ಆರ್ಥಿಕ ಮುಗ್ಗಟ್ಟು ಕಾಡಬಹುದು ಜಾಗರೂಕರಾಗಿರಿ; ದಿನ ಭವಿಷ್ಯ: ಶುಕ್ರವಾರ,ಜೂನ್ 09, 2023, ದೈನಂದಿನ ರಾಶಿ ಭವಿಷ್ಯ
ಆರ್ಥಿಕ ಮುಗ್ಗಟ್ಟು ಕಾಡಬಹುದು ಜಾಗರೂಕರಾಗಿರಿ; ದಿನ ಭವಿಷ್ಯ: ಶುಕ್ರವಾರ,ಜೂನ್ 09, 2023, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಆರ್ಥಿಕವಾಗಿ ಹಾಗೂ ಸಾಂಸಾರಿಕವಾಗಿ ಉತ್ತಮ ಕೆಲಸಗಳಾದರೂ ಕೆಲವು ಹಿತಶತ್ರುಗಳ ಕಾಟದಿಂದ ಮನಸ್ಸಿಗೆ ನೋವುಂಟಾಗಲಿದೆ.‌ ಹೊಗಳಿಕೆಗೆ ಮರುಳಾಗದಿರಿ. ಹಂತ ಹಂತವಾಗಿ ಯಶಸ್ಸು ಕಂಡು ಬಂದೀತು.(ಭಕ್ತಿಯಿಂದ ಶ್ರೀ ಗುರು ದತ್ತಾತ್ರೇಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ: ಲಾಭ ಸ್ಥಾನಗತ ನಾದ ಗುರುವಿನಿಂದಾಗಿ ಅನಿರೀಕ್ಷಿತ ಎಷ್ಟೋ ಕಾರ್ಯ ಸಾಧನೆಯಾಗಲಿವೆ. ಮುಖ್ಯವಾಗಿ ದೂರ ಸಂಚಾರ, ಪ್ರಯಾಣದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯವಿದೆ. ದಿನಾಂತ್ಯದಲ್ಲಿ ಸಂಭ್ರಮವಿದೆ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಕೋರ್ಟು ಕಚೇರಿ ಕೆಲಸದಲ್ಲಿ ಹೆಚ್ಚಿನ ಜಾಗ್ರತೆ ವಹಿಸಿರಿ, ಮುಖ್ಯವಾಗಿ ಯಾವುದೇ ಕೆಲಸಕಾರ್ಯ ಅರ್ಧಕ್ಕೆ ನಿಂತು ಆರ್ಥಿಕ ಮುಗ್ಗಟ್ಟು ಕಾಡಬಹುದು ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಶಿರಡಿ ಸಾಯಿಬಾಬ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಕೆಟ್ಟ ಜನರ ಸಹಕಾರದಿಂದ ಅಪಕೀರ್ತಿ ಉಂಟಾದೀತು. ವೈಯಕ್ತಿಕವಾಗಿ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಕೌಟುಂಬಿಕ ಸಮಸ್ಯೆಗಳು ಕಾಡಬಹುದು. ನೌಕರ ವರ್ಗದವರಿಗೆ ಉತ್ತಮ ಬದಲಾವಣೆ ಕಂಡು ಬರಲಿದೆ. (ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಮಕ್ಕಳ ವಿದ್ಯಾ ಭ್ಯಾಸ, ಉದ್ಯೋಗಿಗಳ ಉದ್ಯೋಗದ ಸಮಸ್ಯೆ ಕಂಡು ಬರಬಹುದು. ನಿಮ್ಮ ತಾಳ್ಮೆಗೆ ಇದು ಸಕಾಲವೆನಿಸಲಿದೆ. ಹಲವು ಸಂದರ್ಭಗಳಲ್ಲಿ ತಾಳ್ಮೆಯೇ ಉತ್ತರ ನೀಡಲಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಹಿಸಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಕೆಲಸ ಕಾರ್ಯಗಳಲ್ಲಿ ವಿಘ್ನ, ಭಯ ಕಂಡು ಬಂದರೂ ಯಶಸ್ಸು ತೋರಿ ಬರಲಿದೆ. ಸಿಟ್ಟಿನ ನಿರ್ಣಯಗಳಿಂದ ಅನಾವಶ್ಯಕ ತೊಂದರೆ ಅನುಭವಿಸುವಿರಿ ಸಂಯಮ ದಿಂದ ವ್ಯವಹರಿಸಿ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಏಕಾದಶ ಸ್ಥಾನ ರಾಹುವಿನಿಂದಾಗಿ ಹಾಗೂ ಶನಿಯ ಲಾಭಸ್ಥಾನದಿಂದಾಗಿ ಉನ್ನತಿ ತೋರಿ ಬರಲಿದೆ, ಅದಾಗ್ಯೂ ಗುರುವಿನ ವ್ಯಯಸ್ಥಿತಿ ಅನೇಕ ರೀತಿಯ ಖರ್ಚುವೆಚ್ಚಗಳ ಹಾದಿ ಎದುರಾಗಬಹುದು. ಉದ್ಯೋಗಿ ಗಳಿಗೆ ವೇತನ ಹೆಚ್ಚಳ ತರಲಿದೆ. (ಭಕ್ತಿಯಿಂದ ಶ್ರೀ ಆಂಜನೇಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಮಹಿಳೆಯರಿಗೆ ಉದ್ಯೋಗ ಲಾಭವಿರುತ್ತದೆ. ಕೃಷಿಕ ವರ್ಗದವರಿಗೆ ಆದಾಯ ವರ್ಧಿಸಲಿದೆ. ಸಂಧಿ ನೋವು ಮೂಳೆ ಮುರಿತ, ಅವಘಡಗಳಿಗೆ ಕಾರಣವಾದೀತು. ಆಲಸ್ಯ, ಉದಾಸೀನತೆ ಉಂಟಾಗಬಹುದು. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ಉದ್ಯೋಗಿಗಳಿಗೆ ವಿದೇಶದಲ್ಲಿ ಆಕರ್ಷಕವಾದ ದುಡಿಮೆಗೆ ಅವಕಾಶಗಳು ಒದಗಿ ಬರಲಿವೆ. ನಿರುದ್ಯೋಗಿಗಳಿಗೆ ಉದ್ಯೋಗ ಕಂಡುಕೊಳ್ಳಲು ಇದು ಸಕಾಲ. ವ್ಯಾಪಾರ ವ್ಯವಹಾರಗಳು ಚೇತರಿಕೆ ಕೊಟ್ಟು ಆದಾಯ ವೃದ್ಧಿಸಲಿವೆ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಸಾಮಾಜಿಕವಾಗಿ ಉನ್ನತ ಸ್ಥಾನಮಾನಗಳು, ಕ್ರಿಯಾಶೀಲತೆಯಲ್ಲಿ ಪ್ರಶಂಸೆ ಸಿಗಲಿದೆ.ಮುಖ್ಯವಾಗಿ ನಿಮ್ಮ ವಿಶ್ವಾಸದ ದುರುಪಯೋಗವಾಗದಂತೆ ನಿಮ್ಮಲ್ಲಿ ಎಚ್ಚರವಿರಲಿ. ಮಾತಿನಿಂದ ಅನಾವಶ್ಯಕ ಮನಸ್ತಾಪ ವಾಗದಂತೆ ಜಾಗ್ರತೆ ವಹಿಸಿರಿ. (ಭಕ್ತಿಯಿಂದ ಶ್ರೀ ಚಂದ್ರ ಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಕ್ರೀಡಾ ಜಗತ್ತಿನ ಪಟುಗಳಿಗೆ ಜಯವು ಕಾದಿದೆ. ಹದಗೆಟ್ಟ ಆರೋಗ್ಯ ಉತ್ತಮ ರೀತಿಯಲ್ಲಿ ಸುಧಾರಿಸಲಿದೆ. ಕೃಷಿ ಹಾಗೂ ರೈತವರ್ಗಕ್ಕೆ ಸಕಾಲದಲ್ಲಿ ಬೆಳೆಗಳ ವಿಲೇವಾರಿ ಧನಲಾಭವನ್ನು ಕೊಡಲಿದೆ. ಆರೋಗ್ಯದಲ್ಲಿ ಜಾಗ್ರತೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು ಜೀವನದ ಬಹುಮುಖ್ಯ ಗುರಿಯೊಂದನ್ನು ಸಾಧಿಸಲಿದ್ದೀರಿ. ಹಳೆಯ ಬಾಕಿ ಕೆಲಸಗಳು ಅತೀ ಶೀಘ್ರದಲ್ಲಿ ನೆರವೇರಲಿವೆ. ರಾಜಕೀಯ ವರ್ಗದವರಿಗೆ ಉತ್ತಮ ಭವಿಷ್ಯವಿದೆ. (ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಷಷ್ಠಿ 

ನಕ್ಷತ್ರ: ಧನಿಷ್ಠ ನಕ್ಷತ್ರ.

ರಾಹುಕಾಲ: 10:30 ರಿಂದ 12:00

ಗುಳಿಕಕಾಲ: 07:30 ರಿಂದ 09:00

ಯಮಗಂಡಕಾಲ: 03:00 ರಿಂದ 04:30

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A.,ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....