ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಅಪೆ ಆಟೋ ..!! / ಕಾರ್ಮಿಕರಿಗೆ ತೀವ್ರ ಗಾಯ
ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಅಪೆ ಆಟೋ ..!! / ಕಾರ್ಮಿಕರಿಗೆ ತೀವ್ರ ಗಾಯ

ದೊಡ್ಡಬಳ್ಳಾಪುರ, (ಫೆ.06): ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಅಪೆ ಆಟೋ ಪಲ್ಟಿಹೊಡೆದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಕಾರ್ಮಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಜೆ.ಕೆ.ಪೇಂಟ್ಸ್ ಕಾರ್ಖಾನೆ ಬಳಿ ಸಂಭವಿಸಿದೆ.

ಸೋಮವಾರ ಬೆಳಗ್ಗೆ ಖಾಸಗಿ ಕಾರ್ಖಾನೆಗೆ ಮಹಿಳಾ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವೇಳೆ, ದೊಡ್ಡಬಳ್ಳಾಪುರ - ದೇವನಹಳ್ಳಿ ರಸ್ತೆಯಲ್ಲಿರುವ ಜೆ.ಕೆ. ಪೇಂಟ್ಸ್ ಕಾರ್ಖಾನೆ ಬಳಿ ಎದುರಾದ ವಾಹನವನ್ನು ತಪ್ಪಿಸುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಆಟೋ ಪಲ್ಟಿ ಹೊಡೆದಿದೆ.

ಈ ವೇಳೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಹಲವು ಮಹಿಳೆಯರಿಗೆ ತೀವ್ರವಾದ ಗಾಯಗಳಾಗಿದ್ದು, ಮತ್ತೊಂದು ಆಟೋ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪ್ರತ್ಯಕ್ಷದರ್ಶಿ ಕೊತ್ತೂರಪ್ಪ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....