ದೊಡ್ಡಬಳ್ಳಾಪುರ: ಭ್ರಷ್ಟ ಅಧಿಕಾರಿಗಳಿಗೆ ನಿದ್ರೆಯಲ್ಲಿಯೂ ಬೆಚ್ಚಿಬೀಳಿಸುತ್ತಿರುವ ಉಪ ಲೋಕಾಯುಕ್ತರಾದ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ (justice B.Veerappa) ಅವರು ನಾಳೆ ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡುತ್ತಿದ್ದಾರೆ.
ನಗರದ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ 17ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿರುವ ಸಾರಂಗ್ ಕಾರ್ಯಕ್ರಮವನ್ನು ಉದ್ಘಾಟಿಸಲು ನಾಳೆ (ಡಿ.20) ರಂದು ಮಧ್ಯಾಹ್ನ 3.30ಕ್ಕೆ ಉಪ ಲೋಕಾಯುಕ್ತರಾದ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ದೊಡ್ಡಬಳ್ಳಾಪುರಕ್ಕೆ ಆಗಮಿಸುತ್ತಿದ್ದಾರೆ.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್, ಡಿಡಿಪಿಐ ಪಿ.ಬೈಲಾಂಜಿನಪ್ಪ, ಆಡಳಿತ ಮಂಡಳಿ ಅಧ್ಯಕ್ಷರಾದ ಎ.ಸುಬ್ರಹ್ಮಣ್ಯ, ಕಾರ್ಯದರ್ಶಿ, ಮಂಜುಳ ಸುಬ್ರಹ್ಮಣ್ಯ, ಉಪಾಧ್ಯಕ್ಷ ಸ್ವರೂಪ್ ಎಸ್., ಟ್ರಸ್ಟಿ ನಯನಾ ಸ್ವರೂಪ್, ಪ್ರಾಂಶುಪಾಲರಾದ ಬಿ.ವಿ.ರೇಮ್ಯ, ಉಪಪ್ರಾಂಶುಪಾಲರಾದ ಪ್ರತಿಮಾ ಪೈ ಭಾಗವಹಿಸಲಿದ್ದಾರೆ.
ಸಾರಂಗ್ ಕಾರ್ಯಕ್ರಮದಲ್ಲಿ ಕಳೆದ SSLC ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ, ಕ್ರೀಡೆಯಲ್ಲಿ ಸಾಧಕರಿಗೆ ವಿಶೇಷ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.