ದೊಡ್ಡಬಳ್ಳಾಪುರ, (ಜೂ.08): ನಗರಸಭೆ ವ್ಯಾಪ್ತಿಯಲ್ಲಿನ ನಾಗರಕೆರೆಯಲ್ಲಿ ನೂರಾರು ಸಂಖ್ಯೆಯಲ್ಲಿ ಮೀನುಗಳು ಮೃತಪಟ್ಟಿವೆ.
ಕೆರೆಗೆ ನಗರಸಭೆ ವ್ಯಾಪ್ತಿಯಲ್ಲಿನ ಚರಂಡಿ ನೀರು ಸೇರುತ್ತಿರುವುದೇ ಮೀನುಗಳ ಸಾವಿಗೆ ಕಾರಣವಾಗಿದೆ ಎಂದು ಯುವ ಸಂಚಲನದ ಅಧ್ಯಕ್ಷ ಚಿದಾನಂದ್ ದೂರಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿ, ಕೆರೆಗೆ ಒಳಚರಂಡಿ ನೀರು ಸೇರಿದಂತೆ ತೆರೆದ ಚರಂಡಿಯಿಂದ ಹರಿದು ಬರುವ ನೀರು ನೇರವಾಗಿ ಕೆರೆಗೆ ಸೇರುತ್ತಿರುವುದನ್ನು ತಪ್ಪಿಸುವಂತೆ ಹಲವಾರು ಬಾರಿ ಹೇಳುತ್ತಲೇ ಬರುತ್ತಿದ್ದರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.
ಕೆರೆಯ ನೀರು ಕಲುಷಿತವಾಗುತ್ತಿರುವ ಬಗ್ಗೆ ಚನ್ನೈನ ಹಸಿರು ನ್ಯಾಯಾಧಿಕರಣಕ್ಕೂ ದೂರು ಸಲ್ಲಿಸಲಾಗಿದೆ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
others
crime
others
others