ಪರಗಣ: ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯ ಉಸ್ತಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ವ್ಯಕ್ತಿಯೋರ್ವನ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಮೃತ ವ್ಯಕ್ತಿಯನ್ನು ಬಿಜೆಪಿಯ ಸಾಮಾಜಿಕ ಜಾಲತಾಣ ಖಾತೆಯ ಪ್ರಮುಖ ಪೃಥ್ವಿರಾಜ್ ನಸ್ಕರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನವೆಂಬರ್ 5ರಂದು ನಸ್ಕರ್ ನಾಪತ್ತೆಯಾಗಿರುವ ಬಗ್ಗೆ ಕುಟುಂಬಸ್ಥರು ದೂರು ದಾಖಲಿಸಿದ್ದರು. ಶನಿವಾರ ರಾತ್ರಿ ಪಕ್ಷದ ಕಚೇರಿಯಲ್ಲಿ ನಸ್ಕರ್ ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಇದನ್ನೂ ಓದಿ: Crime news: ರಸ್ತೆಗಾಗಿ ಸಂಬಂಧಿಯನ್ನೇ ಕಡಿದು ಕೊಲೆ
ಕೃತ್ಯಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಹತ್ಯೆಗೆ ವೈಯಕ್ತಿಕ ದ್ವೇಷ ಕಾರಣವಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ನಸ್ಕರ್ಗೆ ಹರಿತವಾದ ಆಯುಧಗಳಿಂದ ಹೊಡೆದು ಹತ್ಯೆ ಮಾಡಿರುವುದಾಗಿ ಬಂಧಿತ ಮಹಿಳೆ ತಪ್ರೊಪ್ಪಿಕೊಂಡಿರುವುದಾಗಿ ಹಿರಿಯ ಪೊಲೀಸ್ ಮೂಲಗಳ ಹೇಳಿಕೆ ಕುರಿತು ವರದಿಯಾಗಿದೆ.