BPL ಕಾರ್ಡ್‌ ವಾಪಸ್‌ ನೀಡಿ, ಇಲ್ಲದಿದ್ದರೆ ತೀವ್ರ ಹೋರಾಟ: ಆರ್‌.ಅಶೋಕ ಎಚ್ಚರಿಕೆ

ಬೆಂಗಳೂರು: ಸದನ ಆರಂಭವಾಗುವ ಮುನ್ನವೇ ರಾಜ್ಯ ಸರ್ಕಾರ ಜನರಿಗೆ BPL ಕಾರ್ಡ್‌ ವಾಪಸ್‌ ನೀಡಬೇಕು. ಇಲ್ಲವಾದರೆ ತೀವ್ರವಾದ ಹೋರಾಟ ಮಾಡಿ ಸರ್ಕಾರಿ ಕಚೇರಿಗಳಿಗೆ ಹಾಗೂ ವಿಧಾನಸೌಧಕ್ಕೆ ಬೀಗ ಹಾಕುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಕೆ ನೀಡಿದರು.

ಜಯನಗರದ ಅರಸು ಕಾಲೋನಿಯಲ್ಲಿ ರೇಷನ್‌ ಕಾರ್ಡ್‌ ರದ್ದುಗೊಂಡ ಕುಟುಂಬದವರನ್ನು ಅವರು ಭೇಟಿ ಮಾಡಿದರು.

ನಂತರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನಭಾಗ್ಯ ಎಂದು ಹೇಳಿ ಕನ್ನಭಾಗ್ಯ ಕೊಟ್ಟಿದ್ದಾರೆ. ಅನ್ನವನ್ನು ಕದ್ದು ಲಕ್ಷಾಂತರ ಜನರಿಗೆ ಅನ್ಯಾಯ ಮಾಡಿದ್ದಾರೆ. ಅರಸು ಕಾಲೋನಿಯಲ್ಲಿ 45 ವರ್ಷದಿಂದ ರೇಷನ್‌ ಕಾರ್ಡ್‌ ಹೊಂದಿದ್ದ ವೃದ್ಧೆ, ಈಗ ಅರ್ಹತೆ ಕಳೆದುಕೊಂಡಿದ್ದಾರೆ. ಅಂಕಿ ಅಂಶದ ಪ್ರಕಾರ, 250 ಸರ್ಕಾರಿ ನೌಕರರ ಬಳಿ ರೇಷನ್‌ ಕಾರ್ಡ್‌ ಇದ್ದರೂ, 12 ಲಕ್ಷ ಜನರ ಕಾರ್ಡ್‌ ರದ್ದು ಮಾಡಲು ಸರ್ಕಾರ ಮುಂದಾಗಿದೆ.

ಏನೂ ಭಯ ಬೇಡವೆಂದು ಸಿಎಂ ಸಿದ್ದರಾಮಯ್ಯ ಹೇಳಿದರೆ, ಆಹಾರ ಸಚಿವರು ಮತ್ತೆ ಅರ್ಜಿ ಹಾಕಿ ಎಂದು ಹೇಳುತ್ತಾರೆ. ಕಾಂಗ್ರೆಸ್‌ ನಾಯಕರು ತಪ್ಪು ಮಾಡಿದ ಮೇಲೆ ಜನರು ಯಾಕೆ ಮರಳಿ ಅರ್ಜಿ ಹಾಕಬೇಕು? ಎಂದು ಪ್ರಶ್ನೆ ಮಾಡಿದರು.

ಮರಳಿ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಿದರೆ ಒಂದು ಕಾರ್ಡ್‌ಗೆ 10-15 ಸಾವಿರ ರೂ. ಲಂಚ ನೀಡಬೇಕಾಗುತ್ತದೆ. ಯಾರೂ ಅರ್ಜಿ ಹಾಕಬಾರದು, ಸರ್ಕಾರವೇ ಮರಳಿ ರೇಷನ್‌ ಕಾರ್ಡ್‌ ಕೊಡಬೇಕು. ದೇವಸ್ಥಾನದ ಮುಂದೆ ಹೂ ಮಾರುವವರು, ಸೊಪ್ಪು ಮಾರುವವರ ರೇಷನ್‌ ಕಾರ್ಡ್‌ ರದ್ದುಪಡಿಸಲಾಗಿದೆ. ಇದರ ವಿರುದ್ಧ ಸದನದಲ್ಲಿ ಹಾಗೂ ಹೊರಗೆ ಪ್ರತಿಭಟಿಸಲಾಗುವುದು ಎಂದು ತಿಳಿಸಿದರು.

