ಬೆಂ.ಗ್ರಾ.ಜಿಲ್ಲೆ, (ಫೆ.06): ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ವತಿಯಿಂದ 2022-23 ನೇ ಸಾಲಿನಲ್ಲಿ 10+1 ಕುರಿ/ಮೇಕೆ ಸಾಕಾಣಿಕೆ ಸಹಾಯಧನಕ್ಕಾಗಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ಮಹಿಳಾ, ಪುರುಷ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ನಿಗಮದಲ್ಲಿ ನೊಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ಮಹಿಳಾ, ಪುರುಷ ಫಲಾನುಭವಿಗಳು (18 ರಿಂದ 60 ವರ್ಷ ವಯೋಮಿತಿ) ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ ಪುರುಷ ಸದಸ್ಯರುಗಳನ್ನು, ಸಂಘಗಳು ಇಲ್ಲದೇ ಇರುವ ತಾಲ್ಲೂಕಿನಲ್ಲಿ ಅರ್ಜಿ ಕುರಿ, ಕಾಳಿಕೆವಾರು ನಿಗದಿತ ಅರ್ಜಿ ನಮೂನೆಯನ್ನು ಸಂಬಂಧಿಸಿದ ತಾಲ್ಲೂಕು, ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಅದೇ ಕಛೇರಿಗೆ 2023ರ ಫೆಬ್ರವರಿ 24 ರೊಳಗೆ ಸಲ್ಲಿಸಲು ಕೋರಿದೆ.
ಹೆಚ್ಚಿನ ವಿವರಗಳನ್ನು ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ), ಪಶುಪಾಲನಾ ಇಲಾಖೆ ಅಥವಾ ಉಪ ನಿರ್ದೇಶಕರವರ ಕಛೇರಿ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಹೆಬ್ಬಾಳ, ಬೆಂಗಳೂರು. ದೂರವಾಣಿ ಸಂಖ್ಯೆ-080-23414295 ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
others
others
politics
politics