ದೊಡ್ಡಬಳ್ಳಾಪುರ: ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶಕ್ಕೆ ಭಿನ್ನಮತೀಯ ಮುಖಂಡರ ಗೈರು
ದೊಡ್ಡಬಳ್ಳಾಪುರ: ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶಕ್ಕೆ ಭಿನ್ನಮತೀಯ ಮುಖಂಡರ ಗೈರು

ದೊಡ್ಡಬಳ್ಳಾಪುರ, (ಜ.24): ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪ್ರಜಾಧ್ವನಿ ಸಮಾವೇಶಕ್ಕೆ ಕಾಂಗ್ರೆಸ್ ಪಕ್ಷದ ಭಿನ್ನಮತೀಯ ಮುಖಂಡರು ಗೈರು ಹಾಜರಾಗುವ ಭಿನ್ನಮತೆ ಇನ್ನೂ ಶಮನವಾಗದೇ ಮುಂದುವರೆದಿದೆ.

ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್, ನಗರಸಭೆ ಸದಸ್ಯ ಎಂ.ಜಿ.ಶ್ರೀನಿವಾಸ್, ಮುಖಂಡರಾದ ತಿ.ರಂಗರಾಜು, ಹಸನ್ ಘಟ್ಟ ರವಿ ಸೇರಿದಂತೆ ಹಲವಾರು ಜನ ಮುಖಂಡರು ಸಮಾವೇಶಕ್ಕೆ ಗೈರಾಗುವ ಮೂಲಕ ಪಕ್ಷದ ಹೈಕಮಾಂಡ್ ಗೆ ಮತ್ತೆ ಬಿಸಿ ಮುಟ್ಟಿಸಿದ್ದಾರೆ.

ಹಾಲಿ ಶಾಸಕ ಟಿ.ವೆಂಕಟರಮಣಯ್ಯ ಅವರಿಗೆ ಟಿಕೆಟ್ ನೀಡದಂತೆ 20 ದಿನಗಳ ಗಡುವು ನೀಡಿದ್ದ ಕಾಂಗ್ರೆಸ್ ಪಕ್ಷದ ಭಿನ್ನಮತೀಯ ಮುಖಂಡರು ಇಂದಿನ ಸಮಾವೇಶಕ್ಕೆ ಗೈರಾಗುವ ಮೂಲಕ  ಹೈಕಮಾಂಡ್ ಗೆ ತಮ್ಮ ಅಸಮಾಧಾನವನ್ನು ಮುಟ್ಟಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....