ಯಜಮಾನರಾ? ಮತ ಹಾಕುವ ಬಳ್ಳಾರಿಯ ಜನ, ಸಂಡೂರಿನ ಜನ ನಮ್ಮ ಯಜಮಾನರು. ನೆನಪಿರಲಿ. ನಾನು ಗಂಗಾವತಿಗೆ ಪ್ರಚಾರಕ್ಕೆ ಹೋಗಲು ಆಗಲಿಲ್ಲ, ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸರಿಯಾದ ಪ್ರಚಾರ ಮಾಡಲಿಲ್ಲ ಹೀಗಾಗಿ ನೀವು ಗೆದ್ರಿ. ನಿಮ್ಮ ಈ ಗೆಲುವು ಶಾಶ್ವತ ಅಲ್ಲ. ಯಾರ ಗೆಲುವೂ ಶಾಶ್ವತ ಅಲ್ಲ. ನೆನಪಿರಲಿ. ನನ್ನ ಬಗ್ಗೆ ಏಕ ವಚನದಲ್ಲಿ ಮಾತನಾಡುವ ಯೋಗ್ಯತೆ ನಿಮಗಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ಇರಬಾರದಾ? ನಮ್ಮ ಸರ್ಕಾರ ಇದೆ. ಯಡಿಯೂರಪ್ಪ ಅವರು, ನೀವು ಮಾತನಾಡುತ್ತಿಲ್ಲವಾ ? ನಿಮ್ಮ ಸರ್ಕಾರ ಇದ್ದಾಗ ನನಗೆ ಬಳ್ಳಾರಿಯಲ್ಲಿ ಮಾತನಾಡಲು ಜಾಗ ಕೊಟ್ಟಿರಲಿಲ್ಲ. ನನಗೆ ಕುಡಿಯೋದಕ್ಕೆ ನೀರು ಕೇಳಿದ್ರೂ ಜನ ನೀರು ಕೊಡೋಕೂ ಭಯ ಪಡ್ತಾ ಇದ್ರು. ನಮ್ಮ ಯಜಮಾನರಾದ ಬಳ್ಳಾರಿ ಜನರನ್ನು ಇಷ್ಟು ಭಯದಲ್ಲಿ ಇಟ್ಟಿದ್ರಲ್ಲಾ , ಯಾವ ಮುಖ ಹೊತ್ತುಕೊಂಡು ಇದೇ ಜನರ ಬಳಿ ಮತ ಕೇಳಲು ಬಂದಿದ್ದೀರಿ? ನಾಚಿಕೆ ಆಗೋದಿಲ್ವಾ ನಿಮಗೆ ಎಂದು ಖಾರವಾಗಿ ಪ್ರಶ್ನಿಸಿದರು.

ಸಂತೋಷ್ ಲಾಡ್ ಅವರ ಬುಲೆಟ್ ಮಾತುಗಳು…

ಬಡವರ ಪಾಲಿನ ಪಾಂಡುರಂಗ ಮುಖ್ಯಮಂತ್ರಿ ಸಿದ್ದರಾಮಯ್ಯ

ಅವತ್ತು ಇಂದಿರಾಗಾಂಧಿ-
ಇವತ್ತು ಸಿದ್ದರಾಮಯ್ಯ ಅವರು ಕೊಟ್ಟ ಕಾರ್ಯಕ್ರಮಗಳನ್ನು ಬಿಟ್ಟರೆ ಬಿಜೆಪಿಯ ಯಾವ ಕಾರ್ಯಕ್ರಮ ರಾಜ್ಯದಲ್ಲಿದೆ?