ಏಕಾಏಕಿ ರೇಷನ್‌ ಕಾರ್ಡ್‌ ರದ್ದು ಮಾಡಲು ಸರ್ಕಾರಕ್ಕೆ ಅಧಿಕಾರವಿಲ್ಲ. ಸರ್ಕಾರದ ಖಜಾನೆಯಲ್ಲಿ ಹಣ ಖಾಲಿಯಾಗಿದ್ದು, ರಸ್ತೆ ಗುಂಡಿ ಮುಚ್ಚಲು ಕೂಡ ಹಣವಿಲ್ಲ. 20-30 ಸಾವಿರ ಕೋಟಿ ರೂ. ಉಳಿಸಿ, ಶಾಸಕರ ಬಂಡಾಯ ಶಮನಕ್ಕೆ ಬಳಸಲಾಗುತ್ತದೆ ಎಂದು ದೂರಿದರು.

ಸಚಿವರ ಮನೆ ಆಧುನೀಕರಣಕ್ಕೆ 40-50 ಕೋಟಿ ರೂ., ಸಿಎಂ ಮನೆ ನವೀಕರಣಕ್ಕೆ 2 ಕೋಟಿ ರೂ. ಖರ್ಚು ಮಾಡಲಾಗಿದೆ. ಆದರೆ ಬಡ ಜನರಿಗೆ ಅಕ್ಕಿ ಕೊಡಲು ಸರ್ಕಾರದ ಬಳಿ ಹಣವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಸಿ.ಕೆ.ರಾಮಮೂರ್ತಿ ಉಪಸ್ಥಿತರಿದ್ದರು.

ಅನ್ನ, ಆರೋಗ್ಯದಲ್ಲಿ ಮೋಸ

ಇದೇ ವೇಳೆ ಆರ್‌.ಅಶೋಕ ಅವರು ಸಂಜಯಗಾಂಧಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ಕಳೆದ 16 ತಿಂಗಳಲ್ಲಿ ಜನರ ತಲೆಗೆ ಚಪ್ಪಡಿ ಎಳೆಯುವ ಕೆಲಸ ಮಾಡಿದೆ. ಆರೋಗ್ಯ ಇಲಾಖೆಯಲ್ಲಿ ಹಣ ಕೊರತೆಯಿಂದಾಗಿ ಔಷಧಿ ಖರೀದಿ ಸಾಧ್ಯವಾಗುತ್ತಿಲ್ಲ. ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಅನುದಾನ ಕಡಿತ ಮಾಡಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ವಹಣೆಗೂ ಹಣವಿಲ್ಲ. ಇದಕ್ಕಾಗಿ ಸೇವಾ ಶುಲ್ಕವನ್ನು ಏರಿಸಲಾಗಿದೆ. ಅನ್ನ ಮತ್ತು ಆರೋಗ್ಯದ ವಿಚಾರದಲ್ಲಿ ಸಿದ್ದರಾಮಯ್ಯನವರ ಸರ್ಕಾರ ಜನರಿಗೆ ಮೋಸ ಮಾಡಿದೆ ಎಂದು ದೂರಿದರು.

ಒಂದು ಕಡೆ ಜಮೀನು ಹೋಗುತ್ತಿದೆ, ಮತ್ತೊಂದು ಕಡೆ ರೇಷನ್‌ ಕಾರ್ಡ್‌ ಹೋಗುತ್ತಿದೆ, ಈಗ ಉಚಿತ ಆರೋಗ್ಯವೂ ದೊರೆಯುತ್ತಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಶುಲ್ಕಗಳನ್ನು ಹೆಚ್ಚು ಮಾಡಿರುವುದೇ ಖಜಾನೆ ಖಾಲಿಯಾಗಿರುವುದಕ್ಕೆ ಸಾಕ್ಷಿ. ಐದು ಗ್ಯಾರಂಟಿಗಳಿಗಾಗಿ ಜನರ ಮೇಲೆ ತೆರಿಗೆ ಹೊರೆ ಹಾಕಲಾಗುತ್ತಿದೆ. ಸಿಎಂ ಸಿದ್ದರಾಮಯ್ಯನವರ ಪ್ರಕಾರ ಇದು ಬಡವರ ಪರವಾದ ಸರ್ಕಾರವೇ? ಎಂದು ಪ್ರಶ್ನಿಸಿದರು.

