ದೊಡ್ಡಬಳ್ಳಾಪುರ, (ಜ.24): ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಗಾಲಿ ಜನಾರ್ದನ ರೆಡ್ಡಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಮಂಗಳವಾರ ಮಡದಿ ಅರುಣಾ ಲಕ್ಷ್ಮೀ ಅವರೊಂದಿಗೆ ಸಾಂಪ್ರದಾಯಿಕ ಉಡುಗೆಯಲ್ಲಿ ದೇವಾಲಯಕ್ಕೆ ಬಂದ ಅವರು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ದೇವಾಲಯದ ಸಿಬ್ಬಂದಿ, ರೆಡ್ಡಿ ದಂಪತಿಗಳ ಪೂಜಾ ಕಾರ್ಯಕ್ಕೆ ನೆರವಾದರು.
ಬಿಜೆಪಿಯ ಹಿರಿಯ ನಾಯಕರಾಗಿದ್ದ ಗಾಲಿ ಜನಾರ್ದನ ರೆಡ್ಡಿಯವರು ಬಿಜೆಪಿಯಿಂದ ತಮ್ಮ ನಂಟು ಕಡಿದುಕೊಳ್ಳುವುದಾಗಿ ಪ್ರಕಟಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ತಮ್ಮದೇ ಆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎಂಬ ಪಾರ್ಟಿಯನ್ನು ಸ್ಥಾಪಿಸುವುದಾಗಿ ಹೇಳಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--
Latest News
others
others
others
others
economy