ಮಂಡ್ಯದಲ್ಲಿಂದು ಸುಮಲತಾ ಮಹತ್ವದ ಸಭೆ: ದರ್ಶನ್, ಅಭಿಷೇಕ್ ಸಾಥ್
ಮಂಡ್ಯದಲ್ಲಿಂದು ಸುಮಲತಾ ಮಹತ್ವದ ಸಭೆ: ದರ್ಶನ್, ಅಭಿಷೇಕ್ ಸಾಥ್

ಮಂಡ್ಯ, (ಏ.03): ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಟಿಕೆಟ್ ವಂಚಿತ ಸಂಸದೆ ಸುಮಲತಾ ಅಂಬರೀಶ್ ಬುಧವಾರ ನಗರದಲ್ಲಿ ಬೆಂಬಲಿಗರು, ಕಾರ್ಯಕರ್ತರ ಸಭೆ ಕರೆದಿದ್ದಾರೆ. 

ಸುಮಲತಾ ಅವರ ಮುಂದಿನ ರಾಜಕೀಯ ನಡೆ ಬಗ್ಗೆ ನಿರ್ಧಾರ ಕೈಗೊಳ್ಳಲಿರುವ ಈ ಸಭೆ ತೀವ್ರ ಕುತೂಹಲ ಕೆರಳಿಸಿದೆ.

ಇಂದು ಬೆಳಗ್ಗೆ 10ಕ್ಕೆ ನಗರದ ಶ್ರೀ ಕಾಳಿಕಾಂಬ ದೇವಾಲಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಸಭೆಗೆ ಆಗಮಿಸಲಿದ್ದಾರೆ. 

ನಟ ದರ್ಶನ್ ಮತ್ತು ಅಭಿಷೇಕ್ ಅಂಬರೀಶ್ ಕೂಡ ಸಭೆಯಲ್ಲಿ ಪಾಲ್ಗೊಳ್ಳುವರು. ಸಂಸದೆಯಾಗಿ 5 ವರ್ಷಗಳ ಕಾಲ ಜಿಲ್ಲೆ ಯ ಅಭಿವೃದ್ಧಿ ಕಾರ್ಯ ಗಳ ಸಾಕ್ಷ್ಯಚಿತ್ರವನ್ನು ದರ್ಶನ್ ಇದೇ ಸಮಯದಲ್ಲಿ ಬಿಡುಗಡೆ ಮಾಡುವರು

ಸಂದೇಶ; ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. 

ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ.  ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ.

ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ.

ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು. ಯಾವತ್ತೂ ಅದು ಹಾಗೆಯೇ ಇರಲಿ ಎಂದು ಆಶಿಸುವೆ.

ನಾಳೆ (ಏಪ್ರಿಲ್ 3) ಬೆಳಗ್ಗೆ 10 ಗಂಟೆಗೆ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟ ಪಡಿಸುವ ಹಾಗೂ ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ. ಅಂದು ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್, ಅಭಿಷೇಕ್ ಅಂಬರೀಶ್ ಇರಲಿದ್ದಾರೆ.

ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ ಎಂದು ಟ್ವಿಟ್ ಮೂಲಕ ಅಭಿಮಾನಿಗಳಿಗೆ ಸಂದೇಶ ಬರೆದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

politics

HL

economy

HL

economy

HL

economy

HL

crime

HL

others

HL

others

HL

others

HL

others

HL

others

HL

politics

HL

others

HL

sports

HL

others

HL

others

HL

education

HL

politics

HL

economy

HL

politics

HL

sports

HL

others

HL

economy

HL

others

HL

others

HL

crime

HL

education

HL

others

HL

politics