ಚನ್ನಪಟ್ಟಣದಲ್ಲಿ ಅಮಿತ್ ಶಾ ರೋಡ್ ಶೋ.. ಮುಗಿಲು ಮುಟ್ಟಿದ ಜೈಶ್ರೀರಾಮ್, ಭಾರತ್ ಮಾತಾಕಿ ಜೈ ಘೋಷಣೆ
ಚನ್ನಪಟ್ಟಣದಲ್ಲಿ ಅಮಿತ್ ಶಾ ರೋಡ್ ಶೋ.. ಮುಗಿಲು ಮುಟ್ಟಿದ ಜೈಶ್ರೀರಾಮ್, ಭಾರತ್ ಮಾತಾಕಿ ಜೈ ಘೋಷಣೆ

ರಾಮನಗರ, (ಏ.02); ಲೋಕಸಭಾ ಚುನಾವಣೆ ಹಿನ್ನೆಲೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಇಂದು ಸಂಜೆ ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಿದ್ದಾರೆ. 

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರ ಪರವಾಗಿ ಅಮಿತ್ ಶಾ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದ್ದಾರೆ.

ಸಂಜೆ 6:45ಕ್ಕೆ ಸರಿಯಾಗಿ ಪ್ರಾರಂಭವಾದ ರೋಡ್ ಶೋ ನಗರದ ಮಂಗಳವಾರಪೇಟೆಯಿಂದ ಚನ್ನಪಟ್ಟಣದ ಡಿ.ಟಿ.ರಾಮು ವೃತ್ತದವರೆಗೂ ಸಾಗಿತು.

ರೋಡ್ ಶೋ ವೇಳೆ ನಾಯಕರನ್ನು ಕಾಣಲು ಭಾರೀ ಸಂಖ್ಯೆಯಲ್ಲಿ ಜನರು ನೆರೆದಿದ್ದರು. 

ರೋಡ್ ಶೋ ಉದ್ದಕ್ಕೂ ಜೈಶ್ರೀರಾಮ್, ಭಾರತ್ ಮಾತಾಕಿ ಜೈ ಘೋಷಣೆಗಳು ಮೊಳಗಿದವು. ನೆರೆದಿದ್ದ ಜನರು ಪುಷ್ಪವೃಷ್ಟಿ ಸುರಿಸುವ ಮೂಲಕ ಅಮಿತ್ ಶಾ ಅವರಿಗೆ ಸ್ವಾಗತ ಕೋರಿದರು.

ಕೇಂದ್ರ ಗೃಹಸಚಿವರಿಗೆ ಸಿಎನ್ ಮಂಜುನಾಥ್, ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಚಿವ ಸಿಪಿ ಯೋಗೇಶ್ವರ್, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಇತರ ನಾಯಕರು ಸಾಥ್ ನೀಡಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....