ಮುಡಾ ಹಗರಣದ ನಂತರ ಸಿಎಂ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡು ಜನರ ಮೇಲೆ ತೆರಿಗೆ ಹಾಕುತ್ತಿದ್ದಾರೆ. ಲಂಚ ಇದ್ದರೆ ಮಾತ್ರ ವಿಧಾನಸೌಧಕ್ಕೆ ಪ್ರವೇಶ ಎಂಬ ಸ್ಥಿತಿ ಇದೆ. ಆರೋಗ್ಯ ಸೇವೆಯನ್ನು ಸಂಪೂರ್ಣ ಉಚಿತವಾಗಿ ನೀಡಬೇಕು. ಇದರ ಮೇಲೂ ಸರ್ಕಾರ ವಕ್ರದೃಷ್ಟಿ ಬೀರಿದೆ ಎಂದು ಆಕ್ರೋಶ ಹೊರಹಾಕಿದರು.

ರಾಜಕೀಯ

Cmsiddaramaiah| ರಾಜ್ಯಕ್ಕೆ ನಬಾರ್ಡ್ ನೀಡುವ ಸಾಲದಲ್ಲಿ ಇಳಿಕೆ: ರಾಜ್ಯದ ರೈತರಿಗೆ ಮಾಡುತ್ತಿರುವ ಅನ್ಯಾಯ – cm ಸಿದ್ದರಾಮಯ್ಯ

Cmsiddaramaiah| ರಾಜ್ಯಕ್ಕೆ ನಬಾರ್ಡ್ ನೀಡುವ ಸಾಲದಲ್ಲಿ ಇಳಿಕೆ: ರಾಜ್ಯದ ರೈತರಿಗೆ ಮಾಡುತ್ತಿರುವ ಅನ್ಯಾಯ

ಕೇಂದ್ರ ಹಣಕಾಸು ಸಚಿವರು ಅಸಹಾಯಕತೆ ವ್ಯಕ್ತಪಡಿಸಿದರೆ ಹೇಗೆ? Cmsiddaramaiah

[ccc_my_favorite_select_button post_id="96937"]
naxal encounter; ವಿಕ್ರಂ ಗೌಡ ಅವರದ್ದು ನಕಲಿ‌ ಎನ್‌ಕೌಂಟರ್ ಅಲ್ಲ; ಡಾ.ಜಿ.ಪರಮೇಶ್ವರ

naxal encounter; ವಿಕ್ರಂ ಗೌಡ ಅವರದ್ದು ನಕಲಿ‌ ಎನ್‌ಕೌಂಟರ್ ಅಲ್ಲ; ಡಾ.ಜಿ.ಪರಮೇಶ್ವರ

ಕಾನೂನು ಬಾಹಿರವಾಗಿ, ಅನುಮತಿ ಇಲ್ಲದೆ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ. ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿದ್ದ. ನಕ್ಸಲ್ ನಿಗ್ರಹಕ್ಕಾಗಿ ರಾಜ್ಯದಲ್ಲಿ ಮತ್ತು ಬೇರೆಬೇರೆ ರಾಜ್ಯಗಳಲ್ಲಿ ನಕ್ಸಲ್ ನಿಗ್ರಹ ಪಡೆಯನ್ನು ರಚಿಸಲಾಗಿದೆ. naxal encounter

[ccc_my_favorite_select_button post_id="96905"]
happy international men’s day 2024

happy international men’s day 2024

ಪುರುಷರು ಮತ್ತು ಹುಡುಗರ ಜೀವನ, ಸಾಧನೆಗಳು ಮತ್ತು ಪಾತ್ರಗಳನ್ನು ಗುರುತಿಸಲು ಮತ್ತು ಆಚರಿಸಲು ಇದು ಒಂದು ಅವಕಾಶವಾಗಿ happy international men's day 2024

[ccc_my_favorite_select_button post_id="96756"]
miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ಡೆನ್ಮಾರ್ಕ್‌ನ ವಿಕ್ಟೋರಿಯಾ ಕ್ಜೇರ್

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ಡೆನ್ಮಾರ್ಕ್‌ನ ವಿಕ್ಟೋರಿಯಾ ಕ್ಜೇರ್

ಭಾರತವನ್ನು ಪ್ರತಿನಿಧಿಸಿದ್ದ ರಿಯಾ ಸಿಂಘಾ ಅಂತಿಮ ಸುತ್ತಿನಲ್ಲಿ ಟಾಪ್​ 12 ಸ್ಥಾನ ಪಡೆಯುವಲ್ಲಿ ವಿಫಲರಾಗಿದರು. miss universe

