ದೊಡ್ಡಬಳ್ಳಾಪುರ, (ಫೆ.12); ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಸಮಾಜಕಲ್ಯಾಣ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಆರೂಢಿ ಗ್ರಾಮ ಪಂಚಾಯಿತಿ, ಸಾಸಲು ಗ್ರಾಮಪಂಚಾಯಿತಿ, ಸಕ್ಕರೆ ಗೊಲ್ಲಹಳ್ಳಿ ಪಂಚಾಯಿತಿ ಯಲ್ಲಿ ಇಂದು ಸಂವಿಧಾನ ಜಾಗೃತಿ ಜಾಥ ಮೆರವಣಿಗೆ ನಡೆಸಲಾಯಿತು.
ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಸಂವಿಧಾನ ಜಾಗೃತಿ ಜಾಥಾ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಿ, ವಿವಿಧ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಊರಿನ ಮಹಿಳೆಯರು ಕಳಶ ಹೊರುವ ಮೂಲಕ, ಶಾಲಾ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಸಾಗಿದರು.
ಊರಿನ ಗ್ರಾಮಸ್ಥರಿಗೆ ಸಂವಿಧಾನ ಪೀಠಿಕೆ ಬೋಧಿಸಿ, ಸಂವಿಧಾನ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಆರೂಢಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾಗರತ್ನಮ್ಮ, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಲ್ಲೇಶ್, ಮುಖ್ಯಶಿಕ್ಷಕರರಾದ ಸುದರ್ಶನ್ ಬಾಬು, ಸಿದ್ದರಾಮಯ್ಯ, ಸಾಸಲು ಗ್ರಾಮಪಂಚಾಯಿತಿ ಅಧ್ಯಕ್ಷರಾದ ನಂದಿನಿ, ಉಪಾಧ್ಯಕ್ಷರಾದ ಲಕ್ಷ್ಮೀ ದೇವಮ್ಮ, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿರುಪತಿ, ನೋಡಲ್ ಅಧಿಕಾರಿ ಸುನಿಲ್ ಜಿ.ಎನ್, ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹನುಮಯ್ಯ, ಉಪಾಧ್ಯಕ್ಷರಾದ ದಿವ್ಯಶ್ರೀ ತಿಮ್ಮೇಗೌಡ, ನೋಡಲ್ ಅಧಿಕಾರಿ ರಾಜಶೇಖರ ಬಿ.ಎಸ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುನಿರಾಜು ಸೇರಿದಂತೆ ದೊಡ್ಡಬಳ್ಳಾಪುರ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಉಮಾಪತಿ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಆಯಾ ಗ್ರಾಮಪಂಚಾಯಿತಿ ವ್ಯಾಪ್ತಿಯ ಸದಸ್ಯರು, ಮುಖಂಡರು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
crime
crime
crime
crime
politics
crime
others
crime
others
others
crime
others
others
others
others
crime
education
crime
crime
others
crime
education
others
others
crime
economy
crime
sports
others