ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆಗೂ ನಂದಿಬೆಟ್ಟಕ್ಕೂ (nandi hills) ಅದೇನೊ ಒಂಥರ ನಂಟು, ಪ್ರಕೃತಿ ಮಡಿಲಲ್ಲಿ ಕುಡಿದು ಕುಣಿದು ಕುಪ್ಪಳಿಸಿ ಹೊಸ ವರ್ಷ 2025ನ್ನು ಆಚರಿಸೋಣ ಅಂತ, ಕೆಲವು ಪಾರ್ಟಿ ಪ್ರೀಯರು ಅಂದುಕೊಂಡಿದ್ರೆ.. ಈಗಲೇ ನಿಮ್ಮ ಪ್ಲಾನ್ ನನ್ನು ಬದಲಾಯಿಸಿಕೊಳ್ಳಿ, ಯಾಕಂದ್ರೆ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಏರಿದೆ.
ಹೌದು…ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ ಅಂದರೆ ತಂಪಾದ ಹವಾಗುಣ, ತುಂತುರು ಮಳೆ, ಗಿಡ, ಮರ, ಬಳ್ಳಿಗಳ ಸೊಬಗು, ನಕ್ಕು ನಲಿಯುವ ತರಹೆವಾರು ಹೂಗಳ ವಯ್ಯಾರ. ಮಿಗಿಲಾಗಿ ಸಮುದ್ರಮಟ್ಟದಿಂದ 1486 ಮೀಟರ್ ಎತ್ತರದಲ್ಲಿ ನಿಂತು ಸೂರ್ಯೋದಯ ಹಾಗೂ ಸೂರ್ಯಸ್ತ ವಿಹಂಗಮ ನೋಟ ನೋಡುವುದಕ್ಕೆ ತುಂಬಾ ಫೇಮಸ್.
ಇನ್ನೂ ನಂದಿಗಿರಿಧಾಮ ಕಾಣಸಿಗುವ ಬೆಳ್ಳಿ ಮೋಡ, ಇಬ್ಬನಿ, ಸುತ್ತಲೂ ಎತ್ತ ನೋಡಿದರೂ ಮುತ್ತಿಕ್ಕುವ ಮಂಜು, ಇಂಥ ಪ್ರಕೃತಿ ಸೊಬಗಿನಲ್ಲಿ ಕುಳಿತು ಹೊಸ ವರ್ಷ 2025 ನ್ನು ಸ್ವಾಗತೀಸೋಣ ಅಂತ ಕೆಲವು ಪಾರ್ಟಿ ಪ್ರೀಯರು ಅಂದುಕೊಂಡಿದ್ರು. ಆದ್ರೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಪಾರ್ಟಿ ಪ್ರಿಯರ ಕನಸಿಗೆ ನಿರಾಸೆ ಮಾಡಿದ್ದು, ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಿದೆ.
ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ 2025 ಜನವರಿ 1 ರಂದು ಬೆಳಿಗ್ಗೆ 06 ಗಂಟೆವರೆಗೂ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದ್ದು, ಜೊತೆಗೆ ಅಥಿತಿ ಗೃಹಗಳಿಗೆ ಪ್ರವೇಶವನ್ನೂ ಬಂದ್ ಮಾಡಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಎನ್ ರವಿಂದ್ರ ಆದೇಶ ಹೊರಡಿಸಿದ್ದಾರೆ.