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

vivek ramaswamy: ಡೊನಾಲ್ಡ್ ಟ್ರಂಪ್ ಕ್ಯಾಬಿನೆಟ್‌ನಲ್ಲಿ ಭಾರತ

[ccc_my_favorite_select_button post_id="96243"]

canva down: ಬಳಕೆದಾರರ ಪರದಾಟ

[ccc_my_favorite_select_button post_id="96202"]

ಕ್ರೀಡೆ

Doddaballapura: ದೇವರಾಜ್ ಅರಸ್ ಅಂತರಾಷ್ಟ್ರೀಯ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಸಂಭ್ರಮ

Doddaballapura: ದೇವರಾಜ್ ಅರಸ್ ಅಂತರಾಷ್ಟ್ರೀಯ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಸಂಭ್ರಮ

ಕ್ರೀಡೆಯಲ್ಲಿ ಯಶಸ್ಸು ದೊರಕಲು ನಿರಂತರ ಅಭ್ಯಾಸ ಅಗತ್ಯ. ಸೋಲಿನಿಂದ ಹತಾಶರಾಗದೆ ಗೆಲುವಿನ ಗುರಿಯೆಡೆಗೆ ಪ್ರಯತ್ನ ನಿರಂತರವಾಗಿರಬೇಕು ಎಂದು ರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಆರ್ಯ ಎಸ್ ಅವರು ತಿಳಿಸಿದರು . Doddaballapura

[ccc_my_favorite_select_button post_id="96848"]
Doddaballapura: ಟಿವಿ ನೋಡುವ ವಿಚಾರದಲ್ಲಿ ಕಿರಿಕ್.. 5 ತಿಂಗಳ ಗರ್ಭಿಣಿ ನೇಣಿಗೆ ಶರಣು..!

Doddaballapura: ಟಿವಿ ನೋಡುವ ವಿಚಾರದಲ್ಲಿ ಕಿರಿಕ್.. 5 ತಿಂಗಳ ಗರ್ಭಿಣಿ ನೇಣಿಗೆ ಶರಣು..!

ಬಾಗಿಲು ಹೊಡೆಯಲು ತೀವ್ರವಾಗಿ ಪ್ರಯತ್ನಿಸಿದ್ದಾರಾದರೂ ನೂತನವಾಗಿ ನಿರ್ಮಿಸಿದ ಮನೆಯಾದ ಕಾರಣ ಬಾಗಿಲು ಒಡೆಯಲು ವಿಳಂಭವಾಗಿದೆ. Doddaballapura

[ccc_my_favorite_select_button post_id="96909"]
Accident; ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ತಂದೆ-ಮಗ ದುರ್ಮರಣ..!

Accident; ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ತಂದೆ-ಮಗ ದುರ್ಮರಣ..!

ಮೃತ ದುರ್ದೈವಿಗಳನ್ನು 35 ವರ್ಷದ ಗುರುರಾಜು, 2 ವರ್ಷದ ರಿಶಾಂಕ್ ಎಂದು ಗುರುತಿಸಲಾಗಿದೆ. Accident

[ccc_my_favorite_select_button post_id="96846"]

Doddaballapura accident news: ಸತತ ಮೂರನೇ ಅಪಘಾತ..!

[ccc_my_favorite_select_button post_id="96185"]

Doddaballapura accident news: ಗೂಡ್ಸ್ ವಾಹನ ಮೊಗಚಿ

[ccc_my_favorite_select_button post_id="96179"]

Doddaballapura accident news: ರಸ್ತೆ ಬದಿ ಟೀ

[ccc_my_favorite_select_button post_id="96170"]

ಆರೋಗ್ಯ

ಸಿನಿಮಾ

pushpa 2 ಟ್ರೇಲರ್ ಬಿಡುಗಡೆ; ಹೇಗಿದೆ ನೋಡಿ

pushpa 2 ಟ್ರೇಲರ್ ಬಿಡುಗಡೆ; ಹೇಗಿದೆ ನೋಡಿ

ಅಲ್ಲು ಅರ್ಜುನ್, ಡಾಲಿ ಧನಂಜಯ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್ ಮುಂತಾದವರು ನಟಿಸಿದ್ದ ‘ಪುಷ್ಪ’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು. ಅದರ ಸೀಕ್ವೆಲ್ pushpa 2

[ccc_my_favorite_select_button post_id="96641"]