ಮೆಕ್ಸಿಕೊ: ಡಬ್ಲ್ಯೂ ಡಬ್ಲ್ಯೂಇ ಸೂಪರ್‌ಸ್ಟಾರ್ ರೇ ಮಿಸ್ಟೀರಿಯೊ ಜೂನಿಯರ್ ಅವರ ಚಿಕ್ಕಪ್ಪ ರೇ ಮಿಸ್ಟೀರಿಯೊ (Rey Mysterio) ಸೀನಿಯರ್ ಡಿಸೆಂಬರ್ 20ರಂದು ನಿಧನರಾದರು ಎಂದು ಅವರ ಕುಟುಂಬ ದೃಢಪಡಿಸಿದೆ. ಅವರಿಗೆ 66 ವರ್ಷ ವಯಸ್ಸಾಗಿತ್ತು.
ಮಿಸ್ಟೀರಿಯೊ ಸೀನಿಯರ್ ಅವರು ಮೆಕ್ಸಿಕೋದಲ್ಲಿನ ಲುಚಾ ಲಿಬ್ರೆ ಕೂಟದಲ್ಲಿ ಖ್ಯಾತಿ ಗಳಿಸಿದರು, ವರ್ಲ್ಡ್ ವ್ರೆಸ್ಲಿಂಗ್ ಅಸೋಸಿಯೇಷನ್ ಮತ್ತು ಲುಚಾ ಲಿಬ್ರೆ ಎಎಎ ವರ್ಲ್ಡ್ ವೈಡ್ ನಂತಹ ಪ್ರಮುಖ ಸಂಸ್ಥೆಗಳೊಂದಿಗೆ ಚಾಂಪಿಯನ್‌ಶಿಪ್ ಪ್ರಶಸ್ತಿಗಳನ್ನು ಗಳಿಸಿದರು.
ಅವರು 1990 ರಲ್ಲಿ ವಿಶ್ವ ಚಾಂಪಿಯನ್ ಶಿಪ್ ವ್ರೆಸ್ಲಿಂಗ್ ನ ಸ್ಟಾರ್ ಕೇಡ್‌ನಂತಹ ಈವೆಂಟ್‌ಗಳನ್ನು ಒಳಗೊಂಡಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಮಿಸ್ಟೀರಿಯೊ ಅವರ ನಿಜವಾದ ಹೆಸರು ಮಿಗುಯೆಲ್ ಏಂಜೆಲ್ ಲೋಪೆಜ್ ಡಯಾಸ್.
ಅವರ ಮರಣದ ವಿಚಾರವನ್ನು city digest ತನ್ನ ಟ್ವಿಟರ್ ಪೋಸ್ಟ್‌ನಲ್ಲಿ ಬಹಿರಂಗಪಡಿಸಿದೆ.