Doddaballapura; ಕನ್ನಡಕ್ಕಾಗಿ ಮ್ಯಾರಾಥಾನ್

ದೊಡ್ಡಬಳ್ಳಾಪುರ: ಇಲ್ಲಿನ ಶ್ರೀ ಭುವನೇಶ್ವರಿ ಕನ್ನಡ ಸಂಘದ ವತಿಯಿಂದ ದೊಡ್ಡಬಳ್ಳಾಪುರ (Doddaballapura) ಅಥ್ಲೆಟಿಕ್ಸ್ ಸಂಸ್ಥೆ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ 5 ಕಿ.ಮೀ ಮ್ಯಾರಾಥಾನ್ ಹಮ್ಮಿಕೊಳ್ಳಲಾಗಿತ್ತು.

ನಗರದ ಸಿದ್ದಲಿಂಗಯ್ಯ ವೃತ್ತದಿಂದ ಭಗತ್ ಸಿಂಗ್ ಕ್ರೀಡಾಂಗಣದವರೆಗೆ ನಡೆದ ಸ್ಪರ್ಧೆಯಲ್ಲಿ ನೂರಾರು ಮಂದಿ ಕನ್ನಡದ ಸಂದೇಶ ಸಾರುವ ಟೀ ಷರ್ಟ್‌ಗಳನ್ನು ಧರಿಸಿ, ಮ್ಯಾರಾಥಾನ್‌ನಲ್ಲಿ ಭಾಗವಹಿಸಿದ್ದರು.

ಮ್ಯಾರಾಥಾನ್‌ಗೆ ಚಾಲನೆ ನೀಡಿದ ಎನ್‌ಸಿಸಿ ಅಧಿಕಾರಿ ಮೇಜರ್ ಮಹಾಬಲೇಶ್ವರ್ ಮಾತನಾಡಿ, ಕನ್ನಡದ ಉಳಿವಿಗಾಗಿ ಇಂದು ಹೋರಾಟ ನಡೆಸುವ ಅನಿವಾರ್‍ಯತೆ ಬಂದೊದಗಿದೆ. ಅನ್ಯ ಭಾಷಿಕರು ಇಲ್ಲಿ ನೆಲಸಬೇಕಾದರೆ ಕನ್ನಡ ಕಲಿಯಲೇ ಬೇಕು. ಇಲ್ಲವಾದಲ್ಲಿ ನಿಮ್ಮನ್ನು ಹೊರದೂಡಬೇಕಾಗುತ್ತದೆ.

ದೇಶದ ಭವಿಷ್ಯ ರೂಪಿಸುವ ಇಂದಿನ ಯುವ ಜನತೆ ದುಶ್ಚಟಗಳಿಗೆ ದಾಸರಾಗದೇ, ಕ್ರಿಯಾಶೀಲರಾಗಿರಬೇಕು. ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್‍ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ನಗರಸಭಾ ಸದಸ್ಯ ಹಾಗೂ ಶ್ರೀ ಭುವನೇಶ್ವರಿ ಕನ್ನಡ ಸಂಘದ ಗೌ.ಅಧ್ಯಕ್ಷ ಟಿ.ಎನ್.ಪ್ರಭುದೇವ್ ಮಾತನಾಡಿ, ಭುವನೇಶ್ವರಿ ಕನ್ನಡ ಸಂಘ ಹಲವಾರು ಕನ್ನಡಪರ ಹೋರಾಟಗಳನ್ನು ಮಾಡುತ್ತಾ ಬಂದಿದೆ. ಕನ್ನಡದ ಉಳಿವಿಗಾಗಿ, ಸ್ಥಳೀಯ ಕನ್ನಡಿಗರಿಗೆ ಉದ್ಯೋಗಕ್ಕಾಗಿ, ಆಡಳಿತದಲ್ಲಿ ಕನ್ನಡ ಭಾಷೆಗಾಗಿ ಓಡೋಣ ಬನ್ನಿ ಎನ್ನುವ ಧ್ಯೇಯದೊಂದಿಗೆ ಮ್ಯಾರಾಥಾನ್ ಕಾರ್‍ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮವಾಗಬೇಕು. ಇಲ್ಲಿನ ಜನರ ಬದುಕು ಹಸನಾಗಬೇಕಿದೆ ಎಂದರು.

ಕಾರ್‍ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷ ಮಲ್ಲೇಶ್, ಶ್ರೀ ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ಪಿ.ನವೀನ್, ನಗರಸಭಾ ಸದಸ್ಯರಾದ ಎಚ್.ಎಸ್.ಶಿವಶಂಕರ್, ಪದ್ಮನಾಭ್, ವೆಂಕಟೇಶ್, ಕನ್ನಡ ಪಕ್ಷದ ಮುಖಂಡರಾದ ಸಂಜೀವ್ ನಾಯಕ್, ಡಿ.ಪಿ.ಆಂಜನೇಯ, ಮುಖಂಡರಾದ ಕುಂಟನಹಳ್ಳಿ ಮಂಜುನಾಥ್, ಕೆ.ಎಲ್.ಶಿವರಾಂ, ರಾಘವ, ಕುಮಾರ್, ನಾಗರಾಜ್, ನಾರಾಯಣಪ್ಪ ದೊಡ್ಡಬಳ್ಳಾಪುರ ಅಥ್ಲೆಟಿಕ್ಸ್ ಸಂಸ್ಥೆಯ ಶ್ರೀನಿವಾಸ್ ಮೊದಲಾದವರು ಭಾಗವಹಿಸಿದ್ದರು.

