ತುಮಕೂರು: ಸಾಮಾಜಿಕ ಜಾಲತಾಣ ದಲ್ಲಿ ಕೋಮು ವೈಷಮ್ಯದ ಪೋಸ್ಟ್ ಹಾಕಿದ ಆರೋಪದಡಿ ಬಿಜೆಪಿ (BJP) ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಬಂಧಿಸಲಾಗಿದೆ.
ಶಕುಂತಲಾ ನಟರಾಜ್ ವಿರುದ್ದ ನ.24ರಂದು ಎಫ್‌ಐಆರ್ ದಾಖಲಾಗಿತ್ತು. ಈ ಹಿನ್ನೆಲೆ ತುಮಕೂರು ಜಯನಗರ ಪೊಲೀಸರು ಶಕುಂತ ಲಾರನ್ನು ಬಂಧಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಕೋಮು ವೈಷಮ್ಯದ ಪೋಸ್ಟ್ ಹಾಕಿದ ಹಿನ್ನೆಲೆ ಪೊಲೀಸ್ ಸಿಬ್ಬಂದಿ ಉಮಾಶಂಕರ್ ದೂರು ನೀಡಿದ್ದರು. ಅದರಂತೆ ಕಲಂ 299 ಬಿಎನ್ ಎಸ್ ಅಡಿ ಎಫ್‌ಐಆರ್ ದಾಖಲಾಗಿತ್ತು.
ಬುಧವಾರ ಸಂಜೆ ಪೊಲೀಸರು ಶಕುಂತಲಾರನ್ನು ಬಂಧಿಸಿದ್ದಾರೆಂದು ವರದಿಯಾಗಿದೆ.