2ನೇ ವಿಮಾನ ನಿಲ್ದಾಣ: ಸದನದಲ್ಲಿ ಸಚಿವ ಎಂಬಿ ಪಾಟೀಲ ಉತ್ತರ| MB Patila

ಬೆಳಗಾವಿ: ಕೈಗಾರಿಕಾ ಪ್ರದೇಶಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯ ಉದ್ದೇಶಗಳಿಗೆಂದು ಮೀಸಲಿಟ್ಟಿರುವ ಸಿ.ಎ. ನಿವೇಶನಗಳನ್ನು ಪಾರದರ್ಶಕವಾಗಿ ಮತ್ತು ನಿಯಮಗಳಿಗೆ ಅನುಸಾರವಾಗಿ ಹಂಚಲಾಗುತ್ತಿದೆ. ಜೊತೆಗೆ ಇದರಲ್ಲಿ ಎಸ್ಸಿ-ಎಸ್ಟಿ ಸಮುದಾಯಗಳ ಅರ್ಹರಿಗೂ ಅವಕಾಶ ಸಿಗಬೇಕೆಂದು ಮೀಸಲಾತಿಯನ್ನು ಕಡ್ಡಾಯಗೊಳಿಸಲಾಗಿದೆ. ಇದರಲ್ಲಿ ಸ್ವಜನ ಪಕ್ಷಪಾತವಾಗಲಿ, ಅಕ್ರಮವಾಗಲಿ ಏನೂ ನಡೆದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ (MB Patila) ಮಂಗಳವಾರ ಇಲ್ಲಿ ಸ್ಪಷ್ಟಪಡಿಸಿದರು.

ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಸಿಟಿ ರವಿ ಅವರು ಕೇಳಿದ ಪ್ರಶ್ನೆಗೆ ಅವರು ವಿವರವಾದ ಉತ್ತರ ನೀಡಿದರು.

ಕೈಗಾರಿಕಾ ಪ್ರದೇಶಗಳಲ್ಲಿ ಶಾಲೆ, ಆಸ್ಪತ್ರೆ, ವಸತಿ ಸಮುಚ್ಚಯಗಳು, ಬ್ಯಾಂಕು, ಪೆಟ್ರೋಲ್ ಬಂಕ್, ಕ್ಯಾಂಟೀನ್, ಸಮುದಾಯ ಭವನ, ಆರ್ & ಡಿ ಮತ್ತು ನಾವೀನ್ಯತಾ ಕೇಂದ್ರಗಳು ಇತ್ಯಾದಿ ಉದ್ದೇಶಗಳಿಗೆಂದು ಸಿಎ ನಿವೇಶನಗಳನ್ನು ಇಟ್ಟುಕೊಳ್ಳಲಾಗಿದೆ.

ಹೋಟೆಲುಗಳು ಕೂಡ ಇದರಡಿಯಲ್ಲಿಯೇ ಬರುತ್ತವೆ. ಆದರೆ, ಒಬ್ಬರಿಗೆ ಒಂದೇ ಸಿಎ ನಿವೇಶನವನ್ನು ಮಾತ್ರ ಕೊಡಬೇಕೆಂಬ ನಿರ್ಬಂಧ ಕೂಡ ಇಲ್ಲ. ಅರ್ಹ ಸಂಸ್ಥೆಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಈ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಪತ್ರಿಕೆಗಳಲ್ಲಿ ಸರಿಯಾಗಿ ಜಾಹೀರಾತು ನೀಡಿಲ್ಲ ಎನ್ನುವ ಸಿಟಿ ರವಿ ಅವರ ಆಕ್ಷೇಪಣೆಗೆ ಉತ್ತರಿಸಿದ ಪಾಟೀಲರು, `ಮುಖ್ಯ ವಾಹಿನಿಯ ರಾಜ್ಯ ಪತ್ರಿಕೆಗಳ ಜತೆಗೆ ನಾನು ಸಚಿವನಾದ ಮೇಲೆ ಆನ್ ಲೈನ್ ಮೂಲಕವೂ ಜಾಹೀರಾತು ನೀಡುವ ವ್ಯವಸ್ಥೆಯನ್ನು ಜಾರಿಗೆ ತಂದಿದ್ದೇನೆ.

