ದೊಡ್ಡಬಳ್ಳಾಪುರ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಕ್ರೂಸರ್ ಪಲ್ಟಿಯಾಗಿ (Accident) ಅದರಲ್ಲಿದ್ದ ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಬಾಶೆಟ್ಟಿಹಳ್ಳಿ ರಸ್ತೆ ಬಳಿ ಸಂಭವಿಸಿದೆ.
ಹಿಂದೂಪುರದಿಂದ ಬೆಂಗಳೂರಿನ ಕೆಆರ್ ಮಾರುಕಟ್ಟೆಗೆ ಮಾರಾಟಗಾರರನ್ನು ಕರೆದೊಯ್ಯಲಾಗುತ್ತಿತ್ತು ಎನ್ನಲಾದ ಕ್ರೂಸರ್, ಕಳೆದ ರಾತ್ರಿ 2.30ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಮೊಗಚಿ ಬಿದ್ದಿದೆ.
ಘಟನೆಯಲ್ಲಿ ಕ್ರೂಸರ್ ನಲ್ಲಿ ಪ್ರಯಾಣಿಸುತ್ತಿದ್ದ ಒಂಬತ್ತು ಮಂದಿಗೆ ಗಂಭೀರವಾದ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.