ಇದು ಕೇವಲ ಟ್ರೇಲರ್ ಮಾತ್ರ.. ಭಾಷಣದ ಮಧ್ಯೆ ವೈಲೆಂಟ್ ಆದ ಪ್ರಧಾನಿ‌ ಮೋದಿ
ಇದು ಕೇವಲ ಟ್ರೇಲರ್ ಮಾತ್ರ.. ಭಾಷಣದ ಮಧ್ಯೆ ವೈಲೆಂಟ್ ಆದ ಪ್ರಧಾನಿ‌ ಮೋದಿ

ಕೋಟಪುಟ್ಲಿ (ಏ.02): ನನ್ನ ಜನ್ಮ ಮೋಜು ಮಾಡಲು ಆಗಿ ಅಲ್ಲದೆ, ದೇಶದ ಅಭಿವೃದ್ಧಿ ಮತ್ತು ಜನರ ಕನಸುಗಳನ್ನು ಈಡೇರಿಸುವುದೇ ನನ್ನ ಗುರಿಯಾಗಿದೆ.  ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಡುಗಿದ್ದಾರೆ.

ಲೋಕಸಭಾ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ರಾಜಸ್ಥಾನದ ಕೋಟಪುಟ್ಟಿಯಲ್ಲಿ ಇಂದು ಬಿಜೆಪಿ ಆಯೋಜಿಸಿದ್ದ ಶಂಕನಾದ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶ್ರಮಪಡುವ ಸಲುವಾಗಿಯೇ ಮೋದಿ ಹುಟ್ಟಿದ್ದಾನೆ. ದೇಶದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ಆಗಲಿವೆ. ಕಳೆದ ಹತ್ತು ವರ್ಷಗಳಲ್ಲಿ ಏನು ಆಗಿದೆಯೋ ಅದು ಕೇವಲ ಟ್ರೇಲರ್ ಮಾತ್ರ ಎಂದಿದ್ದಾರೆ.

ಕಾಂಗ್ರೆಸ್‌ನ ಹತ್ತು ವರ್ಷಗಳ ಅವಧಿಯನ್ನು ಬಿಜೆಪಿಯ ಹತ್ತು ವರ್ಷಗಳ ಅವಧಿಯೊಂದಿಗೆ ಹೋಲಿಸಿದ ಪ್ರಧಾನಿ ಮೋದಿ, ಭ್ರಷ್ಟಾಚಾರವನ್ನು ಸಂಪೂರ್ಣ ನಿರ್ಮೂಲನೆಗೊಳಿಸಿ ಆತ್ಮನಿರ್ಭರ ಭಾರತದ ನಿರ್ಮಾಣದ ಕಲ್ಪನೆ ನನ್ನ ಕನಸು. ಕಾಂಗ್ರೆಸ್‌ ಹಾಗೂ ವಿರೋಧ ಪಕ್ಷಗಳ ಇಂಡಿ ಮೈತ್ರಿಕೂಟವು ದೇಶಕ್ಕಾಗಿ ಚುನಾವಣೆ ಎದುರಿಸುತ್ತಿಲ್ಲ. ಬದಲಿಗೆ ತಮ್ಮ ಸ್ವಾರ್ಥ ಸಾಧನೆಗಾಗಿ ಸ್ಪರ್ಧೆಯಲ್ಲಿದ್ದಾರೆ. 

ಇದೇ ಮೊದಲ ಬಾರಿಗೆ ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಗೆಲ್ಲುವ ಮಾತುಗಳನ್ನಾಡುತ್ತಿಲ್ಲ. ಬದಲಿಗೆ ಬಿಜೆಪಿ ಗೆದ್ದರೆ ಅಪಾಯ ಎದುರಾಗಲಿದೆ ಎಂದು ಪ್ರಚಾರ ಮಾಡುತ್ತಿದ್ದಾರೆ‌ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....