ಶ್ರೀರಾಮನ ಅವಹೇಳನ ಆರೋಪ..ಶಿಕ್ಷಕಿ ಅಮಾನತು..!
ಶ್ರೀರಾಮನ ಅವಹೇಳನ ಆರೋಪ..ಶಿಕ್ಷಕಿ ಅಮಾನತು..!

ಮಂಗಳೂರು, (ಫೆ.12): ಹಿಂದೂಗಳ ಆರಾಧ್ಯದೈವ ಶ್ರೀರಾಮನ ಅವಹೇಳನ ಮಾಡಿದ ಆರೋಪ ಹಿನ್ನಲೆಯಲ್ಲಿ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ.

ಶಿಕ್ಷಕಿ ಸಿಸ್ಟರ್‌ ಪ್ರಭಾ ಎನ್ನುವವರು ಫೆ.8 ರಂದು ಎಂಬ ಪಾಠ ಮಾಡುವ ವೇಳೆ ಹಿಂದೂ ಧರ್ಮದ ವಿರುದ್ಧ ಹಿಂದೂ ದೇವರುಗಳ ಬಗ್ಗೆ, ನಮ್ಮ ದೇಶದ ಪ್ರಧಾನಿಗಳ ಬಗ್ಗೆ ಹಾಗೂ ಹಿಂದೂ ಧರ್ಮದ ಅಸ್ತಿತ್ವದ ಬಗ್ಗೆ ಪ್ರಶ್ನಿಸಿ, ಹಿಂದೂ ಧರ್ಮವನ್ನು ನಿಂದಿಸಿ, ಹೀಯಾಳಿಸಿ, ತುಚ್ಛವಾಗಿ ಕೆಟ್ಟ ಶಬ್ದಗಳನ್ನು ಪ್ರಯೋಗಿಸಿದ್ದರು ಎಂದು ಆರೋಪಿಸಲಾಗಿದೆ.

ಈ ಹಿನ್ನಲೆಯಲ್ಲಿ ದೇವರಿಗೆ ಅವಹೇಳನ ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಇಂದು ಪೋಷಕರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಸ್ಥಳಕ್ಕೆ ಆಗಮಿಸಿದ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿಯನ್ನು ಅಮಾನತು ಮಾಡಿದ್ದಾಗಿ ತಿಳಿಸಿದ್ದಾರೆ.

ಅಧಿಕೃತವಾಗಿ ಲಿಖಿತವಾಗಿ ಶಾಲೆಯ ಲೆಟರ್ ಹೆಡ್​ನಲ್ಲಿ ಅಮಾನತ್ತಿನ ಬಗ್ಗೆ ಸ್ಪಷ್ಟನೆ ನೀಡಲಾಗಿದ್ದು, ಮುಂದೆ ಶಿಕ್ಷಣ ಇಲಾಖೆ ಪ್ರಕರಣದ ಆಂತರಿಕ ತನಿಖೆ ನಡೆಸಲಿದೆ. ಶಿಕ್ಷಣ ಇಲಾಖೆ ತನಿಖಾ ವರದಿ ಆಧಾರದ ಮೇಲೆ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--