ಅತಿರೇಕದ ವರ್ತನೆ; ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಮಿಚೆಲ್ ಮಾರ್ಷ್
ಅತಿರೇಕದ ವರ್ತನೆ; ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಮಿಚೆಲ್ ಮಾರ್ಷ್

ಅಹಮ್ಮದಾಬಾದ್, (ನ.20); ವಿಶ್ವಕಪ್ 2023 ರ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ  ಭಾರತದ ವಿರುದ್ಧ ಗೆಲುವಿನ ನಗೆ ಬೀರಿದ ಬೆನ್ನಲ್ಲೇ, ಇದೀಗ ತಂಡದ ಆಟಗಾರ ಮಿಚೆಲ್ ಮಾರ್ಷ್ ಅತಿರೇಕದ ವರ್ತನೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಮಿಚೆಲ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗುತ್ತಿದೆ. ಫೋಟೋದಲ್ಲಿ ಮಿಚೆಲ್ ಅವರು ತಮ್ಮ ಎರಡೂ ಕಾಲುಗಳನ್ನು ವಿಶ್ವಕಪ್ ಟ್ರೋಫಿಯ ಮೇಲೆ ಇಟ್ಟು ಗೆದ್ದು ಬೀಗಿದ್ದೇವೆ ಎಂಬ ಸಿಂಬಲ್ ತೋರಿಸಿದ್ದಾರೆ.

ಈ ಫೋಟೋವನ್ನು ಆರಂಭದಲ್ಲಿ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ತಮ್ಮ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕಮ್ಮಿನ್ಸ್ ಫೋಟೋ ಶೇರ್ ಮಾಡುತ್ತಿದ್ದಂತೆಯೇ ಇದು ಭಾರೀ ವೈರಲ್ ಆಯಿತು. ಮಿಚೆಲ್ ವಿಶ್ವಕಪ್‍ಗೆ ಅಗೌರವ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಟ್ರೋಲ್ ಮಾಡಲಾಗುತ್ತಿದೆ.

ಆಸ್ಟ್ರೇಲಿಯಾ ವಿಶ್ವಕಪ್ ಟ್ರೋಫಿ ಗೆದ್ದ ಕೆಲವೇ ಗಂಟೆಗಳ ನಂತರ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ. ಟ್ರೋಫಿಗೆ ಅಗೌರವ ಸೂಚಿಸಿರುವ ಮಿಚೆಲ್ ನಡೆಯನ್ನು ಜನ ಖಂಡಿಸಿದ್ದು, ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....