ಬೆಳಗಾವಿ: ಗೃಹಲಕ್ಷ್ಮೀ (Gruhalakshmi) ಯೋಜನೆಯ ಕೆಲವು ಫಲಾನುಭವಿಗಳು ಇಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರೊಂದಿಗೆ ಬೆಳಗಾವಿಯ ಸುವರ್ಣ ವಿಧಾನಸೌಧದ ದರ್ಶನಕ್ಕೆ ಆಗಮಿಸಿ ಸುವರ್ಣ ವಿಧಾನ ಸೌಧದ ದರ್ಶನ ಹಾಗೂ ಆಡಳಿತ ಯಂತ್ರದ ವೀಕ್ಷಿಸಿದರು.
ಕುವೆಂಪು ನಗರದಲ್ಲಿರುವ ನಿವಾಸದಿಂದ ಸುವರ್ಣ ವಿಧಾನಸೌಧಕ್ಕೆ ವಿಶೇಷ ವಾಹನದಲ್ಲಿ ಫಲಾನುಭವಿಗಳೊಂದಿಗೆ ಆಗಮಿಸಿದ ಸಚಿವೆ ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ, ಎಲ್ಲರಿಗೂ ಯೋಜನೆಗಳನ್ನು ತಲುಪಿಸುವುದೇ ನಮ್ಮ ಉದ್ದೇಶ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪವಂತಾಗಬೇಕು.
ಗೃಹಲಕ್ಷ್ಮೀ ಯೋಜನೆ ಮೂಲಕ ಪ್ರತಿ ತಿಂಗಳು ಸಿಗುವ 2 ಸಾವಿರ ರೂಪಾಯಿ ಲಕ್ಷಾಂತರ ಹೆಣ್ಣುಮಕ್ಕಳಿಗೆ ಸಹಾಯವಾಗಿದೆ. ಒಬ್ಬರು ಗೃಹಲಕ್ಷ್ಮಿ ಯೋಜನೆಯ ಹಣದಿಂದ ಗ್ರಂಥಾಲಯ ತೆರೆದರೆ, ಗದಗ ಗಜೇಂದ್ರದಢದ ಅತ್ತೆ-ಸೊಸೆ ಸೇರಿ ತಮ್ಮ ಜಮೀನಿನಲ್ಲಿ ಬೋರ್ವೆಲ್ ಕೊರೆಸಿದ್ದಾರೆ.
![](https://www.harithalekhani.com/wp-content/uploads/2024/12/1000742001-1024x576.webp)
ಕಣ್ಣಿನ ಶಸ್ತ್ರಚಿಕಿತ್ಸೆ ವೈದ್ಯಕೀಯ ಖರ್ಚು ವೆಚ್ಚಗಳು, ಮಕ್ಕಳಿಗೆ ಶಾಲಾ ಫೀಜು, ಮಕ್ಕಳಿಗೆ ಬೈಕ್ ಕೊಡಿಸಿರುವುದು. ಹೀಗೆ ಅನೇಕ ರೂಪದಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣ ಬಡ ಮಹಿಳೆಯರಿಗೆ ಸಹಾಯವಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಗೃಹಲಕ್ಷ್ಮೀಯರ ಜೊತೆಗೆ ತೃತೀಯ ಲಿಂಗಿಯರಿಗೂ ಗೃಹಲಕ್ಷ್ಮೀ ಯೋಜನೆಯ ಹಣ ತಲುಪಿಸುವ ಕೆಲಸ ಆಗುತ್ತಿದೆ. ಯೋಜನೆಯಿಂದ ಆದ ಲಾಭದ ಬಗ್ಗೆ ಫಲಾನುಭವಿಗಳು ಹೇಳಿಕೊಳ್ಳುವಾಗ ಯೋಜನೆ ಜಾರಿಗೆ ತಂದಿದ್ದಕ್ಕೂ ಸಾರ್ಥಕ ಎನಿಸುತ್ತದೆ.
ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಬೇಕು ಎಂಬುದೇ ನಮ್ಮ ಆಸೆ ಎಂದು ಸಚಿವರು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಗೃಹಲಕ್ಷ್ಮೀ ಫಲಾನುಭವಿಗಳು ಸಂವಾದ ನಡೆಸಲಿದ್ದು ವಿಧಾನಸಭೆ ಅಧಿವೇಶನದ ಕಲಾಪ ವೀಕ್ಷಣೆ ಮಾಡುವುದಕ್ಕೂ ವ್ಯವಸ್ಥೆ ಮಾಡಲಾಗಿದೆ ಎಂದರು.