ದೊಡ್ಡಬಳ್ಳಾಪುರ, (Death news): ನಗರದ ನಿವೃತ್ತ ಪ್ರಾಂಶುಪಾಲರಾದ ಎಸ್.ರಾಜಲಕ್ಷ್ಮಿ ಹೃದಯಾಘಾತದಿಂದ ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.
ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ರಸಾಯನಶಾಸ್ತ್ರ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಹಾಗೂ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ವಿದ್ಯಾಸಂಸ್ಥೆಯ ನಿರ್ದೇಶಕರಾಗಿ ಅವರು ಸೇವೆ ಸಲ್ಲಿಸಿದ್ದರು.
ಮೃತರ ಅಂತ್ಯಕ್ರಿಯೆ ಶುಕ್ರವಾರ ಸಂಜೆ ನಗರದ ಹೊರವಲಯದ ಮುಕ್ತಿಧಾಮದಲ್ಲಿ ನಡೆಯಿತು.
ಮೃತರ ಕಣ್ಣುಗಳನ್ನು ಕುಟುಂಬದವರು ಅಭಿಷೇಕ್ ನೇತ್ರಧಾಮದ ಡಾ.ರಾಜ್‌ಕುಮಾರ್ ನೇತ್ರ ಸಂಗ್ರಹಣಾ ಕೇಂದ್ರಕ್ಕೆ ದಾನ ಮಾಡಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬಕ್ಕೆ ಅಗಲಿಕೆಯ ನೋವನ್ನು ತಡೆಯುವ ಶಕ್ತಿ ನೀಡಲೆಂದು ದೇವಾಂಗ ಮಂಡಳಿಯ ಖಾಜಾಂಚಿ ಅಖಿಲೇಶ್ ತಿಳಿಸಿದ್ದಾರೆ.