ದೊಡ್ಡಬಳ್ಳಾಪುರ (ಜ.24): ಕೃಷಿ ಇಲಾಖೆ ಮತ್ತು ಶ್ರೀ ಶ್ರೀ ಇನ್ಸಿಟ್ಯೂಟ್ ಆಫ್ ಅಗ್ರಿಕಲ್ಚರ್ ಸೈನ್ಸ್ ಮತ್ತು ಟೆಕ್ನಾಲಜಿ ಟ್ರಸ್ಟ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಾವಯವ ಮತ್ತು ಸಿರಿ ಧಾನ್ಯ ಉತ್ಪಾದಕರ-ಮಾರುಕಟ್ಟೆದಾರರ ಕಾರ್ಯಾಗಾರವನ್ನು ಜನವರಿ 25 ರಂದು ಬೆಳಿಗ್ಗೆ 10.00 ಗಂಟೆಗೆ ಬೆಂಗಳೂರಿನ ಕನಕಪುರ ಮುಖ್ಯ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆವರಣದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಾಗಾರದಲ್ಲಿ ಸಾವಯವ ಕೃಷಿ ತತ್ವಗಳು ಮತ್ತು ಪದ್ದತಿಗಳನ್ನೊಳಗೊಂಡ ವಸ್ತು ಪ್ರದರ್ಶನ, ಗ್ರಾಹಕರಲ್ಲಿ ಅರಿವು ಮೂಡಿಸಲು ಮಳಿಗೆಗಳಲ್ಲಿ ಸಾವಯವ ಮತ್ತು ಸಿರಿಧಾನ್ಯ ಉತ್ಪನ್ನಗಳ ಪ್ರದರ್ಶನ ಹಾಗೂ ಸಾವಯವ ಮತ್ತು ಸಿರಿಧಾನ್ಯಗಳ ಫುಡ್ ಕೋರ್ಟ್ ಆಯೋಜಿಸಲಾಗಿದೆ.
ತಾಲೂಕಿನ ರೈತರು, ಮಾರುಕಟ್ಟೆದಾರರು, ಗ್ರಾಹಕರು ಹಾಗೂ ಸಾರ್ವಜನಿಕರುಗಳು ಗರಿಷ್ಠ ಸಂಖ್ಯೆಯಲ್ಲಿ ಕಾರ್ಯಾಗಾರದಲ್ಲಿ ಭಾಗವಹಿಸುವಂತೆ ಸಹಾಯಕ ಕೃಷಿ ನಿರ್ದೇಶಕಿ ಡಿ.ರಾಜೇಶ್ವರಿ ಮನವಿ ಮಾಡಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--
Latest News
others
others
others
others
economy