TB ಡ್ಯಾಂನಿಂದ ಸಂಡೂರಿನ 136 ಹಳ್ಳಿಗಳಿಗೆ ಕುಡಿಯುವ ನೀರನ್ನು ಒದಗಿಸಿದ ಭಗೀರತ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ

ಜನಾರ್ದನರೆಡ್ಡಿಯವರೇ ನಿಮಗೆ ದೇವರು ನಾಲಗೆ ಕೊಟ್ಟಿದ್ದಾನೆ ಅಂತ ಸಿದ್ದರಾಮಯ್ಯ ಅವರ ವಯಸ್ಸಿಗೆ, ಘನತೆಗೂ, ಚರಿತ್ರೆಗೂ ಬೆಲೆ ಕೊಡದೆ ವೈಯುಕ್ತಿಕವಾಗಿ ಏಕವಚನದಲ್ಲಿ ಮಾತನಾಡಬೇಡಿ. ಯಡಿಯೂರಪ್ಪ ಅವರಿಗೂ ಹೀಗೇ ಏಕ ವಚನದಲ್ಲಿ ಮಾತನಾಡಿದ್ರಿ. ಇದರಿಂದ ನಿಮಗೆ ಖುಷಿ ಸಿಗಬಹುದು. ಆದರೆ ಒಳ್ಳೇದಾಗಲ್ಲ

ಇಂಥಾ ಜನಾರ್ದನರೆಡ್ಡಿಗೆ ಸರಿಯಾದ ಪಾಠ ಕಲಿಸಿ ಕಾಂಗ್ರೆಸ್ಸಿನ ಅನ್ನಪೂರ್ಣಮ್ಮ ಅವರನ್ನು ಗೆಲ್ಲಿಸಿ

ರಾಜಕೀಯ

ಚಾಮುಂಡೇಶ್ವರಿ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆಯಾದರೆ ‘ಚಾಮುಂಡೇಶ್ವರಿ ಚಲೋ’; ಆರ್.ಅಶೋಕ

ಚಾಮುಂಡೇಶ್ವರಿ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆಯಾದರೆ ‘ಚಾಮುಂಡೇಶ್ವರಿ ಚಲೋ’; ಆರ್.ಅಶೋಕ

ಚಾಮುಂಡೇಶ್ವರಿ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆಯಾದರೆ 'ಧರ್ಮಸ್ಥಳ ಚಲೋ' ಮಾದರಿಯಲ್ಲಿ 'ಚಾಮುಂಡೇಶ್ವರಿ ಚಲೋ' ಹೋರಾಟ ಮಾಡಲಾಗುವುದು: ಆರ್.ಅಶೋಕ (R.Ashoka)

[ccc_my_favorite_select_button post_id="113366"]
ಡೆನ್ಮಾರ್ಕ್‌ನಲ್ಲಿ ಶಾಸಕ ಶರತ್ ಬಚ್ಚೇಗೌಡ: ಹೆಲ್ತ್ಕೇರ್ ಡೆನ್ಮಾರ್ಕ್ ಸಂಸ್ಥೆಯ ಜೊತೆ ಸಭೆ

ಡೆನ್ಮಾರ್ಕ್‌ನಲ್ಲಿ ಶಾಸಕ ಶರತ್ ಬಚ್ಚೇಗೌಡ: ಹೆಲ್ತ್ಕೇರ್ ಡೆನ್ಮಾರ್ಕ್ ಸಂಸ್ಥೆಯ ಜೊತೆ ಸಭೆ

ಶಾಸಕ ಹಾಗೂ ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ (Sharath Bachegowda) ಡೆನ್ಮಾರ್ಕ್ಗೆ (Denmark) ಭೇಟಿ ನೀಡಿದ್ದಾರೆ.

[ccc_my_favorite_select_button post_id="113332"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

[ccc_my_favorite_select_button post_id="113312"]
ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ!| Video ನೋಡಿ

ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆ ಬದಿಯಲ್ಲಿನ ಚರಂಡಿ ನುಗ್ಗಿರುವ ಘಟನೆ ನಗರದ ಹೊರವಲಯದಲ್ಲಿನ Doddaballapura ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.

[ccc_my_favorite_select_button post_id="113161"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಸ್ಕೂಟರ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಸ್ಕೂಟರ್ ಸವಾರ ದುರ್ಮರಣ

ಸ್ಕೂಟರ್‌ ಸವಾರನ ಮೇಲೆ ಲಾರಿಯ ಚಕ್ರ ಹರಿದು (Accident), ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರುವ ಪಾಲನಜೋಗಿಹಳ್ಳಿ ಬಳಿ ನಡೆದಿದೆ.

[ccc_my_favorite_select_button post_id="113368"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!