ದೊಡ್ಡಬಳ್ಳಾಪುರ: ಐತಿಹಾಸಿಕ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ (Ghati subramanya) ದೇವರ ದರ್ಶನಕ್ಕೆ ಬಂದಿದ್ದ ಯುವತಿ ಸಾವನಪ್ಪಿರುವ ಘಟನೆ ಇಂದು ಸಂಜೆ ಸಂಭವಿಸಿದೆ.
ತುಮಕೂರು ಕಡೆಯವರು ಎನ್ನಲಾಗುತ್ತಿರುವ ಕುಟುಂಬ ಇಂದು ಸಂಜೆ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಪೂಜೆ ಸಲ್ಲಿಸಲು ಬಂದಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದ್ದು, ಸುಮಾರು 24 ವರ್ಷದ ಮೋನಿಷಾ ಎನ್ನುವವರು ಬಿಪಿ ಲೋ ಆದ ಕಾರಣ ಕುಸಿದು ಬಿದ್ದಿದ್ದಾರೆ.
ಕೂಡಲೇ ಆಸ್ಪತ್ರೆ ಅಂಬುಲೆನ್ಸ್ ಮೂಲಕ ಕರೆದೊಯ್ಯಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)