ದೊಡ್ಡಬಳ್ಳಾಪುರ: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಫಘಾತ / ದಂಪತಿಗಳಿಗೆ ಪೆಟ್ಟು
ದೊಡ್ಡಬಳ್ಳಾಪುರ: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಫಘಾತ / ದಂಪತಿಗಳಿಗೆ ಪೆಟ್ಟು

ದೊಡ್ಡಬಳ್ಳಾಪುರ, (ಫೆ.06): ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ,  ದಂಪತಿಗಳಿಬ್ಬರು ಗಾಯಗೊಂಡಿರುವ ಘಟನೆ ಸೋಮವಾರ ಸಂಜೆ ತಾಲೂಕಿನ ಕಂಟನಕುಂಟೆ ಬಳಿ ಸಂಭವಿಸಿದೆ.

ಆಂದ್ರ ಮೂಲದ ಕಾರು ಮುಂಭಾಗದಲ್ಲಿ ಸಾಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಗುದ್ದಿದ ಪರಿಣಾಮ, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಲ್ಲತ್ತಹಳ್ಳಿ ಮೂಲದ ದಂಪತಿಗಳು ಗಾಯಗೊಂಡಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು, ರಸ್ತೆ  ಬದಿಯಲ್ಲಿದ್ದ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೊಡೆದು ನಿಂತಿದ್ದು, ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--