ದೊಡ್ಡಬಳ್ಳಾಪುರ, (ನ.20); ರೌಡಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ, ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ, ಕಾನೂನು ಬಾಹಿರ ಚಟುವಟಿಕೆಗಳನ್ನು ಸಂಪೂರ್ಣ ತ್ಯಜಿಸಬೇಕು ಎಂದು ಡಿವೈಎಸ್‌ಪಿ ಪಿ.ರವಿ ಹೇಳಿದರು.
ನಗರದ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ರೌಡಿ ಶೀಟರ್‌ಗಳ ಪರೇಡ್‌ನಲ್ಲಿ ಈ ಕುರಿತಂತೆ ಎಚ್ಚರಿಕೆ ನೀಡಿದರು.
ರೌಡಿಸಂ ಜೀವನವನ್ನು ಹಾಳು ಮಾಡುವುದಲ್ಲದೆ, ಜೀವನ ಪರ್ಯಂತ ರೌಡಿಶೀಟರ್ ಮುಕಿ ಪಟ್ಟಕಟ್ಟಿಕೊಂಡು ಬದುಕಬೇಕಾಗುತ್ತದೆ. ಆದರೆ,ನೆಮ್ಮದಿ ಜೀವನಕ್ಕಾಗಿ ಕೂಲಿ ಕೆಲಸ ಮಾಡಿದರೂ ಪರವಾಗಿಲ್ಲ, ಕುಟುಂಬದೊಂದಿಗೆ ಖುಷಿಯಿಂದ ಜೀವನ ಸಾಗಿಸಬಹುದು, ರೌಡಿ ಚಟುವಟಿಕೆ, ಕಾನೂನು ಬಾಹಿರ ಕೆಲಸಗಳು, ಹೀಗೆ ಮುಂದುವರೆದರೆ, ಜಿಲ್ಲೆಯಿಂದಲೇ ಗಡಿಪಾರು ಮಾಡಲಾಗುವುದು.
ಹತ್ತು, ಇಪ್ಪತ್ತು ವರ್ಷಗಳಾದರೂ ರೌಡಿಶೀಟರ್ ಪಟ್ಟ - ಹೋಗುವುದಿಲ್ಲ. ಕಳ್ಳತನ, ಕೊಲೆ, ದೌರ್ಜನ್ಯ ಮಾಡಿದರೆ, ತಪ್ಪಿಸಿಕೊಳ್ಳಲು ಆಗುವುದಿಲ್ಲ. ಕಾನೂನು ಬಿಗಿಯಾಗಿದೆ. ಕುಟುಂಸ್ಥರು ಗೌರವ ನೀಡುವಷ್ಟು, ರೀತಿಯಲ್ಲಿಯಾದರೂ ಜೀವನ ಮಾಡಿ, ಪೊಲೀಸರಿಗೆ ತಿಳಿಯದಂತೆ ಸ್ಥಳ, ಫೋನ್ ನಂಬರ್ ಬದಲಾವಣೆ ಮಾಡಬಾರದು. ಕಾನೂನಿಗೆ ಬೆಲೆಕೊಟ್ಟು ಸಮಾಜದಲ್ಲಿ ಒಳ್ಳೆಯವರಾಗಿ ಬದುಕಿ, ಮಾದರಿ ಜೀವನ ನಡೆಸಿದರೆ, ರೌಡಿಶೀಟರ್ ಬಂದ್ ಮಾಡಲಾಗುವುದು ಎಂದರು.
ಗ್ರಾಮಾಂತರ ಠಾಣಾ ಇನ್ಸ್ಪೆಕ್ಟರ್ ಮುನಿಕೃಷ್ಣ ಮಾತನಾಡಿ, 6 ತಿಂಗಳಲ್ಲಿ 78 ಮಂದಿ ರೌಡಿ ಶೀಟರ್‌ಗಳಲ್ಲಿ 34 ಮಂದಿಗೆ ರೌಡಿ ಪಟ್ಟದಿಂದ ಬಿಡುಗಡೆಗೊಳಿಸಲಾಗಿದೆ. ಉಳಿದ 44 ಮಂದಿಯ ಜೀವನ ಶೈಲಿಯನ್ನು ಪರಾಮರ್ಶೆ ಮಾಡಲಾಗುತ್ತಿದೆ. ರೌಡಿ ಶೀಟರ್‌ಗಳ ಜೀವನ ಶೈಲಿ ಸರಿ ಹೋದರೆ, ಕೇವಲ 2 ತಿಂಗಳಲ್ಲಿ ರೌಡಿ ಶೀಟರ್ ಪಟ್ಟದಿಂದ ಮುಕ್ತಿ ಕಾಣಿಸಲಾಗುವುದು. ಮುಂದುವರೆದರೆ ಮತ್ತೊಂದು ಕೇಸ್ ಓಪನ್ ಆಗುತ್ತದೆ. 2-3 ತಿಂಗಳಿಗೆ ಒಮ್ಮೆ ಪರಾಮರ್ಶೆ ಮಾಡಲಾಗುವುದು ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
agriculture
others
others
politics