ವೇದಿಕೆ ಕಾರ್ಯಕ್ರಮ

ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಬಹುಮಾನ ವಿತರಣಾ ಕಾರ್‍ಯಕ್ರಮ ನಡೆಯಿತು. ವಿಜೇತರಾದವರಿಗೆ ಮಹಿಳಾ ಮತ್ತು ಪುರುಷ ವಿಭಾಗದಲ್ಲಿ ಪ್ರತ್ಯೇಕವಾಗಿ ಬಹುಮಾನಗಳನ್ನು ನೀಡಲಾಯಿತು.

ಹಿರಿಯ ಜೆಡಿಎಸ್ ಮುಖಂಡ ಎಸ್.ಎಂ.ಹರೀಶ್ ಗೌಡ ಬಹುಮಾನ ವಿತರಣೆ ಸಮಾರಂಭದಲ್ಲಿ ಮಾತನಾಡಿ, ದೈಹಿಕ ಸದೃಢತೆಗೆ ಕ್ರೀಡೆಗಳು ಹೆಚ್ಚು ಸಹಕಾರಿಯಾಗಲಿದ್ದು, ಕನ್ನಡದ ವಿಚಾರಕ್ಕಾಗಿ ಮ್ಯಾರಥಾನ್ ನಡೆಯುತ್ತಿರುವುದು ಸಂತಸದ ವಿಚಾರ. ಕನ್ನಡ ರಾಜ್ಯೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡು ನುಡಿಗೆ ಶ್ರಮಿಸುವ ಪಣ ತೊಡಬೇಕಿದೆ.

ಕನ್ನಡ ಪರ ಹೋರಾಟಗಾರರು, ಹಿರಿಯ ಚೇತನ ತನ ಪ್ರಭುದೇವ್ ಅವರ ಕನ್ನಡ ಪರ ಕಾಳಜಿ ಯುವ ಸಮುದಾಯಕ್ಕೆ ಮಾದರಿಯಾಗಿದೆ. ನಗರ ವ್ಯಾಪ್ತಿಯಲ್ಲಿ ಆರಂಭವಾಗಿರುವ ಈ ಮ್ಯಾರಾಥಾನ್ ಮುಂಬರುವ ದಿನಗಳಲ್ಲಿ ತಾಲೂಕಿನ ಗ್ರಾಮಾಂತರ ಪ್ರದೇಶಗಳಾದ ಸಾಸಲು, ದೊಡ್ಡಬೆಳವಂಗಲ, ಮಧುರೆ, ತೂಬಗೆರೆ ಹೋಬಳಿ ವ್ಯಾಪ್ತಿಗೂ ವ್ಯಾಪಿಸಬೇಕಿದೆ ಎಂದರು.

ಮ್ಯಾರಥಾನ್‌ನ ಪುರುಷ ವಿಭಾಗದಲ್ಲಿ ಕ್ರಮವಾಗಿ ದರ್ಶನ್.ಎಚ್.ಎ, ನಂದನ್, ದರ್ಶನ್.ಕೆ.ವಿ, ನವೀನ್.ಎ.ಎಂ, ಮನೋಜ್ ಕುಮಾರ್.ಕೆ.ಎಸ್, ವಿಕಾಸ್ ಹಾಗೂ ಮಹಿಳೆಯರ ವಿಭಾಗದಲ್ಲಿ ಕ್ರಮವಾಗಿ ಪ್ರಣತಿ ಜಯಲಕ್ಷ್ಮೀ, ದಿದ್ಯ, ನೀತು, ರುಕ್ಸಾರ್ ಶರೀಫ್, ರಂಜಿಯಾ ಬಹುಮಾನ ಗಳಿಸಿದ್ದಾರೆ.

ಕಾರ್‍ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷ ಮಲ್ಲೇಶ್, ತಾಲೂಕು ಕನ್ನಡ ಸಾಹಿತ್ಯ ರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷೆ ಪ್ರಮೀಳಾ ಮಹದೇವ್, ನಿವೃತ್ತ ಶಿಕ್ಷಕ ಕೆ.ಮಹಾಲಿಂಗಯ್ಯಶ್ರೀ ಭುವನೇಶ್ವರಿ ಕನ್ನಡ ಸಂಘದ ಗೌ.ಅಧ್ಯಕ್ಷ ಟಿ.ಎನ್.ಪ್ರಭುದೇವ್, ಅಧ್ಯಕ್ಷ ಪಿ.ನವೀನ್, ಮತ್ತಿತರರು ಭಾಗವಹಿಸಿದ್ದರು.

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

ವಿವಿಧ ಇಲಾಖೆಯ ಅಧಿಕಾರಿಗಳು ದೊಡ್ಡಬಳ್ಳಾಪುರ ತಾಲೂಕಿನ 13 ಗ್ರಾಪಂಗಳಿಗೆ ಭೇಟಿನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ. Ceo

[ccc_my_favorite_select_button post_id="102329"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!