ದೊಡ್ಡಬಳ್ಳಾಪುರ: ಸಿರಿಧಾನ್ಯ (Millet) ಮತ್ತು ಸಾವಯವ ಅಂತರಾಷ್ಟ್ರೀಯ ಮೇಳ-2025 ದ ಆಂಗವಾಗಿ ರಾಜ್ಯ ಮಟ್ಟದ ಸಿರಿಧಾನ್ಯ ಸ್ಪರ್ದೆಯ ಪೂರ್ವಭಾವಿಯಾಗಿ ಜಿಲ್ಲಾಮಟ್ಟದಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಕೃಷಿ ಇಲಾಖೆಯಿಂದ ಆಯೋಜಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಜಿಲ್ಲಾಮಟ್ಟದಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ನವೆಂಬರ್ 27 ರಂದು ಬೆಳಿಗ್ಗೆ 10ಕ್ಕೆ ಏರ್ಪಡಿಸಲಾಗಿದ್ದು, ಸದರಿ ಕಾರ್ಯಕ್ರಮದಲ್ಲಿ ಆಸಕ್ತ ರೈತ ಮಹಿಳೆಯರು ಭಾಗವಹಿಸಲು ಅರ್ಜಿಯನ್ನು ಅಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು 2024ರ ನವೆಂಬರ್ 25 ರೊಳಗೆ ಇ-ಮೇಲ್ ವಿಳಾಸ: adaagridbp@yahoo.in ಅಥವಾ ಖುದ್ದಾಗಿ, ಪೋಸ್ಟ್ ಮುಖಾಂತರ ಉಪ ಕೃಷಿ ನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ /ಸಹಾಯಕ ಕೃಷಿ ನಿರ್ದೇಶಕರ ಕಛೇರಿ, ದೊಡ್ಡಬಳ್ಳಾಪುರರವರ ವಿಳಾಸಕ್ಕೆ ಕಳುಹಿಸಬೇಕು.
ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ (ಸಿರಿಧಾನ್ಯಗಳ ಸಿಹಿ, ಖಾರ ಮತ್ತು ಮರೆತು ಹೋದ ಖಾದ್ಯಗಳಿಗೆ ಮಾತ್ರ) ನೀಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರು, ಬೆಂಗಳೂರು ತಿಳಿಸಿರುತ್ತಾರೆ.
ವಿಶೇಷ ಸೂಚನೆ: ವಿದ್ಯಾರ್ಥಿಗಳು, ಕೃಷಿ ಇಲಾಖೆಯ ಅಧಿಕಾರಿ /ಸಿಬ್ಬಂದಿಗಳು ಮತ್ತು ಅವರ ಕುಟುಂಬದ ಸದಸ್ಯರು ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.