ದೊಡ್ಡಬಳ್ಳಾಪುರ, (ನ.20): ನಗರದಲ್ಲಿರುವ ಉಪವಿಭಾಗಾಧಿಕಾರಿ ಕಚೇರಿಯ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ಬೆಂಗಳೂರು ಲೋಕಾಯುಕ್ತ ನ್ಯಾಯಾಲಯಕ್ಕೆ ಸಾರ್ವಜನಿಕರು ದೂರು ನೀಡಿರುವ ಹಿನ್ನೆಲೆ ಖುದ್ದು ಲೋಕಾಯುಕ್ತ ನ್ಯಾಯಾಧೀಶರೇ ನಗರದಲ್ಲಿರುವ ಎಸಿ ಕಚೇರಿಯ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಆಗಮಿಸಿ ಪ್ರತಿಯೊಂದು ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಈ ವೇಳೆ ಡೆಪ್ಯುಟಿ ರಿಜಿಸ್ಟರ್ ಅನಿತಾ, ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಡಾ.ರಾಮ್ ಹರಸಿದ್ದಿ ಲೋಕಾಯುಕ್ತ ಲೋಕಾಯುಕ್ತಾ ಡಿವೈಎಸ್ಪಿವೀರೇಂದ್ರ ಕುಮಾರ್, ಇನ್ಸ್ ಪೆಕ್ಟರ್ ಸೇರಿದಂತೆ ಸಿಬ್ಬಂದಿ ಸುಮಾರು ಒಂದು ಗಂಟೆಯಿಂದ ಎಲ್ಲಾದಾಖಲೆಗಳನ್ನು ಕೂಲಕಂಶವಾಗಿ ಪರಿಶೀಲಿಸುತ್ತಿದ್ದಾರೆಂದು ತಿಳಿದುಬಂದಿದೆ.
( ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--
Latest News
agriculture
others
others
politics
politics