ಹೀಗೆ ಒಟ್ಟು 93 ಕಡೆಗೆ ಜಾಹೀರಾತು ನೀಡಲಾಗಿತ್ತು. 42 ಸಿ.ಎ. ನಿವೇಶನಗಳಿಗೆ ಒಂದೊಂದೇ ಅರ್ಜಿ ಬಂದಿದ್ದವು. ಇವುಗಳನ್ನು ತಿರಸ್ಕರಿಸಲಾಗಿದೆ. ಎರಡು ಸಿ.ಎ. ನಿವೇಶನಗಳನ್ನು ಉದ್ಯಮಿಗಳು ಸರಕಾರಕ್ಕೆ ಹಿಂದಿರುಗಿಸಿದ್ದಾರೆ. ಇನ್ನೂ 39 ನಿವೇಶನಗಳು ಹಾಗೆಯೇ ಉಳಿದಿವೆ’ ಎಂದು ವಿವರಿಸಿದರು.

ಹಿಂದೆಲ್ಲ ಕೈಗಾರಿಕಾ ಸಚಿವರೇ ಈ ನಿವೇಶನಗಳ ಹಂಚಿಕೆ ಸಂಬಂಧ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಿದ್ದರು. ಆದರೆ, ನಾನು ಸಚಿವನಾಗಿ ಬಂದ ಮೇಲೆ ಇದಕ್ಕಾಗಿ ಕೆಐಎಡಿಬಿ ಸಿಇಒ ನೇತೃತ್ವದ ಉನ್ನತ ಸಮಿತಿಯನ್ನು ರಚಿಸಿದ್ದೇನೆ. ಒಟ್ಟು 95 ಎಕರೆಯಷ್ಟು ಜಾಗದಲ್ಲಿ ಇನ್ನೂ 152 ನಿವೇಶನಗಳಿವೆ.

ಹಿಂದಿನ ಬಿಜೆಪಿ ಸರಕಾರವು ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕಿಗೆ ಸೇರಿದ ಜಾಗದಲ್ಲಿ ಒಂದು ಶಿಕ್ಷಣ ಸಂಸ್ಥೆಗೆ ಜಮೀನು ಕೊಟ್ಟಿದ್ದರಿಂದ ಬೊಕ್ಕಸಕ್ಕೆ 135 ಕೋಟಿ ರೂ. ನಷ್ಟವಾಗಿದೆ. ಇಂತಹ ಹಂಚಿಕೆಗಳಲ್ಲಿ ಪ್ರತಿಪಕ್ಷದವರು ರಾಜಕೀಯ ಮಾಡಲು ನೋಡಿದರೆ, ನಮಗೂ ರಾಜಕೀಯ ಮಾಡಲು ಬರುತ್ತದೆ ಎಂದು ಅವರು ತಿರುಗೇಟು ನೀಡಿದರು.

ರೈತರಿಗೆ ನೇರ ಪಾವತಿ

ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಎಂ ಬಿ ಪಾಟೀಲ, `ಕೈಗಾರಿಕೋದ್ದೇಶಕ್ಕೆ ಜಮೀನನ್ನು ವಶಪಡಿಸಿಕೊಂಡ ಸಂದರ್ಭದಲ್ಲಿ ಆಯಾ ಪ್ರದೇಶದ ಮಾರ್ಗಸೂಚಿ ಬೆಲೆ ಆಧರಿಸಿ ರೈತರಿಗೆ ಆರ್ ಟಿಜಿಎಸ್ ಮೂಲಕ ನೇರವಾಗಿ ಪರಿಹಾರ ಪಾವತಿಸಲಾಗುತ್ತಿದೆ.

ಮಧ್ಯವರ್ತಿಗಳು, ಜಿಪಿಎ ಹೊಂದಿರುವವರಿಗೆ ಹಣ ವರ್ಗಾಯಿಸುವ ವ್ಯವಸ್ಥೆ ಇಲ್ಲ. ನಿಯಮಗಳ ಪ್ರಕಾರ ರೈತರು ಮತ್ತು ಉದ್ಯಮಿಗಳ ಜಂಟಿ ಸಹಭಾಗಿತ್ವಕ್ಕೆ ಅವಕಾಶವಿಲ್ಲ. ಪರಿಹಾರ ಬೇಡ ಎನ್ನುವವರಿಗೆ ಅಭಿವೃದ್ಧಿಪಡಿಸಿದ ನಿವೇಶನ ನೀಡುವುದಕ್ಕೆ ನಿಯಮಗಳಲ್ಲಿ ಅವಕಾಶ ಇದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

