ಬರಕ್ಕೆ ಕೇಂದ್ರದಿಂದ ಯಾವುದೇ ಉತ್ತರವಿಲ್ಲ, ಕೆಲಸ ಕೊಡಲು ಅನುಮತಿ ಕೊಡ್ತಾ ಇಲ್ಲ: ಸಿಎಂ ಸಿದ್ದರಾಮಯ್ಯ
ಬರಕ್ಕೆ ಕೇಂದ್ರದಿಂದ ಯಾವುದೇ ಉತ್ತರವಿಲ್ಲ, ಕೆಲಸ ಕೊಡಲು ಅನುಮತಿ ಕೊಡ್ತಾ ಇಲ್ಲ: ಸಿಎಂ ಸಿದ್ದರಾಮಯ್ಯ

ವಿಜಯಪುರ, (ನ.20): ಬರ ಪರಿಹಾರದ ಕೆಲಸ ಪ್ರಾರಂಭವಾಗಿದೆ. ಕುಡಿಯುವ ನೀರು, ದನಕರುಗಳಿಗೆ ಮೇವು ಒದಗಿಸಲಾಗಿದೆ. ಮೇವಿಗೆ ಅಭಾವವಿಲ್ಲ, ಜನರಿಗೆ ಕೆಲಸ ಕೊಡು ಕೆಲಸವೂ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಜಯಪುರ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬರಗಾಲ ಬಂದಾಗ 150 ದಿನಗಳ ಕೆಲಸ ನೀಡುವುದು ಕಡ್ಡಾಯ. ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡಬೇಕು. ಅನುಮತಿ ಕೋರಿ ನಾವು ಪತ್ರ ಬರೆದಿದ್ದು ಇಂದಿನವರೆಗೂ ಉತ್ತರ ಬಂದಿಲ್ಲ ಎಂದರು.

ಉತ್ತರವಿಲ್ಲ; ಕೇಂದ್ರ ಸರ್ಕಾರದ ಬರ ಅಧ್ಯಯನ ಕೇಂದ್ರ  ಬಂದು ಹೋಗಿ ಒಂದು ತಿಂಗಳ ಮೇಲಾಗಿದ್ದರೂ ಇಂದಿನವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಎನ್.ಡಿ.ಆರ್.ಎಫ್ ಮಾರ್ಗಸೂಚಿಯಲ್ಲಿ ಮಾರ್ಪಾಡು ತರಲು ಬರೆದಿರುವ ಪತ್ರಕ್ಕೂ ಕೆಂದ್ರದಿಂದ ಉತ್ತರವಿಲ್ಲ ಎಂದರು.

ನಮ್ಮ ಪಕ್ಷದ್ದು ನಾವು ನೋಡಿಕೊಳ್ಳುತ್ತೇವೆ; ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳನ್ನು ಕೆಳಗಿಳಿಸಲು ಕಾಯುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ನಮ್ಮ ಪಕ್ಷದ್ದು ನಾವು ನೋಡಿಕೊಳ್ಳುತ್ತೇವೆ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....