ಬೆಳಗಾವಿ: ಸುವರ್ಣ ಸೌಧದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಗೂಂಡಾ ವರ್ತನೆ ಅಮಾನವೀಯವಾದುದು ಎಂದು ಸಿಟಿ ರವಿ (CT Ravi) ಪ್ರಕರಣದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಮಾಜಿ ಸಚಿವರೂ ಆದ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ರಾಜ್ಯ ಸರ್ಕಾರದ ಕುಮಕ್ಕಿನಿಂದ ಪೊಲೀಸರು ಭಯೋತ್ಪಾದಕರಂತೆ ನಡೆಸಿಕೊಂಡಿದ್ದಾರೆ.
ನಾಲ್ಕೈದು ಪೊಲೀಸ್ ಠಾಣೆಗೆ ಕರೆದೊಯ್ದು ಅಲ್ಲಿ ಕೂರಿಸಿದ್ದಾರೆ, ವಿಪಕ್ಷ ನಾಯಕರು, ವಕೀಲರನ್ನೂ ಒಳಕ್ಕೆ ಬಿಟ್ಟಿಲ್ಲ. ಸಿ.ಟಿ.ರವಿ ಅವರ ದೂರನ್ನೂ ರಿಜಿಸ್ಟರ್ ಮಾಡಿಲ್ಲ, ನಮೆಲ್ಲ ಕಾರ್ಯಕರ್ತರು ರಾತ್ರಿ ಪೊಲೀಸ್ ಠಾಣೆ ಮುಂದೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ.
ಸಿಟಿ ರವಿ ಅವರಿಗೆ ತಲೆಗೆ ಪೆಟ್ಟು ಬಿದ್ದಿದ್ದರೂ ಆಸ್ಪತ್ರೆಗೂ ಕರೆದುಕೊಂಡು ಹೋಗಿಲ್ಲ, ಕಾಂಗ್ರೆಸ್ ಸರ್ಕಾರದ ಕುಮಕ್ಕಿನಿಂದ ನಡೆದಿರುವ ಈ ಘಟನೆ ಖಂಡನೀಯ. ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸುತ್ತಿದೆ ಎಂದಿದ್ದಾರೆ.