ದೊಡ್ಡಬಳ್ಳಾಪುರ, (ಜೂ.09): ಬೇಸಿಗೆ ರಜೆ ಮುಗಿದು ಶಾಲೆ - ಕಾಲೇಜುಗಳು ಆರಂಭವಾದ ಬೆನ್ನಲ್ಲೇ ತಾಲೂಕಿನ ಹಲವು ಕಡೆಗೆ ಸಮರ್ಪಕವಾದ ಸಾರಿಗೆ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಶಾಲೆ- ಕಾಲೇಜುಗಳಿಗೆ ತೆರಳಲು ಪರದಾಡುವ ಸ್ಥಿತಿ ಎದುರಾಗಿದೆ.
ಗುರುವಾರವಷ್ಟೇ ನಗರದ ಬಸ್ ನಿಲ್ದಾಣದಲ್ಲಿ ನಡೆದಿದ್ದ ಪ್ರತಿಭಟನೆ ಬೆನ್ನಲ್ಲೇ, ತಾಲೂಕಿನ ಸಾಸಲು ಗ್ರಾಮದಲ್ಲಿ ಸಮರ್ಪಕ ಸಾರಿಗೆ ವ್ಯವಸ್ಥೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು, ಸಾಸಲು ವ್ಯಾಪ್ತಿಯಲ್ಲಿ ಕಾಲೇಜು ಇಲ್ಲದ ಕಾರಣ ಸಾವಿರಾರು ವಿದ್ಯಾರ್ಥಿಗಳು ದೊಡ್ಡಬಳ್ಳಾಪುರಕ್ಕೆ ತೆರಳುವ ಅನಿವಾರ್ಯತೆ ಇದೆ. ಆದರೆ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದೆ ಪ್ರತಿದಿನ ತೊಂದರೆ ಉಂಟಾಗುತ್ತಿದೆ.
ಇದರ ಬೆನ್ನಲ್ಲೇ ವಿದ್ಯಾರ್ಥಿಗಳ ಅನುಕೂಲಕ್ಕೆ ನೀಡಲಾಗಿದ್ದ ಸಾಸಲು - ದೊಡ್ಡಬಳ್ಳಾಪುರ, ಗರುಡಗಲ್ಲು- ದೊಡ್ಡಬಳ್ಳಾಪುರ ಮಾರ್ಗದ ಬಸ್ಸುಗಳನ್ನು ಏಕಾಏಕಿ ನಿಲ್ಲಿಸಿರುವ ಕಾರಣ ಮೂರು ಬಸ್ಸಿನ ಪ್ರಯಾಣಿಕರು ಒಂದೇ ಬಸ್ಸಿನಲ್ಲಿ ಪಯಣಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
others
others
others
crime