ಲೋಕಾಯುಕ್ತ ದಾಳಿ ಪ್ರಕರಣ; ಸತತ 2 ಗಂಟೆಗಳಿಂದ ದಾಖಲೆ ಪರಿಶೀಲನೆ / ರೈತನ ಆಕ್ರೋಶ ಸ್ಪೋಟ
ಲೋಕಾಯುಕ್ತ ದಾಳಿ ಪ್ರಕರಣ; ಸತತ 2 ಗಂಟೆಗಳಿಂದ ದಾಖಲೆ ಪರಿಶೀಲನೆ / ರೈತನ ಆಕ್ರೋಶ ಸ್ಪೋಟ

ದೊಡ್ಡಬಳ್ಳಾಪುರ, (ನ.20); ನಗರದಲ್ಲಿರುವ ಉಪವಿಭಾಗಾಧಿಕಾರಿ ಕಚೇರಿಯ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಸತತ ಎರಡು ಗಂಟೆಗಳಿಂದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

ಬೆಂಗಳೂರು ಲೋಕಾಯುಕ್ತ ನ್ಯಾಯಾಲಯಕ್ಕೆ ಸಾರ್ವಜನಿಕರು ದೂರು ನೀಡಿರುವ ಹಿನ್ನೆಲೆ ಖುದ್ದು ಲೋಕಾಯುಕ್ತ ನ್ಯಾಯಾಧೀಶರೇ, ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಆಗಮಿಸಿ ಪ್ರತಿಯೊಂದು ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ದಾಳಿಯ ವೇಳೆ ರೈತನೋರ್ವ ನೊಂದಣಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳ ಕುರಿತಂತೆ ಲೋಕಾಯುಕ್ತ ಅಧಿಕಾರಿಗಳ ಮುಂದೆ ಆರೋಪಗಳ ಸುರಿಮಳೆಗೈದಿದ್ದು, ಎರಡು ವರ್ಷದಿಂದ ಪೋಡಿಗಾಗಿ ಕಚೇರಿ ಅಲೆಸುತ್ತಿದ್ದಾರೆ. ಇದು ಸರ್ಕಾರಿ ಕಚೇರಿಯಲ್ಲ ಸರ್ವಾಧಿಕಾರಿ ಧೋರಣೆ ತೋರಿತ್ತಾರೆಂದು ಆಕ್ರೋಶ ಹೊರಹಾಕಿದರು.

ಇದೇ ಸಂದರ್ಭದಲ್ಲಿ ಕೆಲಸ ಮಾಡಿ ಕೊಡುವಂತೆ ಲೋಕಾಯುಕ್ತ ಅಧಿಕಾರಿಗಳ ಮುಂದೆ ಮನವಿ ಮಾಡಿದ ರೈತ, ತಾಲ್ಲೂಕು ಕಚೇರಿ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಬೇಕೆಂದರು.

ಇಂದು ನಡೆದಿರುವ ದಾಳಿಯಲ್ಲಿ ಡೆಪ್ಯುಟಿ ರಿಜಿಸ್ಟರ್ ಅನಿತಾ, ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಡಾ.ರಾಮ್ ಹರಸಿದ್ದಿ ಲೋಕಾಯುಕ್ತ ಡಿವೈಎಸ್ಪಿ ವೀರೇಂದ್ರ ಕುಮಾರ್‌, ಇನ್ಸ್ ಪೆಕ್ಟರ್ ಸೇರಿದಂತೆ ಸಿಬ್ಬಂದಿ ಸುಮಾರು ಒಂದು ಗಂಟೆಯಿಂದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆಂದು ತಿಳಿದುಬಂದಿದೆ.

ಅಧಿಕಾರಿಗಳ ವಿರುದ್ಧ ರೈತನ ಆಕ್ರೋಶದ ಮಾತುಗಳ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

-->