2ನೇ ವಿಮಾನ ನಿಲ್ದಾಣ

ಜೆಡಿಎಸ್ ಸದಸ್ಯ ಟಿ ಎನ್ ಜವರಾಯಿಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವ ಪಾಟೀಲ ಅವರು, `ಬೆಂಗಳೂರಿನ ಜನರು ಮತ್ತು ಉದ್ಯಮಿಗಳ ಒಳಿತಿಗಾಗಿ 2ನೇ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ 3-4 ಸ್ಥಳಗಳು ಸರಕಾರದ ಮುಂದಿವೆ. ಐಡೆಕ್ ಸಂಸ್ಥೆ ಅಧ್ಯಯನ ನಡೆಸುತ್ತಿದೆ. ಇನ್ನೊಂದು ವಾರದಲ್ಲಿ ಇದರ ಚಿತ್ರಣ ಸಿಗಲಿದೆ. ನಂತರ, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಆ ಸಂಸ್ಥೆಯು ಸ್ಥಳವನ್ನು ಆಖೈರು ಮಾಡುತ್ತದೆ. ಇದರಲ್ಲಿ ನನಗೇನೂ ಅಧಿಕಾರವಿಲ್ಲ’ ಎಂದರು.

ಸ್ಥಳ ಆಖೈರಾದ ಮೇಲಷ್ಟೆ ಭೂ ಸ್ವಾಧೀನ ಪ್ರಕ್ರಿಯೆ ಶುರುವಾಗಲಿದೆ. ಯಾವ ಜಾಗ ಅಂತಿಮವಾಗುತ್ತದೋ ಅಲ್ಲಿರುವ ಮಾರ್ಗಸೂಚಿ ದರದ ಪ್ರಕಾರ, ಜಮೀನು ಕಳೆದುಕೊಳ್ಳಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು. ಪ್ರಯಾಣಿಕರ ದಟ್ಟಣೆ, ಕೈಗಾರಿಕಾ ಸಾಗಾಣಿಕೆ, ಸ್ಥಳದ ಭೌಗೋಳಿಕ ಲಕ್ಷಣ ಇತ್ಯಾದಿಗಳನ್ನು ಪರಿಗಣಿಸಿ, ವಿಮಾನ ನಿಲ್ದಾಣ ಪ್ರಾಧಿಕಾರವು ಸ್ಥಳವನ್ನು ಪರಿಶೀಲಿಸಿ, ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಪಾಟೀಲ ತಿಳಿಸಿದ್ದಾರೆ.

ರಾಜಕೀಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಸಿಎಂ  ಸಿದ್ದರಾಮಯ್ಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ನುಡಿದರು. ಗ್ಯಾರಂಟಿ ಸಮಿತಿಯಿಂದ ಶಾಸಕರ ಘನತೆಗೆ ದಕ್ಕೆಯಾಗಿದೆ ಎಂಬ ಕುರಿತು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಅಧಿವೇಶನ ಮುಗಿಯುತ್ತಿದ್ದಂತೆ

[ccc_my_favorite_select_button post_id="104074"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರI Accident

Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರI Accident

ದೊಡ್ಡಬಳ್ಳಾಪುರ: ತಾಲೂಕಿನ ಅಪಘಾತ (Accident) ಪ್ರಕರಣಗಳು ಸಂಖ್ಯೆ ಒಂದೇ ಸಮನೇ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ. ಇಂದು ಬೆಳಗ್ಗೆಯಿಂದ ದೊಡ್ಡಬಳ್ಳಾಪುರ ತಾಲೂಕಿನ ಮೂರು ಅಪಘಾತಗಳು ವರದಿಯಾಗಿದ್ದು, ಓರ್ವ ಸಾವನಪ್ಪಿದ್ದರೆ, ಹಲವರು ಗಾಯಗೊಂಡಿದ್ದಾರೆ. ಇದೀಗ ಕೆಲವು

[ccc_my_favorite_select_button post_id="104042"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!