ಮೈಸೂರು, (ನ.20): ಬಿಜೆಪಿಯ ರಾಷ್ಟ್ರೀಯ ನಾಯಕರು ನನ್ನನ್ನು ರಾಜ್ಯಾಧ್ಯಕ್ಷನಾಗಿ ಮಾಡಿರುವುದು ಬಿ.ಎಸ್.ಯಡಿಯೂರಪ್ಪನವರಿಂದಲ್ಲ ಎಂದು ರಾಜ್ಯ ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಡಿಯೂರಪ್ಪ ಅವರ ಮಗನಾಗಿರುವುದು ಹಾಗೂ ಪಕ್ಷದ ರಾಜ್ಯಾಧ್ಯಕ್ಷನಾಗಿರುವುದು ನನ್ನ ಪೂರ್ವಜನ್ಮದ ಪುಣ್ಯ ಎಂದು ಹೇಳಿದರು.
ರಾಜ್ಯಾಧ್ಯಕ್ಷ ಸ್ಥಾನ ನನಗೆ ಸಿಗುತ್ತದೆ ಎಂದು ಯಾರೂ ಭಾವಿಸಿರಲಿಲ್ಲ, ಬಿಜೆಪಿ ಪಕ್ಷ ಯಾವುದೇ ಒಂದು ಜಾತಿಗೆ ಸೀಮಿತವಾಗಿಲ್ಲ. ಅನೇಕ ಮಂದಿ ಅಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡಿದ್ದಾರೆ ಎಂದು ತಿಳಿಸಿದರು.
ಸ್ವಾರ್ಥಕ್ಕಾಗಿ ಮಿತ್ರ ಪಕ್ಷಗಳು ಇಂಡಿಯಾ ಮೂಲಕ ಒಂದಾಗುತ್ತಿದೆ. ಈ ಮಿತ್ರ ಕೂಟಕ್ಕೆ ದೇಶದ ಬಗ್ಗೆ ಕಾಳಜಿಯಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದು ಆರು ತಿಂಗಳಾಗಿದೆ. ಶಾಸಕರಿಗೆ ಒಂದು ರೂಪಾಯಿ ಅನುದಾನ ಕೊಡಲು ಯೋಗ್ಯತೆ ಇಲ್ಲ ಎಂದರು.
ಕರ್ನಾಟಕಕ್ಕೆ ನನ್ನ ಪರಿಚಯಿಸಿದ್ದು ವರುಣ ಕ್ಷೇತ್ರ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಪಡೆಯಬೇಕು. ಇಲ್ಲಿನ ಕಾರ್ಯಕರ್ತರು ಅನೇಕ ವರ್ಷಗಳಿಂದ ತಮ್ಮ ನಾಯಕರ ಗೆಲುವಿಗೆ ಶ್ರಮಿಸಿದ್ದಾರೆ. ಹೀಗಾಗಿ ಮೊದಲು ಮೈಸೂರಿನಿಂದ ಪ್ರವಾಸವನ್ನು ಕೈಗೊಂಡಿದ್ದೇನೆ ಎಂದು ತಿಳಿಸಿದರು.
ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ಮಾಜಿ ಸಚಿವ ಎನ್.ಮಹೇಶ್ ಉಪಸ್ಥಿತರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--
Latest News
others
agriculture
others
others
politics